Istanbul Blast: ಟರ್ಕಿಯ ಇಸ್ತಾಂಬುಲ್ ಸ್ಫೋಟ ಪ್ರಕರಣ; ಬಾಂಬ್ ಇಟ್ಟ ಶಂಕಿತನ ಬಂಧನ

ಇಸ್ತಾಂಬುಲ್‌ನಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ 6 ಜನರು ಸಾವನ್ನಪ್ಪಿದ್ದಾರೆ ಮತ್ತು 81 ಮಂದಿ ಗಾಯಗೊಂಡಿದ್ದಾರೆ. ಈ ದುರಂತಕ್ಕೆ ಕಾರಣವಾದ ಶಂಕಿತನನ್ನು ಟರ್ಕಿಶ್ ಪೊಲೀಸರು ಬಂಧಿಸಿದ್ದಾರೆ.

Istanbul Blast: ಟರ್ಕಿಯ ಇಸ್ತಾಂಬುಲ್ ಸ್ಫೋಟ ಪ್ರಕರಣ; ಬಾಂಬ್ ಇಟ್ಟ ಶಂಕಿತನ ಬಂಧನ
ಟರ್ಕಿ ಪೊಲೀಸ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Nov 14, 2022 | 10:12 AM

ಇಸ್ತಾಂಬುಲ್: ಟರ್ಕಿಯ ಇಸ್ತಾಂಬುಲ್‌ನಲ್ಲಿ ನಡೆದ ಬಾಂಬ್ ಸ್ಫೋಟಕ್ಕೆ (Bomb Blast) ಕಾರಣವಾದ ಬಾಂಬ್ ಅನ್ನು ಇಟ್ಟುಹೋದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಟರ್ಕಿಯ ಇಸ್ತಾಂಬುಲ್‌ನ (Istanbul Blast) ಪ್ರಸಿದ್ಧ ಇಸ್ತಿಕ್‌ಲಾಲ್ ಶಾಪಿಂಗ್ ಸ್ಟ್ರೀಟ್‌ನಲ್ಲಿ ಶನಿವಾರ ಮಾರಣಾಂತಿಕ ಸ್ಫೋಟ ಸಂಭವಿಸಿತ್ತು. ಈ ದುರಂತದಲ್ಲಿ 6 ಜನರು ಸಾವನ್ನಪ್ಪಿದ್ದು, 81 ಮಂದಿ ಗಾಯಗೊಂಡಿದ್ದರು. ಇಸ್ತಿಕ್‌ಲಾಲ್ ಶಾಪಿಂಗ್ ಸ್ಟ್ರೀಟ್‌ ಯಾವಾಗಲೂ ಪ್ರವಾಸಿಗರಿಂದ ತುಂಬಿರುವ ಸ್ಥಳವಾಗಿದ್ದರಿಂದ ಇದೇ ಪ್ರದೇಶವನ್ನು ಬಾಂಬ್ ಸ್ಫೋಟಕ್ಕೆ ಆಯ್ಕೆ ಮಾಡಿಕೊಳ್ಳಲಾಗಿತ್ತು.

ಟರ್ಕಿಯ ಅಧ್ಯಕ್ಷ ತಯ್ಯಿಪ್ ಎರ್ಡೋಗನ್ ಈ ಬಾಂಬ್ ದಾಳಿಯ ಹಿಂದೆ ಭಯೋತ್ಪಾದನೆಯ ಕೈವಾಡದ ಶಂಕೆಯಿದೆ ಎಂದು ಹೇಳಿದ್ದರು. ಇಸ್ತಾಂಬುಲ್‌ನಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ 6 ಜನರು ಸಾವನ್ನಪ್ಪಿದ್ದಾರೆ ಮತ್ತು 81 ಮಂದಿ ಗಾಯಗೊಂಡಿದ್ದಾರೆ. ಈ ದುರಂತಕ್ಕೆ ಕಾರಣವಾದ ಶಂಕಿತನನ್ನು ಟರ್ಕಿಶ್ ಪೊಲೀಸರು ಬಂಧಿಸಿದ್ದಾರೆ ಎಂದು ಸರ್ಕಾರಿ ಅನಾಡೋಲು ಏಜೆನ್ಸಿ ವರದಿ ಮಾಡಿದೆ.

ಇದನ್ನೂ ಓದಿ: Istanbul Blast: ಟರ್ಕಿಯ ಇಸ್ತಾಂಬುಲ್​ನಲ್ಲಿ ಮಹಿಳಾ ಉಗ್ರರಿಂದ ಬಾಂಬ್ ಸ್ಫೋಟ; 6 ಜನ ಸಾವು, 81 ಮಂದಿಗೆ ಗಾಯ

“ಈ ಭೀಕರ ಭಯೋತ್ಪಾದಕ ದಾಳಿಗೆ ಕಾರಣರಾದವರ ವಿರುದ್ಧ ನಾವು ಪ್ರತೀಕಾರ ತೀರಿಸಿಕೊಳ್ಳುತ್ತೇವೆ” ಎಂದು ಟರ್ಕಿಶ್ ಅಧಿಕಾರಿಗಳು ಹೇಳಿದ್ದಾರೆ. ಟರ್ಕಿಯ ಉಪಾಧ್ಯಕ್ಷ ಫುವಾಟ್ ಒಕ್ಟೇ ರಾಷ್ಟ್ರವನ್ನುದ್ದೇಶಿಸಿ ಮಾತನಾಡುತ್ತಾ, ಮಹಿಳಾ ಭಯೋತ್ಪಾದಕರು ಶಾಪಿಂಗ್ ಮಾರುಕಟ್ಟೆಯಲ್ಲಿ ಬಾಂಬ್ ಸ್ಫೋಟಿಸಿರುವ ಶಂಕೆ ಇದೆ ಎಂದು ಹೇಳಿದ್ದರು.

ಇದುವರೆಗೂ ಯಾವುದೇ ಭಯೋತ್ಪಾದಕ ಸಂಘಟನೆಗಳು ಬಾಂಬ್ ಸ್ಫೋಟದ ಹೊಣೆ ಹೊತ್ತುಕೊಂಡಿಲ್ಲ. ಮಹಿಳೆಯೊಬ್ಬರು ಸುಮಾರು 40 ನಿಮಿಷಗಳ ಕಾಲ ಬೆಂಚ್ ಮೇಲೆ ಕುಳಿತಿರುವುದು ಸಿಸಿಟಿವಿಯಲ್ಲಿ ಕಂಡುಬಂದಿದೆ. ಆಕೆ ಈ ಬಾಂಬ್ ಸ್ಫೋಟ ನಡೆಯುವುದಕ್ಕೂ ಕೆಲವೇ ನಿಮಿಷಗಳ ಮೊದಲು ಆ ಜಾಗದಿಂದ ಹೊರಟುಹೋಗಿದ್ದಾರೆ. ಇಬ್ಬರು ಪುರುಷ ದಾಳಿಕೋರರು ಸಹ ಆ ಮಹಿಳೆಯೊಂದಿಗೆ ಸೇರಿ ಈ ಕೃತ್ಯ ಎಸಗಿರುವ ಅನುಮಾನ ವ್ಯಕ್ತವಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ