AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಯೋತ್ಪಾದನೆ ನಿಮ್ಮನ್ನೂ ಕಾಡಬಹುದು; ಪಾಶ್ಚಿಮಾತ್ಯ ದೇಶಗಳಿಗೆ ಸಚಿವ ಜೈಶಂಕರ್ ಎಚ್ಚರಿಕೆ

ಪಾಕಿಸ್ತಾನ ಮೂಲದ ಭಯೋತ್ಪಾದನೆಯನ್ನು ನಿರ್ಲಕ್ಷಿಸುವುದನ್ನು ಮುಂದುವರಿಸಿದರೆ ಭಯೋತ್ಪಾದನೆ ಒಂದು ದಿನ ನಿಮ್ಮನ್ನು ಕೂಡ ಕಾಡುತ್ತದೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಪಶ್ಚಿಮದ ದೇಶಗಳಿಗೆ ಎಚ್ಚರಿಕೆ ನೀಡಿದ್ದಾರೆ. ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆ ಕೇವಲ ಭಾರತದ ಸಮಸ್ಯೆಯಲ್ಲ, ಅದೊಂದು ಜಾಗತಿಕ ಸಮಸ್ಯೆಯಾಗಿದೆ ಎಂದು ಜೈಶಂಕರ್ ಒತ್ತಿ ಹೇಳಿದರು.

ಭಯೋತ್ಪಾದನೆ ನಿಮ್ಮನ್ನೂ ಕಾಡಬಹುದು; ಪಾಶ್ಚಿಮಾತ್ಯ ದೇಶಗಳಿಗೆ ಸಚಿವ ಜೈಶಂಕರ್ ಎಚ್ಚರಿಕೆ
Minister Jaishankar
Follow us
ಸುಷ್ಮಾ ಚಕ್ರೆ
|

Updated on: Jun 11, 2025 | 7:56 PM

ಬ್ರಸೆಲ್ಸ್, ಜೂನ್ 11: ಯುರೋಪಿಯನ್ ಒಕ್ಕೂಟದ (ಇಯು) ನಾಯಕರನ್ನು ಭೇಟಿ ಮಾಡಲು ಪ್ರಸ್ತುತ ಬ್ರಸೆಲ್ಸ್‌ನಲ್ಲಿರುವ ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ (S Jaishankar), ಕಾಶ್ಮೀರದಲ್ಲಿ ನಡೆದ ಭಯೋತ್ಪಾದನಾ ದಾಳಿಯ ನಂತರ ಪಾಕಿಸ್ತಾನದ (Pakistan) ವಿರುದ್ಧ ಭಾರತ ತೆಗೆದುಕೊಂಡ ಕ್ರಮವನ್ನು ಭಾರತ ವರ್ಸಸ್ ಭಯೋತ್ಪಾದನೆ ಸಮಸ್ಯೆಯಾಗಿ ನೋಡಬೇಕೇ ವಿನಃ ಇದು ಎರಡು ನೆರೆಯ ರಾಷ್ಟ್ರಗಳ ನಡುವಿನ ಕೇವಲ ಗಡಿ ಸಂಘರ್ಷವಲ್ಲ ಎಂದು ಪಶ್ಚಿಮ ರಾಷ್ಟ್ರಗಳನ್ನು ಉದ್ದೇಶಿಸಿ ಹೇಳಿದ್ದಾರೆ. ಯುರೋಪಿಯನ್ ಸುದ್ದಿ ವೆಬ್‌ಸೈಟ್ ಯುರಾಕ್ಟಿವ್‌ನೊಂದಿಗೆ ಮಾತನಾಡಿದ ಸಚಿವ ಜೈಶಂಕರ್, ಪಾಕಿಸ್ತಾನ ಭಯೋತ್ಪಾದನೆ ಜೊತೆ ಹೊಂದಿರುವ ಸಂಬಂಧವನ್ನು ನಿರ್ಲಕ್ಷ್ಯಿಸಿದರೆ ಮುಂದೊಂದು ದಿನ ಅದು ನಿಮ್ಮನ್ನು ಕೂಡ ಕಾಡುತ್ತದೆ ಎಂದಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಆಪರೇಷನ್ ಸಿಂಧೂರ್ ಅಡಿಯಲ್ಲಿ ಭಾರತದ ಕ್ರಮಗಳನ್ನು ಎರಡು ಪರಮಾಣು ಶಸ್ತ್ರಸಜ್ಜಿತ ನೆರೆಹೊರೆಯವರ ನಡುವಿನ ದ್ವೇಷ ಎಂದು ಬಿಂಬಿಸಿದ್ದಕ್ಕಾಗಿ ಜೈಶಂಕರ್ ಅಂತಾರಾಷ್ಟ್ರೀಯ ಮಾಧ್ಯಮಗಳನ್ನು ಟೀಕಿಸಿದರು. “ನಾನು ನಿಮಗೆ ಒಂದು ವಿಷಯವನ್ನು ನೆನಪಿಸುತ್ತೇನೆ. ಒಸಾಮಾ ಬಿನ್ ಲಾಡೆನ್ ಎಂಬ ವ್ಯಕ್ತಿ ಇದ್ದ. ಆತ ವೆಸ್ಟ್ ಪಾಯಿಂಟ್‌ನ ಪಕ್ಕದಲ್ಲಿರುವ ಪಾಕಿಸ್ತಾನಿ ಮಿಲಿಟರಿ ಪಟ್ಟಣದಲ್ಲಿ ಹಲವು ವರ್ಷಗಳ ಕಾಲ ಸುರಕ್ಷಿತವಾಗಿ ವಾಸಿಸುತ್ತಿದ್ದ. ಇದಕ್ಕೆ ಕಾರಣವೇನು? ಪಾಕಿಸ್ತಾನವೇ ತನಗೆ ಸೇಫ್ ಜಾಗ ಎಂದು ಆತ ಭಾವಿಸಿದ್ದೇಕೆ? ಈ ಬಗ್ಗೆ ಜಗತ್ತು ಅರ್ಥಮಾಡಿಕೊಳ್ಳಬೇಕೆಂದು ನಾನು ಬಯಸುತ್ತೇನೆ. ಇದು ಕೇವಲ ಭಾರತ-ಪಾಕಿಸ್ತಾನದ ಸಮಸ್ಯೆಯಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ನಾವು ಪಾಕಿಸ್ತಾನದೊಳಗೆ ದಾಳಿ ಮಾಡಲು ಹಿಂಜರಿಯುವುದಿಲ್ಲ; ಬೆಲ್ಜಿಯಂನಲ್ಲಿ ಸಚಿವ ಜೈಶಂಕರ್ ಎಚ್ಚರಿಕೆ

ಇದನ್ನೂ ಓದಿ
Image
ವಿದೇಶಕ್ಕೆ ತೆರಳಿದ್ದ ವಿವಿಧ ಪಕ್ಷಗಳ ನಾಯಕರ ಜೊತೆ ಪ್ರಧಾನಿ ಮೋದಿ ಔತಣಕೂಟ
Image
ನಾವು ಪಾಕಿಸ್ತಾನದೊಳಗೆ ದಾಳಿ ಮಾಡಲು ಹಿಂಜರಿಯುವುದಿಲ್ಲ; ಜೈಶಂಕರ್ ಎಚ್ಚರಿಕೆ
Image
ಆ ಒಂದೇ ಒಂದು ತಪ್ಪಿನಿಂದ ಸಿಕ್ಕಿಬಿದ್ದ ರಾಜಾ ರಘುವಂಶಿ ಪತ್ನಿ ಸೋನಂ
Image
ಲೋಕಸಭೆಗೆ ಉಪಸಭಾಪತಿ ಆಯ್ಕೆ ಮಾಡುವಂತೆ ಪ್ರಧಾನಿ ಮೋದಿಗೆ ಖರ್ಗೆ ಪತ್ರ

ಉಕ್ರೇನ್ ಮೇಲೆ ಪೂರ್ಣ ಪ್ರಮಾಣದ ಆಕ್ರಮಣ ಮಾಡಿದ ನಂತರ ರಷ್ಯಾವನ್ನು ನಿಷೇಧಿಸುವಲ್ಲಿ ಭಾರತವು EU ಮತ್ತು ಇತರ ಪಾಶ್ಚಿಮಾತ್ಯ ರಾಷ್ಟ್ರಗಳೊಂದಿಗೆ ಏಕೆ ಸೇರಲಿಲ್ಲ ಎಂದು ಕೇಳಿದಾಗ, ವಿದೇಶಾಂಗ ಸಚಿವ ಜೈಶಂಕರ್ ಭಾರತದ ನಿಲುವನ್ನು ಪುನರುಚ್ಚರಿಸಿದರು. ಯುದ್ಧಗಳ ಮೂಲಕ ಶಾಂತಿ ನೆಲೆಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯನ್ನು ನಿರ್ಲಕ್ಷಿಸುವುದನ್ನು ಮುಂದುವರಿಸಿದರೆ ಭಯೋತ್ಪಾದನೆ ಒಂದು ದಿನ ನಿಮ್ಮನ್ನು ಕೂಡ ಕಾಡುತ್ತದೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಪಾಶ್ಚಿಮಾತ್ಯ ದೇಶಗಳಿಗೆ ಎಚ್ಚರಿಕೆ ನೀಡಿದ್ದಾರೆ. ಪ್ರಾದೇಶಿಕ ಆಕ್ರಮಣದ ಬಗ್ಗೆ ಅವರು ದ್ವಿಮುಖ ನೀತಿಯನ್ನು ಸಹ ಎತ್ತಿ ತೋರಿಸಿದ್ದಾರೆ, ಅಲ್ಲಿ ಭಾರತ ರಷ್ಯಾವನ್ನು ಖಂಡಿಸಬೇಕು. ಆದರೆ ಪಾಕಿಸ್ತಾನವು ಭಾರತದ ಪ್ರಾದೇಶಿಕ ಸಮಗ್ರತೆಯ ಉಲ್ಲಂಘನೆಯ ಬಗ್ಗೆ ಮೌನವಾಗಿರಬೇಕು ಎಂದು ರಾಷ್ಟ್ರಗಳು ಬಯಸುತ್ತವೆ ಎಂದಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನ ಅತ್ಯಂತ ಬಡತನದಲ್ಲಿದೆ; ವಿಶ್ವ ಬ್ಯಾಂಕ್ ಬಹಿರಂಗಪಡಿಸಿದ ಆಘಾತಕಾರಿ ಮಾಹಿತಿ ಇಲ್ಲಿದೆ

ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆ ಕೇವಲ ಭಾರತದ ಸಮಸ್ಯೆಯಲ್ಲ, ಅದೊಂದು ಜಾಗತಿಕ ಸಮಸ್ಯೆಯಾಗಿದೆ ಎಂದು ಜೈಶಂಕರ್ ಒತ್ತಿ ಹೇಳಿದರು. ಅಕ್ಟೋಬರ್ 1947ರಲ್ಲಿ ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರವನ್ನು ಆಕ್ರಮಿಸಿತು. ಆ ಸಮಯದಲ್ಲಿ ಅದು ಭಾರತದೊಂದಿಗೆ ವಿಲೀನಕ್ಕಾಗಿ ಮಾತುಕತೆ ನಡೆಸುತ್ತಿತ್ತು. ಜಮ್ಮು ಮತ್ತು ಕಾಶ್ಮೀರ ಭಾರತಕ್ಕೆ ಸೇರ್ಪಡೆಯಾದ ನಂತರವೂ ಪಾಕಿಸ್ತಾನ ಆಕ್ರಮಣವನ್ನು ಮುಂದುವರೆಸಿತು. ಭಾರತ ಮತ್ತು ಪಾಕಿಸ್ತಾನ ಪೂರ್ಣ ಪ್ರಮಾಣದ ಯುದ್ಧವನ್ನು ನಡೆಸಿದವು. ಪಾಕಿಸ್ತಾನ ಇಂದಿಗೂ ಜಮ್ಮು ಕಾಶ್ಮೀರದ ಕೆಲವು ಭಾಗಗಳನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ತುಮಕೂರು: ಹಾಡಹಗಲೇ ಕಾರಿನ ಗಾಜು ಒಡೆದು 1 ಲಕ್ಷ ರೂ. ಕಳವು
ತುಮಕೂರು: ಹಾಡಹಗಲೇ ಕಾರಿನ ಗಾಜು ಒಡೆದು 1 ಲಕ್ಷ ರೂ. ಕಳವು
ದರ್ಶನ್ ಮನೆ ಪಕ್ಕವೇ ನಾಗಶೇಖರ್ ಮನೆ; ಹೇಗಿದೆ ಇಬ್ಬರ ನಡುವಿನ ನಂಟು?
ದರ್ಶನ್ ಮನೆ ಪಕ್ಕವೇ ನಾಗಶೇಖರ್ ಮನೆ; ಹೇಗಿದೆ ಇಬ್ಬರ ನಡುವಿನ ನಂಟು?
ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ
ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ
ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ
ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ
ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ
ಮನೆಗೆ ನುಗ್ಗಿ ವ್ಯಕ್ತಿಗೆ ಗುಂಡು ಹಾರಿಸಿ, ಹೆಂಡತಿ, ಮಕ್ಕಳ ಅಪಹರಣ
ಮನೆಗೆ ನುಗ್ಗಿ ವ್ಯಕ್ತಿಗೆ ಗುಂಡು ಹಾರಿಸಿ, ಹೆಂಡತಿ, ಮಕ್ಕಳ ಅಪಹರಣ
ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ
ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ
ಮೈಸೂರಿನಲ್ಲಿ ರಜನೀಕಾಂತ್ ನೋಡಲು ಜನಸಾಗರ: ವಿಡಿಯೋ ನೋಡಿ
ಮೈಸೂರಿನಲ್ಲಿ ರಜನೀಕಾಂತ್ ನೋಡಲು ಜನಸಾಗರ: ವಿಡಿಯೋ ನೋಡಿ