ಭವಿಷ್ಯದ ಕನಸು ಕಂಡಿದ್ದ 71 ಜನ ಸಮುದ್ರಪಾಲು: 32 ಜನರ ರಕ್ಷ ಣೆ

ಇಟಲಿ ಕರಾವಳಿಯಲ್ಲಿ ಭೀಕರ ಬೋಟ್ ದುರಂತ ಸಂಭವಿಸಿದ್ದು, ಯುರೋಪ್ ತಲುಪಲು ಯತ್ನಿಸುತ್ತಿದ್ದ 71 ವಲಸಿಗರು ನಾಪತ್ತೆಯಾಗಿದ್ದಾರೆ. ಲಿಬಿಯಾದಿಂದ ಹೊರಟಿದ್ದ ಬೋಟ್ ಮೆಡಿಟರೇನಿಯನ್ ಸಮುದ್ರದಲ್ಲಿ ಮುಳುಗಿದ್ದು, 32 ಜನರನ್ನು ರಕ್ಷಿಸಲಾಗಿದೆ. ಸಮುದ್ರದ ಪ್ರತಿಕೂಲ ಹವಾಮಾನದಿಂದಾಗಿ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಅಕ್ರಮ ವಲಸೆ ಮತ್ತು ಮಾನವ ಕಳ್ಳಸಾಗಣೆಯ ಅಪಾಯವನ್ನು ಈ ಘಟನೆ ಮತ್ತೊಮ್ಮೆ ಎತ್ತಿ ತೋರಿಸಿದೆ. ಅಂತರಾಷ್ಟ್ರೀಯ ಸಮುದಾಯದ ತುರ್ತು ಕ್ರಮ ಅಗತ್ಯ ಎಂದು ಹೇಳಲಾಗಿದೆ.

ಭವಿಷ್ಯದ ಕನಸು ಕಂಡಿದ್ದ 71 ಜನ ಸಮುದ್ರಪಾಲು: 32 ಜನರ ರಕ್ಷ ಣೆ
ಇಟಲಿಯಲ್ಲಿ ಭೀಕರ ಹಡಗು ದುರಂತ

Updated on: Apr 06, 2026 | 5:55 AM

ರೋಮ್, ಏ.6: ಭವಿಷ್ಯದ ಕನಸು ಹೊತ್ತು ಸಮುದ್ರ ಮಾರ್ಗದ ಮೂಲಕ ಯುರೋಪ್ ತಲುಪಲು ಯತ್ನಿಸುತ್ತಿದ್ದ ವಲಸಿಗರಿಗೆ ಮಹಾಮೃತ್ಯು ಎದುರಾಗಿದೆ. ಇಟಲಿ ಕರಾವಳಿಯಲ್ಲಿ ಸಂಭವಿಸಿದ ಭೀಕರ ಬೋಟ್ ದುರಂತದಲ್ಲಿ 71 ವಲಸಿಗರು ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗುವ ಆತಂಕ ಎದುರಾಗಿದೆ.

ಲಿಬಿಯಾದಿಂದ ಯುರೋಪ್‌ಗೆ ಹೊರಟಿದ್ದ ಈ ಬೋಟ್‌ನಲ್ಲಿ ಒಟ್ಟು 105 ಜನರಿದ್ದರು ಎಂದು ಬದುಕುಳಿದವರು ತಿಳಿಸಿದ್ದಾರೆ. ಈಸ್ಟರ್ ರಜಾದಿನಗಳ ಸಂದರ್ಭದಲ್ಲಿ ಈ ಪ್ರಯಾಣವನ್ನು ಮಾಡಲಾತ್ತು. ಸಂತೋಷದಿಂದ ರಜೆ ದಿನವನ್ನು ಕಳೆಯುವ ಎಂದವರಿಗೆ ದೊಡ್ಡ ಅಘಾತವೇ ಕಾಯುತ್ತಿತ್ತು.ಆದರೆ, ಮೆಡಿಟರೇನಿಯನ್ ಸಮುದ್ರದ ಭೀಕರ ಅಲೆಗಳು ಮತ್ತು ಪ್ರತಿಕೂಲ ಹವಾಮಾನದಿಂದಾಗಿ ಬೋಟ್ ಭಾಗಶಃ ಮುಳುಗಿದೆ ಎಂದು ಹೇಳಲಾಗಿದೆ

ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸಿ 32 ಜನರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿವೆ. ದುರದೃಷ್ಟವಶಾತ್ ಇಬ್ಬರ ಶವಗಳು ಪತ್ತೆಯಾಗಿದ್ದು, ಇನ್ನುಳಿದ 71 ಜನರ ಪತ್ತೆಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರುವುದರಿಂದ ಕಾರ್ಯಾಚರಣೆಗೆ ಅಡ್ಡಿಯುಂಟಾಗುತ್ತಿದೆ ಎಂದು ಇಟಲಿ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಇರಾನ್​ನ ಅಣು ವಿದ್ಯುತ್ ಸ್ಥಾವರಕ್ಕೆ ಹಾನಿ; ವಿಕಿರಣ ಸೋರಿಕೆಯಿಂದ ಗಲ್ಫ್ ರಾಷ್ಟ್ರಗಳಲ್ಲಿ ಸರ್ವನಾಶ?

ಮೆಡಿಟರೇನಿಯನ್ ಸಮುದ್ರವು ವಿಶ್ವದ ಅತ್ಯಂತ ಅಪಾಯಕಾರಿ ಪ್ರದೇಶವಾಗಿ ಮಾರ್ಪಟ್ಟಿದೆ. ಹಳೆಯ ಮತ್ತು ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರನ್ನು ತುಂಬಿದ ಬೋಟ್‌ಗಳ ಮೂಲಕ ನಡೆಯುವ ಇಂತಹ ಪ್ರಯಾಣಗಳು ಪದೇ ಪದೇ ಇಂತಹ ದುರಂತಗಳಿಗೆ ಕಾರಣವಾಗುತ್ತಿವೆ. ಅಕ್ರಮ ವಲಸೆಯನ್ನು ತಡೆಗಟ್ಟಲು ಮತ್ತು ಸುರಕ್ಷಿತ ಮಾರ್ಗಗಳನ್ನು ಕಲ್ಪಿಸಲು ಅಂತರಾಷ್ಟ್ರೀಯ ಸಮುದಾಯವು ತಕ್ಷಣ ಎಚ್ಚೆತ್ತುಕೊಳ್ಳಬೇಕಾದ ಅನಿವಾರ್ಯತೆ ಈ ಘಟನೆಯಿಂದ ಮತ್ತೊಮ್ಮೆ ಸಾಬೀತಾಗಿದೆ.

ವಿದೇಶ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:54 am, Mon, 6 April 26

ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Follow Us