ನಮ್ಮದೇ ತಪ್ಪು, ಭಾರತದೊಂದಿದೆ ಮಾಡಿಕೊಂಡಿದ್ದ ಒಪ್ಪಂದ ಉಲ್ಲಂಘಿಸಿದ್ದನ್ನು ಒಪ್ಪಿಕೊಂಡ ಪಾಕ್

|

Updated on: May 29, 2024 | 12:39 PM

ಪಾಕ್ ಭಾರತ ಜತೆಗೆ ಒಳ್ಳೆಯ ಸಂಬಂಧವನ್ನು ಬಯಸುತ್ತಿದೆ. ಅದಕ್ಕಾಗಿ ಈಗ ಒಂದೊಂದು ಸತ್ಯವನ್ನು ಒಪ್ಪಿಕೊಳ್ಳುತ್ತಿದೆ. ಇದೀಗ ಕಾರ್ಗಿಲ್​​ ಯುದ್ಧ ಬಗ್ಗೆ ಮಾಜಿ ಪ್ರಧಾನಿ ಸತ್ಯವೊಂದನ್ನು ಬಾಯಿಬಿಟ್ಟಿದ್ದಾರೆ. ಇದಕ್ಕೆಲ್ಲ ನಾವೇ ಕಾರಣ, ವಾಜಪೇಯಿ ಅಂದು ಮಾಡಿಕೊಂಡಿದ್ದ ಒಪ್ಪಂದವನ್ನು ನಾವೇ ಮುರಿದಿದ್ದು ಎಂದು ಒಪ್ಪಿಕೊಂಡಿದ್ದಾರೆ

ನಮ್ಮದೇ ತಪ್ಪು, ಭಾರತದೊಂದಿದೆ ಮಾಡಿಕೊಂಡಿದ್ದ ಒಪ್ಪಂದ ಉಲ್ಲಂಘಿಸಿದ್ದನ್ನು ಒಪ್ಪಿಕೊಂಡ ಪಾಕ್
Follow us on

ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ( ,Nawaz Sharif) ಅವರು ಒಂದು ಸತ್ಯವನ್ನು ಒಪ್ಪಿಕೊಂಡಿದ್ದಾರೆ. ಜನರಲ್ ಪರ್ವೇಜ್ ಮುಷರಫ್ ಅವರು 1999 ರಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರೊಂದಿಗೆ ಒಪ್ಪಂದವೊಂದಕ್ಕೆ ಸಹಿ ಮಾಡಿದ್ದರು. ಆ ಒಪ್ಪಂದವನ್ನು ಉಲ್ಲಂಘಿಸಿ ಕಾರ್ಗಿಲ್​​ನ ಮೂಲಕ ಭಾರತದ ಮೇಲೆ ದಾಳಿ ಮಾಡಿದ್ದೇವು ಎಂಬ ಬಗ್ಗೆ ಒಪ್ಪಿಕೊಂಡಿದ್ದಾರೆ. ಮೇ 28, 1998 ರಂದು, ಪಾಕಿಸ್ತಾನವು ಐದು ಪರಮಾಣು ಪರೀಕ್ಷೆಗಳನ್ನು ನಡೆಸಿತು. ಅದರ ನಂತರ ವಾಜಪೇಯಿ ಅವರು ಬಂದು ನಮ್ಮೊಂದಿಗೆ ಒಪ್ಪಂದ ಮಾಡಿಕೊಂಡರು. ಆದರೆ ನಾವು ಆ ಒಪ್ಪಂದವನ್ನು ಉಲ್ಲಂಘಿಸಿದ್ದೇವೆ ಎಂದು ಸತ್ಯ ಒಪ್ಪಿಕೊಂಡಿದ್ದಾರೆ.

ಈ ಒಪ್ಪಂದವನ್ನು ಉಲ್ಲಂಘಿಸಿದ್ದು ನಮ್ಮ ತಪ್ಪು ಎಂದು ಷರೀಫ್ ಪಿಎಂಎಲ್-ಎನ್ ಸಭೆಯಲ್ಲಿ ಹೇಳಿದರು. ಷರೀಫ್ ಅವರನ್ನು ಸರ್ವೋಚ್ಚ ನ್ಯಾಯಾಲಯವು ಅನರ್ಹಗೊಳಿಸಿದ ಆರು ವರ್ಷಗಳ ನಂತರ ಅವರನ್ನು ಆಡಳಿತ ಪಕ್ಷದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ. ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಸಭೆಯಲ್ಲಿ ಮಾತನಾಡಿದ್ದಾರೆ. ಈ ವೇಳೆ ಈ ಸತ್ಯವನ್ನು ಬಾಯಿಬಿಟ್ಟಿದ್ದಾರೆ. ನವಾಜ್ ಷರೀಫ್ ಮತ್ತು ವಾಜಪೇಯಿ ಅವರು ಫೆಬ್ರವರಿ 21, 1999 ರಂದು ಲಾಹೋರ್​​ನಲ್ಲಿ ಒಪ್ಪಂದವೊಂದಕ್ಕೆ ಸಹಿ ಹಾಕಿದರು. ಉಭಯ ದೇಶಗಳ ನಡುವಿನ ಶಾಂತಿ ಮತ್ತು ಸ್ಥಿರತೆಯ ದೃಷ್ಟಿಕೋನಕ್ಕೆ ಸಂಬಂಧಿಸಿದ ಒಪ್ಪಂದ ಇದ್ದಾಗಿತ್ತು.

ಈ ಒಪ್ಪಂದ ನಡೆದ ಕೆಲವು ತಿಂಗಳುಗಳ ನಂತರ ಜಮ್ಮು ಮತ್ತು ಕಾಶ್ಮೀರದ ಕಾರ್ಗಿಲ್ ಜಿಲ್ಲೆಯಲ್ಲಿ ಪಾಕಿಸ್ತಾನ ಅಕ್ರಮವಾಗಿ ದಾಳಿ ನಡೆಸಿತ್ತು, ಇದು ಕಾರ್ಗಿಲ್​​​ ಯುದ್ಧಕ್ಕೆ ಕಾರಣವಾಗಿತ್ತು. ಇದೇ ವೇಳೆ ಅಮೆರಿಕಾದ ಅಧ್ಯಕ್ಷ ಬಿಲ್ ಕ್ಲಿಂಟನ್ ಪಾಕಿಸ್ತಾನಕ್ಕೆ ಪರಮಾಣು ಪರೀಕ್ಷೆಗಳನ್ನು ನಡೆಸದಂತೆ ತಡೆಯಲು 5 ಬಿಲಿಯನ್ ಯುಎಸ್‌ಡಿ ನೀಡಿದ್ದರು, ಆದರೆ ನಾವು ಅದನ್ನು ನಿರಕಾರಿಸಿದ್ದೇವು. ಒಂದು ವೇಳೆ ಅಂದು ನನ್ನ ಸ್ಥಾನದಲ್ಲಿ ಇಮ್ರಾನ್ ಖಾನ್ ಇದ್ದಿದ್ದರೆ ಖಂಡಿತ ಆ ಹಣವನ್ನು ಸ್ವೀಕರಿಸುತ್ತಿದ್ದರು ಎಂದು ಹೇಳಿದರು.

ಇದನ್ನೂ ಓದಿ: ಪಾಕಿಸ್ತಾನ ಸಂಸತ್ತಿನಲ್ಲಿ ಮತ್ತೊಮ್ಮೆ ಮೊಳಗಿದ ಭಾರತ ಜಯಘೋಷ, ಶತ್ರು ರಾಷ್ಟ್ರದ ಅಸಹಾಯಕತೆ ಬಯಲು

ಪಾಕಿಸ್ತಾನವು ತನ್ನ ಮೊದಲ ಪರಮಾಣು ಪರೀಕ್ಷೆಯ 26 ನೇ ವಾರ್ಷಿಕೋತ್ಸವವನ್ನು ಆಚರಣೆ ಮಾಡಿಕೊಳ್ಳುತ್ತಿದೆ. ಇನ್ನು ಈ ಸಭೆಯಲ್ಲಿ 2017 ರಲ್ಲಿ ಪಾಕಿಸ್ತಾನದ ಆಗಿನ ಮುಖ್ಯ ನ್ಯಾಯಮೂರ್ತಿ ಸಾಕಿಬ್ ನಿಸಾರ್ ಅವರು ಸುಳ್ಳು ಪ್ರಕರಣದಲ್ಲಿ ತಮ್ಮನ್ನು ಹೇಗೆ ಪ್ರಧಾನಿ ಕಚೇರಿಯಿಂದ ತೆಗೆದುಹಾಕಿದರು ಎಂಬ ಬಗ್ಗೆ ಕೂಡ ಮಾತನಾಡಿದ್ದಾರೆ. ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ ಸಂಸ್ಥಾಪಕ ನಾಯಕ ಇಮ್ರಾನ್ ಖಾನ್ ವಿರುದ್ಧದ ಪ್ರಕರಣಗಳು ನಿಜವಾಗಿದ್ದರು ಅದನ್ನು ಅಂದಿನ ನ್ಯಾಯಮೂರ್ತಿ ಸಾಕಿಬ್ ನಿಸಾರ್ ಅವರು ಎಲ್ಲಾ ಪ್ರಕರಣಗಳು ಸುಳ್ಳು ಎಂದು ಅವರು ಹೇಳಿದರು.ಇಮ್ರಾನ್ ಖಾನ್ ಅವರನ್ನು ಅಧಿಕಾರಕ್ಕೆ ತರಲು 2017ರಲ್ಲಿ ನನ್ನ ಸರ್ಕಾರವನ್ನು ಉರುಳಿಸುವಲ್ಲಿ ಮಾಜಿ ಐಎಸ್ಐ ಮುಖ್ಯಸ್ಥ ಜನರಲ್ ಜಹಿರುಲ್ ಇಸ್ಲಾಂ ಅವರ ಪಾತ್ರವು ಇದೆ ಎಂದು ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ