ವಿಡಿಯೋ ಕಾನ್ಫರೆನ್ಸ್​ನಲ್ಲಿ ಜಾಕ್ ಮಾ ಪ್ರತ್ಯಕ್ಷ: ಆದ್ರೆ ತಾವಿರುವ ಜಾಗದ ಸುಳಿವು ಬಿಟ್ಟುಕೊಟ್ಟಿಲ್ಲ! ಹೆಚ್ಚುತ್ತಲೇ ಇವೆ ಅನುಮಾನಗಳು

ಗ್ರಾಮೀಣ ಶಿಕ್ಷಣ ತಜ್ಞರು ಏರ್ಪಡಿಸಿದ್ದ ವಾರ್ಷಿಕ ಕಾರ್ಯಕ್ರಮದಲ್ಲಿ ಜಾಕ್ ಮಾ ಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಈ ವೇಳೆ ಇನ್ನು ಮುಂದೆಯೂ ತಮ್ಮ ಲೋಕೋಪಕಾರಿ ಕೆಲಸ ಮುಂದುವರಿಸುವುದಾಗಿ ಹೇಳಿದ್ದಾರೆ. ಆದರೆ, ಅವರ ಬಗ್ಗೆ ಚರ್ಚೆಯಲ್ಲಿರುವ ವಿಷಯದ ಬಗ್ಗೆ ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ.

ವಿಡಿಯೋ ಕಾನ್ಫರೆನ್ಸ್​ನಲ್ಲಿ ಜಾಕ್ ಮಾ ಪ್ರತ್ಯಕ್ಷ: ಆದ್ರೆ ತಾವಿರುವ ಜಾಗದ ಸುಳಿವು ಬಿಟ್ಟುಕೊಟ್ಟಿಲ್ಲ! ಹೆಚ್ಚುತ್ತಲೇ ಇವೆ ಅನುಮಾನಗಳು
ವಿಡಿಯೋ ಕಾನ್ಫರೆನ್ಸ್​ನಲ್ಲಿ ಕಾಣಿಸಿಕೊಂಡ ಜಾಕ್​ ಮಾ

Updated on: Jan 20, 2021 | 5:40 PM

ಬೀಜಿಂಗ್: ಕಳೆದ ಕೆಲ ತಿಂಗಳಿಂದ ಕಾಣೆಯಾಗಿದ್ದ ಚೀನಾದ ಅತ್ಯಂತ ಶ್ರೀಮಂತ ವ್ಯಕ್ತಿ, ಅಲಿಬಾಬಾ ಸಂಸ್ಥೆಯ ಸ್ಥಾಪಕ ಜಾಕ್ ಮಾ ಬುಧವಾರ ವಿಡಿಯೋ ಕಾನ್ಫರೆನ್ಸ್​ನಲ್ಲಿ ಕಾಣಿಸಿಕೊಂಡಿದ್ದಾರೆ! ಆದರೆ, ತಾವು ಇರುವ ಸ್ಥಳದ ಬಗ್ಗೆ ಅವರು ಉಲ್ಲೇಖ ಮಾಡಿಲ್ಲ.

ಗ್ರಾಮೀಣ ಶಿಕ್ಷಣ ತಜ್ಞರು ಏರ್ಪಡಿಸಿದ್ದ ವಾರ್ಷಿಕ ಕಾರ್ಯಕ್ರಮದಲ್ಲಿ ಜಾಕ್ ಮಾ ಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಈ ವೇಳೆ ಇನ್ನು ಮುಂದೆಯೂ ತಮ್ಮ ಲೋಕೋಪಕಾರಿ ಕೆಲಸ ಮುಂದುವರಿಸುವುದಾಗಿ ಹೇಳಿದ್ದಾರೆ. ಆದರೆ, ಅವರ ಬಗ್ಗೆ ಚರ್ಚೆಯಲ್ಲಿರುವ ವಿಷಯದ ಬಗ್ಗೆ ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ.

ಜಾಕ್ ಮಾ ನೇತೃತ್ವದ ಟಾಲೆಂಟ್ ಶೋ, ‘ಆಫ್ರಿಕಾ ಬ್ಯುಸಿನೆಸ್ ಹೀರೋಸ್’ನ ಅಂತಿಮ ಎಪಿಸೋಡ್​ನಲ್ಲಿ ಜಾಕ್ ಮಾ ತೀರ್ಪುಗಾರರಾಗಿ ಭಾಗವಹಿಸಬೇಕಿತ್ತು. ಆದರೆ, ಆ ಕಾರ್ಯಕ್ರಮದಲ್ಲೂ ಜಾಕ್ ಮಾ ಕಾಣಿಸಿಕೊಂಡಿಲ್ಲ. ಅಲ್ಲದೆ, ‘ಆಫ್ರಿಕಾ ಬ್ಯುಸಿನೆಸ್ ಹೀರೋಸ್’ನ ವೆಬ್​ಸೈಟಿನಿಂದಲೂ ಜಾಕ್ ಮಾ ಫೋಟೋಗಳನ್ನು ತೆಗೆಯಲಾಗಿದೆ. ಈ ಬೆನ್ನಲ್ಲೇ ಅವರು ಕಾಣೆ ಆಗಿರುವ ವಿಚಾರ ಹರಿದಾಡಲು ಆರಂಭಿಸಿತ್ತು.

ಚೀನಾ ಕಮ್ಯುನಿಸ್ಟ್ ಸರ್ಕಾರದ ಹಣಕಾಸು ನಿರ್ವಹಣೆ ಮತ್ತು ಬ್ಯಾಂಕ್​ಗಳನ್ನು ಉದ್ಯಮಿ ಜಾಕ್ ಮಾ ಕಟುವಾಗಿ ಟೀಕಿಸಿದ್ದರು. ಅಕ್ಟೋಬರ್​ನಲ್ಲಿ ಶಾಂಘೈನಲ್ಲಿ ಜಾಕ್ ಮಾ ಭಾಷಣದಲ್ಲಿ, ವಾಣಿಜ್ಯ ಉದ್ಯಮ ವಲಯದಲ್ಲಿ ಹೊಸ ಆವಿಷ್ಕಾರಗಳಾಗಬೇಕು ಎಂದು ಅಭಿಪ್ರಾಯಪಟ್ಟಿದ್ದರು. ಜಾಕ್ ಮಾ ಮಾಡಿದ್ದ ಈ ಭಾಷಣವು ಚೀನಾ ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿತ್ತು. ಕ್ರಿಸ್ಮಸ್​ ಸಂದರ್ಭದಲ್ಲಿ ಅಲಿಬಾಬಾ ಸಂಸ್ಥೆಯ ಕುರಿತು ತನಿಖೆ ಪ್ರಾರಂಭ ಮಾಡಲಾಗಿತ್ತು. ಈ ಬೆನ್ನಲ್ಲೇ ಅವರು ಕಾಣೆ ಆಗಿದ್ದರು. ಇದೀಗ ಕೋಟ್ಯಧಿಪತಿ ಉದ್ಯಮಿ ಜಾಕ್ ಮಾ ವಿಡಿಯೋ ಕಾನ್ಫರೆನ್ಸ್​ನಲ್ಲಿ ಕಾಣಿಸಿಕೊಂಡಿದ್ದರೂ ತಾವಿರುವ ತಾವಿನ ಬಗ್ಗೆ ಹೇಳದಿರುವುದು ಇನ್ನಷ್ಟು ಅನುಮಾನ/ ಗೊಂದಲಗಳಿಗೆ ಎಡೆಮಾಡಿ ಕೊಟ್ಟಿದೆ.

ಚೀನಾ ಕಾಯಂ ಅಧ್ಯಕ್ಷ ಜಿನ್​ ಪಿಂಗ್ ಜೊತೆ ಸಂಘರ್ಷ: ಅಲಿಬಾಬಾ ಸಂಸ್ಥಾಪಕ ಜಾಕ್ ಮಾ 2 ತಿಂಗಳಿಂದ ಕಣ್ಮರೆ?

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us