AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Japan Earthquake: ಜಪಾನ್‌ನಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪ: ಸುನಾಮಿ ಎಚ್ಚರಿಕೆ, ಕಟ್ಟಡಗಳು ನೆಲಸಮ

ಜಪಾನ್‌ನ ಕ್ಯುಶು ದ್ವೀಪದ ಕುಮಾಮೊಟೊದಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಹಲವು ಕಟ್ಟಡಗಳು ಕುಸಿದು ಬಿದ್ದಿವೆ. 1 ಮೀಟರ್ ಎತ್ತರದ ಸುನಾಮಿ ಅಲೆಗಳ ಸಾಧ್ಯತೆ ಇರುವುದರಿಂದ ಕರಾವಳಿ ಪ್ರದೇಶದ ನಿವಾಸಿಗಳಿಗೆ ಎತ್ತರದ ಪ್ರದೇಶಗಳಿಗೆ ತೆರಳಲು ಎಚ್ಚರಿಕೆ ನೀಡಲಾಗಿದೆ. ಪ್ರಧಾನಿ ಸನೇ ತಕೈಚಿ ಅವರು ಜೀವ ಉಳಿಸಲು ಆದ್ಯತೆ ನೀಡುವಂತೆ ಸೂಚಿಸಿದ್ದಾರೆ. 'ರಿಂಗ್ ಆಫ್ ಫೈರ್' ವಲಯದಲ್ಲಿರುವ ಜಪಾನ್‌ನಲ್ಲಿ ಈ ವರ್ಷ ಸರಣಿ ಭೂಕಂಪಗಳು ದಾಖಲಾಗಿವೆ.

Japan Earthquake: ಜಪಾನ್‌ನಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪ: ಸುನಾಮಿ ಎಚ್ಚರಿಕೆ, ಕಟ್ಟಡಗಳು ನೆಲಸಮ
ಜಪಾನ್
ನಯನಾ ರಾಜೀವ್
|

Updated on:Jul 28, 2026 | 3:02 PM

Share

ಟೋಕಿಯೋ, ಜುಲೈ 28: ಜಪಾನ್‌ನ ದಕ್ಷಿಣ ಮುಖ್ಯ ದ್ವೀಪವಾದ ಕ್ಯುಶುವಿನ ಕುಮಾಮೊಟೊ ಪ್ರಾಂತ್ಯದಲ್ಲಿ ಮಂಗಳವಾರ 7.1 ತೀವ್ರತೆಯ ಪ್ರಬಲ ಭೂಕಂಪ(Earthquake) ಸಂಭವಿಸಿದೆ. ಭೂಕಂಪದ ತೀವ್ರತೆಗೆ ಹಲವು ಕಟ್ಟಡಗಳು ಕುಸಿದು ಬಿದ್ದಿದ್ದು, ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ಜಪಾನ್ ಪ್ರಧಾನಿ ಸನೇ ತಕೈಚಿ ಸ್ಪಷ್ಟಪಡಿಸಿದ್ದಾರೆ.

ಭೂಕಂಪದ ಕೇಂದ್ರಬಿಂದು ಸಮುದ್ರ ಮಟ್ಟದಿಂದ 10 ಕಿಲೋಮೀಟರ್ ಆಳದಲ್ಲಿದ್ದು, ಕರಾವಳಿ ತೀರದಲ್ಲಿ 1 ಮೀಟರ್ (3.28 ಅಡಿ) ಎತ್ತರದ ಸುನಾಮಿ ಅಲೆಗಳು ಏಳುವ ಸಾಧ್ಯತೆಯಿರುವುದರಿಂದ ಕರಾವಳಿ ನಿವಾಸಿಗಳಿಗೆ ಎತ್ತರದ ಪ್ರದೇಶಗಳಿಗೆ ತೆರಳಲು ಜಪಾನ್ ಹವಾಮಾನ ಸಂಸ್ಥೆ (JMA) ಸೂಚಿಸಿದೆ. ಜಪಾನ್ ಸರ್ಕಾರವು ಕ್ಯುಶು ದ್ವೀಪದ ಕುಮಾಮೊಟೊ, ನಾಗಸಾಕಿ, ಕಾಗೋಶಿಮಾ, ಫುಕುವೋಕಾ, ಸಾಗಾ, ಓಯಿಟಾ ಮತ್ತು ಮಿಯಾಜಾಕಿ ಪ್ರಾಂತ್ಯಗಳಿಗೆ ತುರ್ತು ಭೂಕಂಪದ ಎಚ್ಚರಿಕೆಯನ್ನು ನೀಡಿದೆ.

ಈ ಪ್ರಬಲ ಭೂಕಂಪನದ ನಂತರ ದೇಶದ ಪರಮಾಣು ವಿದ್ಯುತ್ ಸ್ಥಾವರಗಳಲ್ಲಿ ಯಾವುದೇ ಅಸಹಜತೆ ಕಂಡುಬಂದಿಲ್ಲ ಎಂದು ಜಪಾನ್ ಪರಮಾಣು ನಿಯಂತ್ರಣ ಪ್ರಾಧಿಕಾರ ಭರವಸೆ ನೀಡಿದೆ. ಆಸ್ತಿ-ಪಾಸ್ತಿ ಹಾನಿಯ ಸ್ಥಿತಿಗತಿಯನ್ನು ಪರಿಶೀಲಿಸಲು ಆದೇಶಿಸಿರುವ ಜಪಾನ್ ಪ್ರಧಾನಿ ಕಚೇರಿಯು, “ಮನುಷ್ಯರ ಜೀವ ಉಳಿಸುವುದೇ ನಮ್ಮ ಮೊದಲ ಆದ್ಯತೆ” ಎಂದು ಅಧಿಕಾರಿಗಳಿಗೆ ತುರ್ತು ಕಾರ್ಯಾಚರಣೆಗೆ ಸೂಚಿಸಿದೆ.

ಮತ್ತಷ್ಟು ಓದಿ: Peru Earthquake: ಪೆರುವಿನಲ್ಲಿ ಅವಳಿ ಭೂಕಂಪ: 6 ಮಂದಿ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ,ಐತಿಹಾಸಿಕ ಚರ್ಚ್ ನೆಲಸಮ

ಸರಣಿ ಭೂಕಂಪಗಳು: ಪೆಸಿಫಿಕ್ ಮಹಾಸಾಗರದ ಅತ್ಯಂತ ಅಪಾಯಕಾರಿ ‘ರಿಂಗ್ ಆಫ್ ಫೈರ್’ ವಲಯದಲ್ಲಿರುವ ಜಪಾನ್‌ನಲ್ಲಿ ಈ ವರ್ಷ ಸರಣಿ ಭೂಕಂಪಗಳು ದಾಖಲಾಗಿವೆ. ಇದೇ ವರ್ಷದ ಏಪ್ರಿಲ್ 20 ರಂದು 7.7 ತೀವ್ರತೆಯ ಭೂಕಂಪ ಸಂಭವಿಸಿತ್ತು ಹಾಗೂ ಜೂನ್ 25 ರಂದು ಉತ್ತರ ಜಪಾನ್‌ನಲ್ಲಿ 7.2 ತೀವ್ರತೆಯ ಕಂಪನ ದಾಖಲಾಗಿತ್ತು.

ವಿಶ್ವದಲ್ಲಿ ಸಂಭವಿಸುವ ಒಟ್ಟು ಭೂಕಂಪಗಳ ಪೈಕಿ ಸುಮಾರು ಶೇಕಡಾ 18 ರಷ್ಟು ಭೂಕಂಪಗಳು ಜಪಾನ್ ಒಂದರಲ್ಲೇ ಸಂಭವಿಸುತ್ತವೆ. ನಾಲ್ಕು ಪ್ರಮುಖ ಟೆಕ್ಟೋನಿಕ್ ಪ್ಲೇಟ್‌ಗಳ ಮೇಲೆ ಜಪಾನ್ ನೆಲೆಸಿರುವುದೇ ಇದಕ್ಕೆ ಮುಖ್ಯ ಕಾರಣವಾಗಿದೆ.

2011 ರ ಭೀಕರ ಸುನಾಮಿ ನೆನಪು: 2011 ರಲ್ಲಿ ಜಪಾನ್‌ನಲ್ಲಿ ಸಂಭವಿಸಿದ 9.0 ತೀವ್ರತೆಯ ಭೀಕರ ಸಮುದ್ರದಾಳದ ಭೂಕಂಪ ಮತ್ತು ಸುನಾಮಿಯು ಫುಕುಶಿಮಾ ಪರಮಾಣು ಸ್ಥಾವರವನ್ನು ಧ್ವಂಸಗೊಳಿಸಿ, ಸುಮಾರು 18,500 ಕ್ಕೂ ಹೆಚ್ಚು ಜನರ ಸಾವು-ನೋವಿಗೆ ಕಾರಣವಾಗಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:01 pm, Tue, 28 July 26

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!