AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Japan Earthquake: ಜಪಾನ್​ನಲ್ಲಿ 7.1 ತೀವ್ರತೆಯ ಭೂಕಂಪ: ಸುನಾಮಿ ಮುನ್ಸೂಚನೆ ಇಲ್ಲ ಎಂದ ಅಧಿಕಾರಿಗಳು

Earthquake In Japan: ಜಪಾನ್​ ಪೂರ್ವ ಕರಾವಳಿ ಭಾಗದಲ್ಲಿ ಸ್ಥಳೀಯ ಕಾಲಮಾನ ರಾತ್ರಿ 11:08ಕ್ಕೆ ಏಕಾಏಕಿ ಭೂಮಿ ಕಂಪಿಸಿದೆ. ಫುಕುಶಿಮಾ ಭೂಕಂಪದ ಕೇಂದ್ರ ಬಿಂದುವಾಗಿದೆ.

Japan Earthquake: ಜಪಾನ್​ನಲ್ಲಿ 7.1 ತೀವ್ರತೆಯ ಭೂಕಂಪ: ಸುನಾಮಿ ಮುನ್ಸೂಚನೆ ಇಲ್ಲ ಎಂದ ಅಧಿಕಾರಿಗಳು
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on: Feb 13, 2021 | 9:48 PM

Share

ಟೋಕಿಯೋ: ಶನಿವಾರ ತಡರಾತ್ರಿ (ಸ್ಥಳೀಯ ಕಾಲಮಾನ) ಪೂರ್ವ ಜಪಾನ್​ನಲ್ಲಿ ಭೂಕಂಪ ಸಂಭವಿಸಿದೆ. ರಿಕ್ಟರ್​ ಮಾಪಕದಲ್ಲಿ ಭೂಕಂಪದ ತೀವ್ರತೆ 7.1 ದಾಖಲಾಗಿದೆ. ಭೂಕಂಪದ ತೀವ್ರತೆ ಹೆಚ್ಚಿದ್ದರೂ, ಯಾವುದೇ ಸುನಾಮಿ ಮುನ್ಸೂಚನೆ ಇಲ್ಲ ಎಂದು ಜಪಾನ್​ ಅಧಿಕಾರಿಗಳು ತಿಳಿಸಿದ್ದಾರೆ. ಇದರಿಂದ ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ.

ಜಪಾನ್​ ಪೂರ್ವ ಕರಾವಳಿ ಭಾಗದಲ್ಲಿ ಸ್ಥಳೀಯ ಕಾಲಮಾನ ರಾತ್ರಿ 11:08ಕ್ಕೆ ಏಕಾಏಕಿ ಭೂಮಿ ಕಂಪಿಸಿದೆ. ಫುಕುಶಿಮಾ ಭೂಕಂಪದ ಕೇಂದ್ರ ಬಿಂದುವಾಗಿದೆ. ಭೂಕಂಪ ಸಂಭವಿಸಿದ ಬಿನ್ನಲ್ಲೇ ಈ ಭಾಗದಲ್ಲಿ ವಿದ್ಯುತ್​ ಸಮಸ್ಯೆ ಉಂಟಾಗಿದೆ.

ಫುಕುಶಿಮಾದಲ್ಲಿರುವ ಅಣುವಿದ್ಯುತ್​ ಸ್ಥಾವರದ ಸದ್ಯದ ಪರಿಸ್ಥಿತಿ ಏನು ಎನ್ನುವ ಬಗ್ಗೆ ವಿಜ್ಞಾನಿಗಳು ಪರೀಕ್ಷೆ ನಡೆಸುತ್ತಿದ್ದಾರೆ. 2011ರ ಸುನಾಮಿ ಸಂದರ್ಭದಲ್ಲಿ ಈ ಅಣುವಿದ್ಯುತ್​ ಸ್ಥಾವರ ಸಂಪೂರ್ಣವಾಗಿ ಹಾನಿಗೆ ತುತ್ತಾಗಿತ್ತು.

ಭೂಕಂಪ ಸಂಭವಿಸುತ್ತಿದ್ದಂತೆ, ಈ ಭಾಗದಲ್ಲಿ ಸಂಚಾರ ಮಾಡುತ್ತಿದ್ದ ರೈಲ್ವೆ ಸಂಚಾರವನ್ನು ಸ್ಥಗಿತಮಾಡಲಾಗಿದೆ. ಭೂಕಂಪದಿಂದ ಎಷ್ಟರಮಟ್ಟಿಗೆ ಹಾನಿ ಉಂಟಾಗಿದೆ ಎನ್ನುವ ಬಗ್ಗೆ ಇನ್ನಷ್ಟೇ ವರದಿ ಬರಬೇಕಿದೆ.

ಇದನ್ನೂ ಓದಿ: ಜಪಾನ್​ ನೆಲದಿಂದ ಆಗಸಕ್ಕೆ ಚಿಮ್ಮಲಿದೆ ‘‘ಮರದ’’ ಸ್ಯಾಟಲೈಟ್!

2011ರಲ್ಲಿ ಜಗತ್ತು ಕಂಡು ಕೇಳರಿಯದ ಸುನಾಮಿ ಸಂಭವಿಸಿತ್ತು. ಜಪಾನ್​ ಸುನಾಮಿಗೆ ಸಂಪೂರ್ಣವಾಗಿ ತತ್ತರಿಸಿ ಹೋಗಿತ್ತು. ಈ ವೇಳೆ ಸುಮಾರು 18 ಸಾವಿರ ಜನರು ಮೃತಪಟ್ಟಿದ್ದರು.

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?