Japanese PM Shinzo Abe Funeral: ಇಂದು ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಅಂತ್ಯಕ್ರಿಯೆ; ಟೋಕಿಯೋ ತಲುಪಿದ ಪಿಎಂ ನರೇಂದ್ರ ಮೋದಿ
ಜಪಾನ್ ಪ್ರಧಾನಿಯಾಗಿ ಸುದೀರ್ಘ ಅವಧಿಗೆ ಸೇವೆ ಸಲ್ಲಿಸಿದ ಪ್ರಧಾನಿ ಶಿಂಜೋ ಅಬೆ ಅವರನ್ನು ಜುಲೈ 8ರಂದು ದೇಶದ ಪಶ್ಚಿಮ ಪ್ರದೇಶದಲ್ಲಿ ಚುನಾವಣಾ ಪ್ರಚಾರದ ವೇಳೆ ದುಷ್ಕರ್ಮಿಯೊಬ್ಬ ಗುಂಡಿಕ್ಕಿ ಹತ್ಯೆಗೈದಿದ್ದ.
ಟೋಕಿಯೊ: ಜಪಾನ್‌ನ ಮಾಜಿ ಪ್ರಧಾನಿ ಶಿಂಜೋ ಅಬೆ (Shinzo Abe) ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು (ಮಂಗಳವಾರ) ಟೋಕಿಯೋ ಆಗಮಿಸಿದ್ದಾರೆ. ಹಲವಾರು ಜಾಗತಿಕ ನಾಯಕರ ಜೊತೆ ಪ್ರಧಾನಿ ಮೋದಿ ಶಿಂಜೋ ಅಬೆ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಿದ್ದಾರೆ. ಇಂದು ನಡೆಯಲಿರುವ ಶಿಂಜೋ ಅಬೆ ಅವರ ಅಂತ್ಯಕ್ರಿಯೆಯಲ್ಲಿ 20ಕ್ಕೂ ಹೆಚ್ಚು ರಾಷ್ಟ್ರಗಳ ನಾಯಕರು ಸೇರಿದಂತೆ 100ಕ್ಕೂ ಹೆಚ್ಚು ದೇಶಗಳ ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆಯಿದೆ.
“ಟೋಕಿಯೋಗೆ ಬಂದಿಳಿದಿದ್ದೇನೆ” ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಟ್ವೀಟ್ ಮಾಡಿ, “ಪ್ರಧಾನಿ ನರೇಂದ್ರ ಮೋದಿ ಅವರು ಟೋಕಿಯೊಗೆ ಆಗಮಿಸಿದ್ದಾರೆ. ಇಂದು ಮಾಜಿ ಪ್ರಧಾನಿ ಶಿಂಜೋ ಅಬೆ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ. ಜಪಾನ್‌ನ ಪ್ರಧಾನಿ ಅವರೊಂದಿಗೆ ಮೋದಿ ದ್ವಿಪಕ್ಷೀಯ ಸಭೆಯನ್ನು ನಡೆಸಲಿದ್ದಾರೆ” ಎಂದಿದ್ದಾರೆ.
ಇದನ್ನೂ ಓದಿ: ಶಿಂಜೋ ಅಬೆಗೆ ಸರ್ಕಾರೀ ಗೌರವದ ಅಂತಿಮಸಂಸ್ಕಾರ ವಿರೋಧಿಸಿ ವ್ಯಕ್ತಿಯೊಬ್ಬ ಬೆಂಕಿ ಹೊತ್ತಿಸಿಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ!
ನಿನ್ನೆ ಟ್ವೀಟ್ ಮಾಡಿದ್ದ ಪ್ರಧಾನಿ ಮೋದಿ, “ಆತ್ಮೀಯ ಸ್ನೇಹಿತ ಮತ್ತು ಭಾರತ-ಜಪಾನ್ ಸ್ನೇಹದ ಶ್ರೇಷ್ಠ ಚಾಂಪಿಯನ್ ಮಾಜಿ ಪ್ರಧಾನಿ ಶಿಂಜೋ ಅಬೆ ಅವರ ಅಂತಿಮ ಸಂಸ್ಕಾರದಲ್ಲಿ ಭಾಗವಹಿಸಲು ನಾನು ಇಂದು ರಾತ್ರಿ ಟೋಕಿಯೊಗೆ ಪ್ರಯಾಣಿಸುತ್ತಿದ್ದೇನೆ. ಎಲ್ಲಾ ಭಾರತೀಯರ ಪರವಾಗಿ ಸಂತಾಪ ಸೂಚಿಸಲು ಜಪಾನ್ ಪ್ರಧಾನಿ ಕಿಶಿದಾ ಮತ್ತು ಶ್ರೀಮತಿ ಅಬೆ ಅವರನ್ನು ಭೇಟಿ ಮಾಡಲಿದ್ದೇನೆ” ಎಂದಿದ್ದರು.
PM @narendramodi arrives in Tokyo.
Will participate in the State Funeral of former PM Shinzo Abe later today.
Will also hold a bilateral meeting with PM @kishida230, reaffirming commitment to further strengthening of India-Japan Special Strategic and Global Partnership. pic.twitter.com/LeUstT3aIN
— Arindam Bagchi (@MEAIndia) September 26, 2022
ಜಪಾನ್ ಪ್ರಧಾನಿಯಾಗಿ ಸುದೀರ್ಘ ಅವಧಿಗೆ ಸೇವೆ ಸಲ್ಲಿಸಿದ ಪ್ರಧಾನಿ ಶಿಂಜೋ ಅಬೆ ಅವರನ್ನು ಜುಲೈ 8ರಂದು ದೇಶದ ಪಶ್ಚಿಮ ಪ್ರದೇಶದಲ್ಲಿ ಚುನಾವಣಾ ಪ್ರಚಾರದ ವೇಳೆ ದುಷ್ಕರ್ಮಿಯೊಬ್ಬ ಗುಂಡಿಕ್ಕಿ ಹತ್ಯೆಗೈದಿದ್ದ. ಕಳೆದ ಮಾರ್ಚ್‌ನಲ್ಲಿ ಜಪಾನ್ ಪ್ರಧಾನಿ ಕಿಶಿದಾ ಭಾರತಕ್ಕೆ ಭೇಟಿ ನೀಡಿದ್ದರು ಮತ್ತು ಕ್ವಾಡ್ ಸಭೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಮೇ ತಿಂಗಳಲ್ಲಿ ಜಪಾನ್ ಗೆ ಭೇಟಿ ನೀಡಿದ್ದರು. ವಿಶ್ವದ 20ಕ್ಕೂ ಹೆಚ್ಚು ದೇಶಗಳ ನಾಯಕರು ಶಿಂಜೋ ಅಬೆ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ. ಹೀಗಾಗಿ ಪ್ರಧಾನಿ ಮೋದಿ ಅವರು ಕೂಡ ಜಪಾನ್ಗೆ ತೆರಳಿದ್ದಾರೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:03 am, Tue, 27 September 22