AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಸ್ತವವನ್ನು ಅರ್ಥಮಾಡಿಕೊಳ್ಳಿ: ಇರಾನ್ ಒಪ್ಪಂದ ಟೀಕಿಸಿದ ಇಸ್ರೇಲ್​ಗೆ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್​ ಎಚ್ಚರಿಕೆ

ಅಮೆರಿಕ-ಇರಾನ್ ಶಾಂತಿ ಒಪ್ಪಂದವನ್ನು ಟೀಕಿಸಿದ ಇಸ್ರೇಲ್ ವಿರುದ್ಧ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಸ್ರೇಲ್ ಜಾಗತಿಕವಾಗಿ ಒಂಟಿಯಾಗಿದೆ, ಅಮೆರಿಕದ ಮಿಲಿಟರಿ ಸಹಾಯದ ಮೇಲೆ ಅವಲಂಬಿತವಾಗಿದೆ. ಟ್ರಂಪ್ ಶಾಂತಿಯನ್ನು ಬಯಸಿದ್ದರೂ, ನೆತನ್ಯಾಹು ಯುದ್ಧವನ್ನು ಮುಂದುವರಿಸಲು ಬಯಸುತ್ತಾರೆ. ಇಸ್ರೇಲ್ ತನ್ನ ನಿಜವಾದ ಸ್ಥಿತಿಯನ್ನು ಅರ್ಥಮಾಡಿಕೊಳ್ಳಬೇಕು ಎಂದು ವ್ಯಾನ್ಸ್ ಎಚ್ಚರಿಸಿದ್ದಾರೆ.

ವಾಸ್ತವವನ್ನು ಅರ್ಥಮಾಡಿಕೊಳ್ಳಿ: ಇರಾನ್ ಒಪ್ಪಂದ ಟೀಕಿಸಿದ ಇಸ್ರೇಲ್​ಗೆ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್​ ಎಚ್ಚರಿಕೆ
ಜೆಡಿ ವ್ಯಾನ್ಸ್​Image Credit source: PTI
ನಯನಾ ರಾಜೀವ್
|

Updated on: Jun 19, 2026 | 7:27 AM

Share

ವಾಷಿಂಗ್ಟನ್, ಜೂನ್ 19: ಇರಾನ್ ಜತೆಗಿನ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ(America) ಮಾಡಿಕೊಂಡಿರುವ ಒಪ್ಪಂದವನ್ನು ಇಸ್ರೇಲ್​ನ ಕೆಲವರು ಸಚಿವರು ಟೀಕಿಸಿರುವುದಕ್ಕೆ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್​ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶ್ವೇತಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಇಸ್ರೇಲ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಇಸ್ರೇಲ್ ಜಾಗತಿಕವಾಗಿ ಒಂಟಿಯಾಗಿದೆ, ಮೊದಲು ಅಲ್ಲಿನ ನಾಯಕರು ವಾಸ್ತವವನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಚಾಟಿ ಬೀಸಿದ್ದಾರೆ.

ಅಮೆರಿಕ ಏಕೈಕ ಮಿತ್ರ: ಪ್ರಸ್ತುತ ಇಡೀ ಜಗತ್ತಿನಲ್ಲಿ ಇಸ್ರೇಲ್ ದೇಶದ ಬಗ್ಗೆ ಸಹಾನುಭೂತಿ ಹೊಂದಿರುವ ಏಕೈಕ ರಾಷ್ಟ್ರ ಮುಖ್ಯಸ್ಥ ಎಂದರೆ ಅದು ಡೊನಾಲ್ಡ್ ಟ್ರಂಪ್ ಮಾತ್ರ. ನಾನು ಇಸ್ರೇಲ್ ಸರ್ಕಾರದ ಸಂಪುಟದಲ್ಲಿದ್ದರೆ, ಜಗತ್ತಿನಲ್ಲಿ ನನಗೆ ಉಳಿದಿರುವ ಏಕೈಕ ಪ್ರಬಲ ಮಿತ್ರನ ಮೇಲೆಯೇ ದಾಳಿ ಮಾಡುತ್ತಿರಲಿಲ್ಲ ಎಂದು ವ್ಯಾನ್ಸ್ ಹೇಳಿದ್ದಾರೆ.

ಕಳೆದ ಮೂರು ತಿಂಗಳುಗಳಲ್ಲಿ ಇಸ್ರೇಲ್ ತನ್ನ ರಕ್ಷಣೆಗಾಗಿ ಬಳಸಿದ ಒಟ್ಟು ಶಸ್ತ್ರಾಸ್ತ್ರಗಳಲ್ಲಿ ಮೂರನೇ ಎರಡರಷ್ಟು ಭಾಗ ಅಮೆರಿಕನ್ನರ ಕೈಯಿಂದ ತಯಾರಾಗಿದ್ದು ಮತ್ತು ಅಮೆರಿಕದ ತೆರಿಗೆದಾರರ ಹಣದಿಂದ ಪಾವತಿಸಲ್ಪಟ್ಟಿದ್ದಾಗಿದೆ ಎಂಬುದನ್ನು ವ್ಯಾನ್ಸ್ ನೆನಪಿಸಿದ್ದಾರೆ.

ಮತ್ತಷ್ಟು ಓದಿ: ಇರಾನ್-ಅಮೆರಿಕ ಐತಿಹಾಸಿಕ ಒಪ್ಪಂದ: ಜಾಗತಿಕ ತೈಲ ಬೆಲೆ ಕುಸಿತ

ಬಿಕ್ಕಟ್ಟಿಗೆ ಅಸಲಿ ಕಾರಣವೇನು? ಫೆಬ್ರವರಿ 28 ರಂದು ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ವಿರುದ್ಧ ಯುದ್ಧ ಆರಂಭಿಸಿದ್ದವು. ಆದರೆ, ಈ ಯುದ್ಧದಿಂದ ಜಾಗತಿಕ ಆರ್ಥಿಕತೆ ಅಲುಗಾಡಿದ್ದರಿಂದ ಮತ್ತು ಅಮೆರಿಕದಲ್ಲೂ ಇದಕ್ಕೆ ವಿರೋಧ ವ್ಯಕ್ತವಾಗಿದ್ದರಿಂದ, ಅಧ್ಯಕ್ಷ ಟ್ರಂಪ್ ಕದನ ವಿರಾಮ ಒಪ್ಪಂದದ ಮೂಲಕ ಯುದ್ಧ ಕೊನೆಗೊಳಿಸಲು ಮುಂದಾಗಿದ್ದಾರೆ.

ಆದರೆ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ಯುದ್ಧ ಮುಂದುವರೆಸುವ ಇಚ್ಛೆಯಿದೆ. ಇಸ್ರೇಲ್‌ನ ರಾಷ್ಟ್ರೀಯ ಭದ್ರತಾ ಸಚಿವ ಇಟಮರ್ ಬೆನ್-ಗ್ವಿರ್ ಒಂದು ಹೆಜ್ಜೆ ಮುಂದೆ ಹೋಗಿ, ಇಸ್ರೇಲ್ ಟ್ರಂಪ್ ಒಪ್ಪಂದಕ್ಕೆ ಬದ್ಧವಾಗಿಲ್ಲ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದು ಅಮೆರಿಕದ ಕೋಪಕ್ಕೆ ಕಾರಣವಾಗಿದೆ.

ಟ್ರಂಪ್ ಹತಾಶೆ: ಇತ್ತೀಚಿನ ದಿನಗಳಲ್ಲಿ ಡೊನಾಲ್ಡ್ ಟ್ರಂಪ್ ಅವರು ನೆತನ್ಯಾಹು ವಿರುದ್ಧ ಹತಾಶೆ ವ್ಯಕ್ತಪಡಿಸಿದ್ದು, ಇಸ್ರೇಲ್ ನಾಯಕನನ್ನು ಹುಚ್ಚ ಎಂದು ಕರೆದಿದ್ದಾರೆ ಎನ್ನಲಾಗಿದೆ.

ಜೆಡಿ ವ್ಯಾನ್ಸ್ ಅವರ ಖಡಕ್ ಹೇಳಿಕೆಗೆ ನೇರ ಪ್ರತಿಕ್ರಿಯೆ ನೀಡಲು ನೆತನ್ಯಾಹು ಕಚೇರಿ ನಿರಾಕರಿಸಿದೆ. ಆದರೆ, “ನಮ್ಮೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ಹೋರಾಡಿದ ಅಮೆರಿಕದ ಗೆಳತನ ನಮಗೆ ಮುಖ್ಯ ಮತ್ತು ಅದನ್ನು ನಾವು ಗೌರವಿಸುತ್ತೇವೆ” ಎಂದು ನೆತನ್ಯಾಹು ಹೇಳಿದ್ದಾರೆ. ಆದರೂ, ಇಸ್ರೇಲ್ ಸೇನೆ ದಕ್ಷಿಣ ಲೆಬನಾನ್‌ನಿಂದ ಸದ್ಯಕ್ಕೆ ಹಿಂದೆ ಸರಿಯುವುದಿಲ್ಲ ಎಂದು ಹೇಳುವ ಮೂಲಕ ಕದನ ವಿರಾಮ ಒಪ್ಪಂದವನ್ನು ದುರ್ಬಲಗೊಳಿಸುವ ಸೂಚನೆಯನ್ನೂ ಅವರು ನೀಡಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು