AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವು ಪಾಕಿಸ್ತಾನವನ್ನು ಪ್ರೀತಿಸುತ್ತೇವೆ: ಜೆಡಿ ವ್ಯಾನ್ಸ್ ಹೇಳಿಕೆಗೆ ಅಮೆರಿಕ ನಾಯಕರ ಆಕ್ರೋಶ

ಅಮೆರಿಕ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ 'ನಾವು ಪಾಕಿಸ್ತಾನವನ್ನು ಪ್ರೀತಿಸುತ್ತೇವೆ' ಎಂಬ ಹೇಳಿಕೆ ಅಮೆರಿಕದ ಸ್ವಪಕ್ಷ ನಾಯಕರಿಂದ ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ. ಪಾಕಿಸ್ತಾನದ ಭಯೋತ್ಪಾದನೆಗೆ ಬೆಂಬಲ ನೀಡಿದ ಇತಿಹಾಸವನ್ನು ಪ್ರಶ್ನಿಸಿ, ಕತಾರ್ ಜೊತೆಗಿನ ಮಧ್ಯಸ್ಥಿಕೆಯನ್ನು ಖಂಡಿಸಲಾಗಿದೆ. ರಿಪಬ್ಲಿಕನ್ ಶಾಸಕರು ಪಾಕಿಸ್ತಾನವನ್ನು ನಿಜವಾದ ಮಿತ್ರನಾಗಿ ಪರಿಗಣಿಸಲು ನಿರಾಕರಿಸಿ, ಅಮೆರಿಕದ ನಿಜವಾದ ಮಿತ್ರರಾಷ್ಟ್ರಗಳೊಂದಿಗೆ ನಿಲ್ಲುವಂತೆ ಕರೆ ನೀಡಿದ್ದಾರೆ.

ನಾವು ಪಾಕಿಸ್ತಾನವನ್ನು ಪ್ರೀತಿಸುತ್ತೇವೆ: ಜೆಡಿ ವ್ಯಾನ್ಸ್ ಹೇಳಿಕೆಗೆ ಅಮೆರಿಕ ನಾಯಕರ ಆಕ್ರೋಶ
ಜೆಡಿ ವ್ಯಾನ್ಸ್​ Image Credit source: PTI
ನಯನಾ ರಾಜೀವ್
|

Updated on: Jun 23, 2026 | 1:06 PM

Share

ವಾಷಿಂಗ್ಟನ್, ಜೂನ್ 23: ಇರಾನ್ ಜೊತೆಗಿನ ಶಾಂತಿ ಮಾತುಕತೆಯ ಮಧ್ಯಸ್ಥಿಕೆ ವಹಿಸಿರುವ ಪಾಕಿಸ್ತಾನ(Pakistan)ದ ಬಗ್ಗೆ ಅಮೆರಿಕ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ (JD Vance) ಆಡಿರುವ ಮಾತು ಈಗ ಅಮೆರಿಕದ ಸ್ವಪಕ್ಷದ ನಾಯಕರಲ್ಲೇ ತೀವ್ರ ಆಕ್ರೋಶ ಮೂಡಿಸಿದೆ. ನಾವು ಪಾಕಿಸ್ತಾನವನ್ನು ಪ್ರೀತಿಸುತ್ತೇವೆ ಎಂಬ ವ್ಯಾನ್ಸ್ ಹೇಳಿಕೆಗೆ ರಿಪಬ್ಲಿಕನ್ ಪಕ್ಷದ ಶಾಸಕರು ಕಟುವಾಗಿ ಆಕ್ಷೇಪ ವ್ಯಕ್ತಪಡಿಸಿದ್ದು, ಪಾಕಿಸ್ತಾನ ಮತ್ತು ಕತಾರ್ ದೇಶಗಳು ಭಯೋತ್ಪಾದನೆಗೆ ಬೆಂಬಲ ನೀಡುತ್ತಿರುವ ಇತಿಹಾಸವನ್ನು ಬಿಚ್ಚಿಟ್ಟಿದ್ದಾರೆ.

ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ನಡೆಯುತ್ತಿರುವ ಇರಾನ್ ಶಾಂತಿ ಮಾತುಕತೆಯಲ್ಲಿ ಪಾಕಿಸ್ತಾನ ಮತ್ತು ಕತಾರ್ ದೇಶಗಳು ಮಧ್ಯಸ್ಥಿಕೆ ವಹಿಸುತ್ತಿವೆ. ಈ ವೇಳೆ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಪಾಕಿಸ್ತಾನವನ್ನು ಹೊಗಳಿ ಮಾತನಾಡಿದ್ದರು. ಇದಕ್ಕೆ ಅಮೆರಿಕದ ಹಿರಿಯ ನಾಯಕರು ನೀಡಿರುವ ಖಡಕ್ ತಿರುಗೇಟು ಇಲ್ಲಿದೆ:

ನಮ್ಮ ನಿಜವಾದ ಸ್ನೇಹಿತರು ಯಾರು ಎಂಬುದು ನಮಗೆ ತಿಳಿದಿರಬೇಕು. ಕತಾರ್ ಮತ್ತು ಪಾಕಿಸ್ತಾನ ದೇಶಗಳಿಗೆ ಭಯೋತ್ಪಾದಕರಿಗೆ ಆಶ್ರಯ ನೀಡಿದ ಇತಿಹಾಸವಿದೆ. ಅವರು ಶಾಂತಿ ಸ್ಥಾಪಿಸುವುದಕ್ಕಿಂತ ಇರಾನ್‌ನ ಭಯೋತ್ಪಾದಕ ಅಭಿಯಾನವನ್ನು ಬೆಂಬಲಿಸುತ್ತಿದ್ದಾರೆ ಎಂದು ಅಮೆರಿಕದ ಪ್ರಭಾವಿ ಶಾಸಕ ರಿಕ್ ಸ್ಕಾಟ್ ಸಾಮಾಜಿಕ ಜಾಲತಾಣ ಎಕ್ಸ್​​ನಲ್ಲಿ ಕಿಡಿಕಾರಿದ್ದಾರೆ.

ಮತ್ತಷ್ಟು ಓದಿ: ಪಹಲ್ಗಾಮ್ ದಾಳಿ ತನಿಖೆಯಲ್ಲಿ ಮಹತ್ವದ ಸುಳಿವು: ಉಗ್ರರು ಬಳಸಿದ್ದ ಫೋನ್​ಗೆ ಪಾಕಿಸ್ತಾನ ಬ್ಯಾಂಕ್​ ಲಿಂಕ್

ಅಮೆರಿಕದ ಮಾಜಿ ನೌಕಾಪಡೆ ಅಧಿಕಾರಿಯೂ ಆಗಿರುವ ಕಾಂಗ್ರೆಸ್ ಸದಸ್ಯ ಟಿಮ್ ಶೀಹಿ, “ವಿಶ್ವದ ನಂಬರ್ 1 ಉಗ್ರ ಒಸಾಮಾ ಬಿನ್ ಲಾಡೆನ್‌ನನ್ನು ಸುಮಾರು ಒಂದು ದಶಕ ಕಾಲ ಬಚ್ಚಿಟ್ಟುಕೊಂಡಿದ್ದೇ ಪಾಕಿಸ್ತಾನ. ಅದರ ಗುಪ್ತಚರ ಸಂಸ್ಥೆ ಐಎಸ್‌ಐ (ISI) ನಮ್ಮ ವಿರುದ್ಧದ ದಂಗೆಕೋರರಿಗೆ ಹಣ ನೀಡಿದೆ. ಇಂತಹ ದೇಶಗಳು ನಿಷ್ಪಕ್ಷಪಾತ ಮಧ್ಯಸ್ಥಿಕೆದಾರರು ಎನಿಸಿಕೊಳ್ಳಲು ಹೇಗೆ ಸಾಧ್ಯ? ಎಂದು ಫಾಕ್ಸ್ ನ್ಯೂಸ್ ಸಂದರ್ಶನದಲ್ಲಿ ಪ್ರಶ್ನಿಸಿದ್ದಾರೆ.

ಅಮೆರಿಕದ ನಿಜವಾದ ಮಿತ್ರರು ಯಾರು? ಮಾತುಕತೆಯ ಮೇಜಿನಲ್ಲಿ ಪಾಕಿಸ್ತಾನದ ಬದಲು ಪಶ್ಚಿಮ ಏಷ್ಯಾದಲ್ಲಿ ಅಮೆರಿಕದ ನಿಜವಾದ ಮಿತ್ರರಾಷ್ಟ್ರಗಳಾಗಿರುವ ಯುನೈಟೆಡ್ ಅರಬ್ ಎಮಿರೇಟ್ಸ್ (UAE), ಇಸ್ರೇಲ್ ಮತ್ತು ಸೌದಿ ಅರೇಬಿಯಾವನ್ನು ಸೇರಿಸಿಕೊಳ್ಳಬೇಕು. ಅಮೆರಿಕ ಇಸ್ರೇಲ್ ಮತ್ತು ಯುಎಇ ಜೊತೆ ದೃಢವಾಗಿ ನಿಲ್ಲಬೇಕು ಎಂದು ಟಿಮ್ ಶೀಹಿ ಒತ್ತಾಯಿಸಿದ್ದಾರೆ.

ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಹೇಳಿದ್ದೇನು? ಜೂನ್ 21ರಂದು ನಡೆದ ಸಭೆಯಲ್ಲಿ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಅವರು ಪಾಕಿಸ್ತಾನಿ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರ ಬಗ್ಗೆ ತಮಾಷೆಯಾಗಿ ಮಾತನಾಡಿದ್ದರು. ನನ್ನ ಜೀವನದಲ್ಲಿ ಇಬ್ಬರು ಪ್ರಮುಖ ವ್ಯಕ್ತಿಗಳಿದ್ದಾರೆ – ಒಬ್ಬರು ಭಾರತೀಯರು, ಮತ್ತೊಬ್ಬರು ಪಾಕಿಸ್ತಾನಿ. ಭಾರತೀಯ ವ್ಯಕ್ತಿ ನನ್ನ ಹೆಂಡತಿ (ಉಷಾ ಚಿಲುಕುರಿ ವ್ಯಾನ್ಸ್) ಮತ್ತು ಪಾಕಿಸ್ತಾನಿ ವ್ಯಕ್ತಿ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಎಂದು ವ್ಯಾನ್ಸ್ ಹೇಳಿದ್ದರು.

ಕಳೆದ ಮೂರು ತಿಂಗಳುಗಳಲ್ಲಿ ತಾನು ಬೇರೆಲ್ಲರಿಗಿಂತ ಹೆಚ್ಚಾಗಿ ಪಾಕ್ ಸೇನಾ ಮುಖ್ಯಸ್ಥರ ಜೊತೆ ಮಾತನಾಡಿದ್ದೇನೆ ಎಂದು ಅವರು ಹೇಳಿದ್ದರು. ಈ ಅತಿಯಾದ ಆತ್ಮೀಯತೆಯೇ ಈಗ ಅಮೆರಿಕದ ಒಳಗೆ ದೊಡ್ಡ ರಾಜಕೀಯ ವಿವಾದಕ್ಕೆ ಕಾರಣವಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ