AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ತಪಾಸಣೆಗೆ ಒಳಗಾಗುತ್ತಿರುವ ಅಮೆರಿಕ ಅಧ್ಯಕ್ಷ ಜೋ ಬೈಡನ್​: ಕಮಲಾ ಹ್ಯಾರಿಸ್​ಗೆ ಅಧಿಕಾರ ಹಸ್ತಾಂತರ

ಜೋ ಬೈಡೆನ್​ ಅವರು ವಾಡಿಕೆಯಂತೆ ವಾರ್ಷಿಕ ಕೊಲೊನೊಸ್ಕೊಪಿ ತಪಾಸಣೆ ಮಾಡಿಸಿಕೊಳ್ಳುತ್ತಿದ್ದು, ಇದಕ್ಕಾಗಿ ಅನಸ್ತೀಶಿಯಾ ತೆಗೆದುಕೊಳ್ಳಲಿದ್ದಾರೆ.

ಆರೋಗ್ಯ ತಪಾಸಣೆಗೆ ಒಳಗಾಗುತ್ತಿರುವ ಅಮೆರಿಕ ಅಧ್ಯಕ್ಷ ಜೋ ಬೈಡನ್​: ಕಮಲಾ ಹ್ಯಾರಿಸ್​ಗೆ ಅಧಿಕಾರ ಹಸ್ತಾಂತರ
ಜೋ ಬೈಡನ್​ ಮತ್ತು ಕಮಲಾ ಹ್ಯಾರಿಸ್​
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Nov 19, 2021 | 9:28 PM

ವಾಷಿಂಗ್​ಟನ್: ಆರೋಗ್ಯ ತಪಾಸಣೆಗೆ ಒಳಗಾಗುತ್ತಿರುವ ಅಮೆರಿಕ ಅಧ್ಯಕ್ಷ ಜೋ ಬೈಡನ್ ಸ್ವಲ್ಪ ಕಾಲ ಅಧ್ಯಕ್ಷರ ಅಧಿಕಾರವನ್ನು ಉಪಾಧ್ಯಕ್ಷ ಕಮಲಾ ಹ್ಯಾರಿಸ್ ಅವರಿಗೆ ಹಸ್ತಾಂತರಿಸಲಿದ್ದಾರೆ. ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಈ ಅವಧಿಯಲ್ಲಿ ವೆಸ್ಟ್​ ವಿಂಗ್​ನ ತಮ್ಮ ಮನೆಯಿಂದಲೇ ಕೆಲಸ ಮಾಡುತ್ತಾರೆ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಜೆನ್ ಪಸ್ಕಿ ತಿಳಿಸಿದ್ದಾರೆ. ಜೋ ಬೈಡೆನ್​ ಅವರು ವಾಡಿಕೆಯಂತೆ ವಾರ್ಷಿಕ ಕೊಲೊನೊಸ್ಕೊಪಿ ತಪಾಸಣೆ ಮಾಡಿಸಿಕೊಳ್ಳುತ್ತಿದ್ದು, ಇದಕ್ಕಾಗಿ ಅನಸ್ತೀಶಿಯಾ ತೆಗೆದುಕೊಳ್ಳಲಿದ್ದಾರೆ.

ಜಾರ್ಜ್​ ಡಬ್ಲ್ಯು ಬುಷ್ ಅವರು 2002 ಮತ್ತು 2007ರಲ್ಲಿ ಕೊಲೊನೊಸ್ಕೊಪಿ ತಪಾಸಣೆಗೆ ಒಳಗಾದ ಸಂದರ್ಭದಲ್ಲಿಯೂ ಅಮೆರಿಕ ಅಧ್ಯಕ್ಷರ ಅಧಿಕಾರವನ್ನು ಉಪಾಧ್ಯಕ್ಷರಿಗೆ ಹಸ್ತಾಂತರಿಸಲಾಗಿತ್ತು. ಅಧ್ಯಕ್ಷರ ಅಧಿಕಾರ ಹಸ್ತಾಂತರ ವಿಧಿ ವಿಧಾನವನ್ನು ಅಮೆರಿಕ ಸಂವಿಧಾನದಲ್ಲಿಯೇ ವಿಶದಪಡಿಸಲಾಗಿದೆ.

ಅಮೆರಿಕ ಅಧ್ಯಕ್ಷ ಜೋ ಬೈಡೆನ್ ನಾಳೆ (ನ.20) 79ನೇ ವರ್ಷಕ್ಕೆ ಪದಾರ್ಪಣೆ ಮಾಡಲಿದ್ದಾರೆ. ಅಮೆರಿಕದಲ್ಲಿ ಅಧಿಕಾರಕ್ಕೆ ಬಂದ ಅತಿ ಹಿರಿಯ ಅಧ್ಯಕ್ಷ ಎನಿಸಿಕೊಂಡಿದ್ದಾರೆ ಜೋ ಬೈಡೆನ್. 2024ರ ಮರುಚುನಾವಣೆಯಲ್ಲಿ ಅವರು ಸ್ಪರ್ಧಿಸುತ್ತಾರೆಯೇ ಎಂಬ ಬಗ್ಗೆ ಹಲವು ಊಹಾಪೋಹಗಳು ಚಾಲ್ತಿಯಲ್ಲಿವೆ. ಕಮಲಾ ಹ್ಯಾರಿಸ್ ಸಹ ಎರಡನೇ ಅವಧಿಗೆ ಸ್ಪರ್ಧಿಸಬಹುದು ಎಂದು ಹೇಳಲಾಗುತ್ತಿದೆ.

ಭಿನ್ನಾಭಿಪ್ರಾಯದ ಊಹಾಪೋಹ ಅಮೆರಿಕ ಉಪಾಧ್ಯಕ್ಷ ಸ್ಥಾನಕ್ಕೆ ಏರುವ ಮೂಲಕ ಇತಿಹಾಸ ಸೃಷ್ಟಿಸಿದ್ದ ಕಮಲಾ ಹ್ಯಾರಿಸ್​ ಮತ್ತು ಅಧ್ಯಕ್ಷ ಜೋ ಬೈಡನ್​ ನಡುವೆ ಭಿನ್ನಾಭಿಪ್ರಾಯ ಭುಗಿಲೆದ್ದಿದೆಯಾ ಎಂಬುದೊಂದು ಅನುಮಾನ ಹುಟ್ಟುಹಾಕುವಂಥ ವರದಿಯನ್ನು ಸಿಎನ್​ಎನ್​ ಅಂತಾರಾಷ್ಟ್ರೀಯ ಮಾಧ್ಯಮ ಪ್ರಕಟ ಮಾಡಿದೆ. ಹ್ಯಾರಿಸ್ ಸಾರ್ವಜನಿಕರೊಂದಿಗೆ ಸಂಪರ್ಕ ಬೆಳೆಸಿಕೊಂಡಿದ್ದಾರೆ. ಈ ಮೂಲಕ ಅವರ ಸಮಸ್ಯೆಗಳಿಗೆ ಸ್ಪಂದಿಸುತ್ತ ಹ್ಯಾರಿಸ್​ ತಮ್ಮ ಜನಪ್ರಿಯತೆ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಇದರಿಂದ ಅಧ್ಯಕ್ಷ ಜೋ ಬೈಡನ್​ ತಂಡ ಹತಾಶೆಗೆ ಒಳಗಾಗಿದ್ದು, ಬೇಕಂತಲೇ ಆಡಳಿತ ವಿಷಯದಲ್ಲಿ ಕಮಲಾ ಹ್ಯಾರಿಸ್​​ ಮತ್ತು ಅವರ ತಂಡದ ಸಿಬ್ಬಂದಿಯನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದು ಉಪಾಧ್ಯಕ್ಷೆ ಹ್ಯಾರಿಸ್​ ಬೆಂಬಲಿಗರು, ಅವರ ಆಪ್ತರು ಆರೋಪ ಮಾಡುತ್ತಿದ್ದಾರೆ ಎಂದು ಸಿಎನ್​ಎನ್​ ವರದಿಯಲ್ಲಿ ಉಲ್ಲೇಖಿಸಿದೆ.

ಇದನ್ನೂ ಓದಿ: ಅಮೆರಿಕದಲ್ಲಿ ಅಧ್ಯಕ್ಷ ಬೈಡನ್​-ಉಪಾಧ್ಯಕ್ಷೆ ಕಮಲಾ ಹ್ಯಾರಿಸ್​ ನಡುವೆ ಭಿನ್ನಾಭಿಪ್ರಾಯ !; ವೈಯಕ್ತಿಕ ಸ್ಪರ್ಧೆಗೆ ಬಿದ್ದರಾ ನಾಯಕರು? ಇದನ್ನೂ ಓದಿ: ಚೀನಾ, ರಷ್ಯಾ ಬಿಡನ್​ಗೆ ಶುಭಾಶಯ ಕೋರಿಲ್ಲ! ಏನಿದರ ಒಳಮರ್ಮ?

Published On - 9:24 pm, Fri, 19 November 21

ಕಟ್ಟಡದ ಒಂದು ಭಾಗ ಕುಸಿತ, ಒಳಗಿಂದ ಸಹಾಯಕ್ಕಾಗಿ ಅಂಗಲಾಚುತ್ತಿರುವ ಜನ
ಕಟ್ಟಡದ ಒಂದು ಭಾಗ ಕುಸಿತ, ಒಳಗಿಂದ ಸಹಾಯಕ್ಕಾಗಿ ಅಂಗಲಾಚುತ್ತಿರುವ ಜನ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್