Johnson & Johnson: ಮಕ್ಕಳ ಪೌಡರ್​ನಿಂದ ಕ್ಯಾನ್ಸರ್ ವಿಚಾರ: ಸಂತ್ರಸ್ತರಿಗೆ 8.9 ಬಿಲಿಯನ್ ಡಾಲರ್ ಪಾವತಿಸಲು ಸಿದ್ಧ ಎಂದ ಜಾನ್ಸನ್ ಆ್ಯಂಡ್ ಜಾನ್ಸನ್

ಯುಎಸ್ ಕಂಪನಿ ಜಾನ್ಸನ್ ಆಂಡ್ ಜಾನ್ಸನ್ (Johnson & Johnson) ಕಂಪನಿಯ ಟಾಲ್ಕಮ್ ಪೌಡರ್ ಕ್ಯಾನ್ಸರ್​ಗೆ ಕಾರಣವೆಂದು ಆರೋಪಿಸಿರುವ ಸಾವಿರಾರು ಸಂತ್ರಸ್ತರಿಗೆ 8.9 ಬಿಲಿಯನ್ ಡಾಲರ್  ಪರಿಹಾರ ಪಾವತಿಸಲು ಕಂಪನಿ ಒಪ್ಪಿಕೊಂಡಿದೆ.

Johnson & Johnson: ಮಕ್ಕಳ ಪೌಡರ್​ನಿಂದ ಕ್ಯಾನ್ಸರ್ ವಿಚಾರ: ಸಂತ್ರಸ್ತರಿಗೆ 8.9 ಬಿಲಿಯನ್ ಡಾಲರ್ ಪಾವತಿಸಲು ಸಿದ್ಧ ಎಂದ ಜಾನ್ಸನ್ ಆ್ಯಂಡ್ ಜಾನ್ಸನ್
ಜಾನ್ಸನ್ ಆ್ಯಂಡ್ ಜಾನ್ಸನ್ ಪೌಡರ್
Follow us
ನಯನಾ ರಾಜೀವ್
|

Updated on:Apr 05, 2023 | 9:59 AM

ಯುಎಸ್ ಕಂಪನಿ ಜಾನ್ಸನ್ ಆಂಡ್ ಜಾನ್ಸನ್ (Johnson & Johnson) ಕಂಪನಿಯ ಟಾಲ್ಕಮ್ ಪೌಡರ್ ಕ್ಯಾನ್ಸರ್​ಗೆ ಕಾರಣವೆಂದು ಆರೋಪಿಸಿರುವ ಸಾವಿರಾರು ಸಂತ್ರಸ್ತರಿಗೆ 8.9 ಬಿಲಿಯನ್ ಡಾಲರ್  ಪರಿಹಾರ ಪಾವತಿಸಲು ಕಂಪನಿ ಒಪ್ಪಿಕೊಂಡಿದೆ. ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪನಿಯ ಟಾಲ್ಕ್ ಉತ್ಪನ್ನಗಳನ್ನು ಬಳಸುವುದರಿಂದ ತಾವು ಅಂಡಾಶಯದ ಕ್ಯಾನ್ಸರ್ ಪೀಡಿತರಾಗಿದ್ದೇವೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದು, ಈ ಮಹಿಳೆಯ ಪರವಾಗಿ ಅಮೆರಿಕದ ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು. ಈ ತೀರ್ಪನ್ನು ಪರಿಶೀಲಿಸಬೇಕು ಅಥವಾ ರದ್ದು ಪಡಿಸಬೇಕು ಎಂದು ಜಾನ್ಸನ್ ಮತ್ತು ಜಾನ್ಸನ್ ಕಂಪನಿಯು ಅಮೆರಿಕ ಸುಪ್ರೀಂ ಕೋರ್ಟ್‌ಗೆ ಪರಿಶೀಲನಾ ಅರ್ಜಿ ಸಲ್ಲಿಸಿದ್ದರು.

ಈ ಪ್ರಕರಣ 2 ಬಿಲಿಯನ್ ಅಮೇರಿಕನ್ ಡಾಲರ್ ಮೊತ್ತದ್ದಾಗಿದೆ. ಈ ಪ್ರಕರಣದಲ್ಲಿ ಉನ್ನತ ಮಟ್ಟದ ವಕೀಲರು ವಾದ-ಪ್ರತಿವಾದ ಮಂಡಿಸುತ್ತಿದ್ದಾರೆ. ಕೆಲವು ಅಸಾಮಾನ್ಯ ಮೈತ್ರಿಗಳಲ್ಲಿ, ಮಾಜಿ ಸ್ವತಂತ್ರ ಸಲಹೆಗಾರ ಕೆನ್ನೆತ್ ಸ್ಟಾರ್ ಸೇರಿದಂತೆ ಹಲವಾರು, ಜಾನ್ಸನ್ ಆ್ಯಂಡ್ ಜಾನ್ಸನ್ ವಿರುದ್ಧ ಮೊಕದ್ದಮೆ ಹೂಡಿದ ಮಹಿಳೆಯ ಪರ ನಿಂತಿದ್ದಾರೆ.

ಮತ್ತಷ್ಟು ಓದಿ: Johnson & Johnson: ಮಹಾರಾಷ್ಟ್ರದಲ್ಲಿ ಜಾನ್ಸನ್ ಆ್ಯಂಡ್ ಜಾನ್ಸನ್ ಬೇಬಿ ಪೌಡರ್ ಲೈಸೆನ್ಸ್​ ರದ್ದು

ಪ್ರಾರಂಭದಲ್ಲಿ ಈ ಪ್ರಕರಣವನ್ನು ಮಿಸ್ಸೌರಿಯ ರಾಜ್ಯ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಲಾಯಿತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಿಸ್ಸೌರಿ ನ್ಯಾಯಾಲಯವು ಅಂಡಾಶಯ ಕ್ಯಾನ್ಸರ್ಗೆ ತುತ್ತಾದ 22 ಮಹಿಳೆಯರಿಗೆ ಕಂಪನಿ 74.7 ಬಿಲಿಯನ್ ಡಾಲರ್ ಮೊತ್ತದ ಪರಿಹಾರವನ್ನು ನೀಡಬೇಕು ಎಂದು ತೀರ್ಪು ನೀಡಿತ್ತು. ಈ ವಿಚಾರಣೆಯು ನ್ಯಾಯಯುತವಾಗಿ ನಡೆಯಲಿಲ್ಲ, ತೀರ್ಪು ಸರಿ ಇಲ್ಲ ಎಂದು ಕಂಪನಿಯು ವಾದಿಸಿತ್ತು.

ಈ ಟಾಲ್ಕ್ ಬಳಕೆಯಿಂದ ಆಗುವ ಹಾನಿಯ ಕುರಿತು ಕಂಪನಿಗೆ ತಿಳಿದಿದ್ದರೂ ಕೂಡ ಕಂಪನಿ ಈ ಉತ್ಪನ್ನಗಳನ್ನು ಮಾರಾಟ ಮಾಡುತ್ತಿದೆ. ಈ ಉತ್ಪನ್ನಗಳ ಸುರಕ್ಷತೆಯನ್ನು ದಶಕಗಳಿಂದ ತಪ್ಪಾಗಿ ನಿರೂಪಿಸಲಾಗಿದೆ ಎಂದು ಬರ್ಲಿಸನ್ ತಮ್ಮ ತೀರ್ಪಿನಲ್ಲಿ ಬರೆದಿದ್ದರು. ಸಂಸ್ಥೆಯು ಎಂದಿಗೂ ತಪ್ಪನ್ನು ಒಪ್ಪಿಕೊಂಡಿಲ್ಲ ಆದರೆ ಮೇ 2020 ರಲ್ಲಿ ಯುನೈಟೆಡ್ ಸ್ಟೇಟ್ಸ್ ಮತ್ತು ಕೆನಡಾದಲ್ಲಿ ಅದರ ಟಾಲ್ಕ್ ಆಧಾರಿತ ಬೇಬಿ ಪೌಡರ್ ಮಾರಾಟವನ್ನು ನಿಲ್ಲಿಸಿದೆ. ಇದೀಗ ಸಂತ್ರಸ್ತರಿಗೆ 8.9 ಬಿಲಿಯನ್ ಡಾಲರ್ ಪರಿಹಾರ ನೀಡುವುದಾಗಿ ಘೋಷಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:52 am, Wed, 5 April 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ