AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೋ ಬೈಡನ್, ಕಮಲಾ ಹ್ಯಾರಿಸ್ ಪದಗ್ರಹಣಕ್ಕೆ ಕ್ಷಣಗಣನೆ; ವಾಷಿಂಗ್​ಟನ್​​ನಲ್ಲಿ ಮನೆ ಮಾಡಿದೆ ಸಂಭ್ರಮ

ಅಮೆರಿಕದ 46ನೇ ಅಧ್ಯಕ್ಷರಾಗಿ ಜೋ ಬೈಡನ್ ಇನ್ನು ಕೆಲವೇ ಕ್ಷಣಗಳಲ್ಲಿ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಹಿಂದೆ ಅವರು ಬರಾಕ್‌ ಒಬಾಮಾ ಆಡಳಿತಾವಧಿಯಲ್ಲಿ ಉಪಾಧ್ಯಕ್ಷರಾಗಿದ್ದರು.

ಜೋ ಬೈಡನ್, ಕಮಲಾ ಹ್ಯಾರಿಸ್ ಪದಗ್ರಹಣಕ್ಕೆ ಕ್ಷಣಗಣನೆ; ವಾಷಿಂಗ್​ಟನ್​​ನಲ್ಲಿ ಮನೆ ಮಾಡಿದೆ ಸಂಭ್ರಮ
ಅಮೆರಿದ ನೂತನ ಅಧ್ಯಕ್ಷ ಜೋ ಬೈಡನ್ ಮತ್ತು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್
Ghanashyam D M | ಡಿ.ಎಂ.ಘನಶ್ಯಾಮ
|

Updated on:Jan 20, 2021 | 9:56 PM

Share

ವಾಷಿಂಗ್​ಟನ್​: ಅಮೆರಿಕದ ನೂತನ ಅಧ್ಯಕ್ಷ ಜೋ ಬೈಡನ್ ಮತ್ತು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಪದಗ್ರಹಣ ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಇವರಿಬ್ಬರೂ ಈಗಾಗಲೇ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುವ ಯುಎಸ್ ಕಾಪಿಟಲ್ ಕಟ್ಟಡ ಸಮುಚ್ಚಯಕ್ಕೆ ಬಂದಿದ್ದಾರೆ.

ಅಮೆರಿಕದ 46ನೇ ಅಧ್ಯಕ್ಷರಾಗಿ ಜೋ ಬೈಡನ್ ಇನ್ನು ಕೆಲವೇ ಕ್ಷಣಗಳಲ್ಲಿ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಹಿಂದೆ ಅವರು ಬರಾಕ್‌ ಒಬಾಮಾ ಆಡಳಿತಾವಧಿಯಲ್ಲಿ ಉಪಾಧ್ಯಕ್ಷರಾಗಿದ್ದರು.

‘ಅಮರಿಕಕ್ಕೆ ಇದು ಹೊಸ ದಿನ’ ಎಂದು ಟ್ವೀಟ್ ಮಾಡಿರುವ ಬೈಡೆನ್, ಪದಗ್ರಹಣ ಸಮಾರಂಭದ ನೇರ ಪ್ರಸಾರ ವೀಕ್ಷಿಸಿ ಎಂದಿದ್ದಾರೆ. ಬೈಡನ್‌ ಅವರಿಗೆ ಅಮೆರಿಕದ ಮುಖ್ಯ ನ್ಯಾಯಮೂರ್ತಿ ಜಾನ್‌ ರಾಬರ್ಟ್ಸ್, ಕಮಲಾ ಅವರಿಗೆ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಸೋನಿಯಾ ಸೋಟೊಮೇಯರ್‌ ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ.

ಭಾರತೀಯ ಕಾಲಮಾನ ರಾತ್ರಿ 10:30ಕ್ಕೆ ಜೋ ಬೈಡನ್‌ ಮತ್ತು ಕಮಲಾ ಹ್ಯಾರಿಸ್‌ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ನೂತನ ಅಧ್ಯಕ್ಷನ ಬರಮಾಡಿಕೊಳ್ಳಲು ಅಮೆರಿಕ ಸಿದ್ಧ; ಕೊರೊನಾ ಕಾರಣಕ್ಕೆ ಸಮಾರಂಭ ಸರಳ.. ಬೈಡನ್​ ಭಾಷಣದ ವಿಷಯವೇನು?

Published On - 9:52 pm, Wed, 20 January 21