AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದ ಹಿಂದೂಗಳ ರಕ್ಷಣೆಯ ಪ್ರತಿಜ್ಞೆ; ಭಾರತದೊಂದಿಗಿನ ಸಂಬಂಧ ಬಿಗಿಗೊಳಿಸುವುದಾಗಿ ಟ್ರಂಪ್ ಘೋಷಣೆ

ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆಯ ಪ್ರಚಾರ ಭರದಿಂದ ಸಾಗುತ್ತಿದೆ. ಈ ವೇಳೆ ತಮ್ಮ ಪ್ರತಿಸ್ಪರ್ಧಿಯಾಗಿರುವ ಕಮಲಾ ಹ್ಯಾರಿಸ್ ವಿರುದ್ಧ ಟೀಕಾ ಪ್ರಹಾರ ನಡೆಸಿರುವ ಡೊನಾಲ್ಡ್ ಟ್ರಂಪ್, ಕಮಲಾ ಹ್ಯಾರಿಸ್ ಹಿಂದೂಗಳನ್ನು ನಿರ್ಲಕ್ಷ್ಯಿಸಿದ್ದಾರೆ. ನಾನು ಅಮೆರಿಕದ ಹಿಂದೂಗಳ ರಕ್ಷಣೆಗೆ ಪ್ರತಿಜ್ಞೆ ಮಾಡುತ್ತೇನೆ ಮತ್ತು ಭಾರತದ ಪ್ರಧಾನಿ ಮೋದಿಯೊಂದಿಗಿನ ಸಂಬಂಧವನ್ನು ಇನ್ನಷ್ಟು ಉತ್ತಮಗೊಳಿಸುತ್ತೇನೆ ಎಂದು ಪ್ರತಿಜ್ಞೆ ಮಾಡಿದ್ದಾರೆ.

ಅಮೆರಿಕದ ಹಿಂದೂಗಳ ರಕ್ಷಣೆಯ ಪ್ರತಿಜ್ಞೆ; ಭಾರತದೊಂದಿಗಿನ ಸಂಬಂಧ ಬಿಗಿಗೊಳಿಸುವುದಾಗಿ ಟ್ರಂಪ್ ಘೋಷಣೆ
ಟ್ರಂಪ್
ಸುಷ್ಮಾ ಚಕ್ರೆ
|

Updated on: Nov 01, 2024 | 8:37 AM

Share

ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷೀಯ ಅಭ್ಯರ್ಥಿಯಾಗಿರುವ ಡೊನಾಲ್ಡ್ ಟ್ರಂಪ್ ತಮ್ಮ ಪ್ರತಿಸ್ಪರ್ಧಿಯಾಗಿರುವ ಕಮಲಾ ಹ್ಯಾರಿಸ್ ವಿರುದ್ಧ ವಾಗ್ದಾಳಿ ನಡೆಸಲು ಹಿಂದೂ ಪರ ತಂತ್ರವನ್ನು ಬಳಸಿದ್ದಾರೆ. ಜೋ ಬೈಡೆನ್ ಮತ್ತು ಕಮಲಾ ಹ್ಯಾರಿಸ್ ಪ್ರಪಂಚದಾದ್ಯಂತ ಹಿಂದೂಗಳನ್ನು ಕಡೆಗಣಿಸಿದ್ದಾರೆ. ಹಿಂದೂ ಅಮೆರಿಕನ್ನರತ್ತ ಗಮನ ಹರಿಸಲು ವಿಫಲರಾಗಿದ್ದಾರೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ದೀಪಾವಳಿಯ ಸಂದರ್ಭದಲ್ಲಿ ಜಗತ್ತಿನಾದ್ಯಂತ ಇರುವ ಹಿಂದೂಗಳಿಗೆ ಶುಭ ಹಾರೈಸಿದ್ದಾರೆ. ಹಾಗೇ, ಬಾಂಗ್ಲಾದೇಶದ ಹಿಂದೂಗಳು ಎದುರಿಸುತ್ತಿರುವ ದೌರ್ಜನ್ಯಗಳನ್ನು ಟ್ರಂಪ್ ಖಂಡಿಸಿದ್ದಾರೆ. ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಪದಚ್ಯುತಗೊಳಿಸಿದ ವಿದ್ಯಾರ್ಥಿಗಳ ಪ್ರತಿಭಟನೆಯ ನಂತರ ಬಾಂಗ್ಲಾದೇಶ ಸಾಮಾಜಿಕ ಅಶಾಂತಿಯನ್ನು ಅನುಭವಿಸುತ್ತಿದೆ. ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರವನ್ನು ಸ್ಥಾಪಿಸಲಾಗಿದೆ ಆದರೆ ಬಾಂಗ್ಲಾದೇಶದ ಹಿಂದೂಗಳು, ಕ್ರಿಶ್ಚಿಯನ್ನರು, ಆದಿವಾಸಿಗಳು ಮತ್ತು ಗುಡ್ಡಗಾಡು ಬುಡಕಟ್ಟುಗಳ ಮೇಲಿನ ಇಸ್ಲಾಮಿಸ್ಟ್ ದಾಳಿಗಳನ್ನು ಪರಿಹರಿಸಲು ಹೆಣಗಾಡುತ್ತಿದೆ.

ಇದನ್ನೂ ಓದಿ: ಮೋದಿ ಅತ್ಯಂತ ಒಳ್ಳೆ ಮನುಷ್ಯ; “ಗೆಳೆಯ”ನನ್ನು ಹೊಗಳಿದ ಡೊನಾಲ್ಡ್ ಟ್ರಂಪ್

ಈ ಹಿನ್ನೆಲೆಯಲ್ಲಿ ಹಿಂದೂ ಅಮೆರಿಕನ್ನರನ್ನು ಧಾರ್ಮಿಕ ವಿರೋಧಿ ಅಜೆಂಡಾಗಳಿಂದ ರಕ್ಷಿಸುವ ಅಗತ್ಯವನ್ನು ಒತ್ತಿಹೇಳಿರುವ ಟ್ರಂಪ್ ಮುಂಬರುವ ಚುನಾವಣೆಯಲ್ಲಿ ಗೆದ್ದರೆ ತಮ್ಮ “ಉತ್ತಮ ಸ್ನೇಹಿತ” ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಯುಎಸ್-ಭಾರತ ಸಂಬಂಧವನ್ನು ಬಲಪಡಿಸುವುದಾಗಿ ಭರವಸೆ ನೀಡಿದರು. “ನಾವು ನಿಮ್ಮ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತೇವೆ. ನನ್ನ ಅಧಿಕಾರದಲ್ಲಿ ಆಡಳಿತ ಉತ್ತಮವಾಗಿರುತ್ತದೆ. ನಾವು ಭಾರತ ಮತ್ತು ನನ್ನ ಉತ್ತಮ ಸ್ನೇಹಿತ ಪ್ರಧಾನಿ ಮೋದಿಯವರೊಂದಿಗೆ ನಮ್ಮ ಉತ್ತಮ ಪಾಲುದಾರಿಕೆಯನ್ನು ಬಲಪಡಿಸುತ್ತೇವೆ ಎಂದು ಟ್ರಂಪ್ ಹೇಳಿದ್ದಾರೆ.

“ಬಾಂಗ್ಲಾದೇಶದಲ್ಲಿ ಜನಸಮೂಹದಿಂದ ದಾಳಿ ಮತ್ತು ಲೂಟಿಗೆ ಒಳಗಾಗುತ್ತಿರುವ ಹಿಂದೂಗಳು, ಕ್ರಿಶ್ಚಿಯನ್ನರು ಮತ್ತು ಇತರ ಅಲ್ಪಸಂಖ್ಯಾತರ ಮೇಲಿನ ಅನಾಗರಿಕ ಹಿಂಸಾಚಾರವನ್ನು ನಾನು ಬಲವಾಗಿ ಖಂಡಿಸುತ್ತೇನೆ, ಇದು ಒಟ್ಟಾರೆ ಅವ್ಯವಸ್ಥೆಯ ಸ್ಥಿತಿಯಲ್ಲಿಯೇ ಉಳಿದಿದೆ” ಎಂದು ಮುಂಬರುವ ನವೆಂಬರ್ 5 ರ ಯುಎಸ್ ಅಧ್ಯಕ್ಷೀಯ ಚುನಾವಣೆಗೆ ರಿಪಬ್ಲಿಕನ್ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಇದನ್ನೂ ಓದಿ: ಡೊನಾಲ್ಡ್ ಟ್ರಂಪ್ ವಿರುದ್ಧ ನೀಲಿಚಿತ್ರ ತಾರೆಯರಿಂದ ‘ಹ್ಯಾಂಡ್ಸ್ ಆಫ್ ಮೈ ಪೋರ್ನ್’ ಅಭಿಯಾನ ಆರಂಭ

ಟ್ರಂಪ್ ತಾವು ಅಧ್ಯಕ್ಷರಾಗಿದ್ದ ಅವಧಿಯಲ್ಲಿ 2017 ರಿಂದ 2020 ರವರೆಗೆ ಸತತ ನಾಲ್ಕು ವರ್ಷಗಳ ಕಾಲ ಶ್ವೇತಭವನದಲ್ಲಿ ದೀಪಾವಳಿಯನ್ನು ಆಚರಿಸಿದರು. ಮಾಜಿ ಪ್ರಥಮ ಮಹಿಳೆ ಮತ್ತು ಅವರ ಪತ್ನಿ ಮೆಲಾನಿಯಾ ಟ್ರಂಪ್ ಮತ್ತು ಮಗಳು ಇವಾಂಕಾ ಟ್ರಂಪ್ ಕೂಡ ಅವರೊಂದಿಗೆ ದೀಪಾವಳಿ ಆಚರಣೆಯಲ್ಲಿ ಪಾಲ್ಗೊಂಡಿದ್ದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್