AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಮ್ ಜಾಂಗ್​ ಉನ್​ಗೆ ಕಾರನ್ನು ಉಡುಗೊರೆಯಾಗಿ ಕೊಟ್ಟ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್

ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ವಿಶೇಷ ಉಡುಗೊರೆ ಕಳುಹಿಸಿದ್ದಾರೆ. ಕಿಮ್ ಅವರ ವೈಯಕ್ತಿಕ ಬಳಕೆಗಾಗಿ ಅವರು ರಷ್ಯಾದ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ಮಂಗಳವಾರ (ಫೆಬ್ರವರಿ 20) ಅಧಿಕೃತ ಮಾಧ್ಯಮ ಈ ಮಾಹಿತಿಯನ್ನು ನೀಡಿದೆ. ಈ ಉಡುಗೊರೆಯು ವಿಶ್ವಸಂಸ್ಥೆಯ ನಿಯಮಗಳ ಉಲ್ಲಂಘನೆಯಾಗಿರಬಹುದು ಎಂದು ಹೇಳಲಾಗುತ್ತಿದೆ.

ಕಿಮ್ ಜಾಂಗ್​ ಉನ್​ಗೆ ಕಾರನ್ನು ಉಡುಗೊರೆಯಾಗಿ ಕೊಟ್ಟ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್
ಕಿಮ್ ಜಾಂಗ್ ಉನ್-ಪುಟಿನ್Image Credit source: BBC
ನಯನಾ ರಾಜೀವ್
|

Updated on:Feb 20, 2024 | 9:55 AM

Share

ಉಭಯ ದೇಶಗಳ ನಡುವೆ ಎಷ್ಟು ಪ್ರೀತಿ, ವಿಶ್ವಾಸವಿದೆ ಎಂದು  ತೋರಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್(Vladimir Putin) ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್​ ಜಾಂಗ್​ ಉನ್(Kim Jong Un)​ಗೆ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ಆ ಕಾರು ರಷ್ಯಾದಲ್ಲೇ ಸಿದ್ಧಪಡಿಸಲಾಗಿದ್ದು, ಹಲವು ವಿಶೇಷತೆಯನ್ನು ಹೊಂದಿದೆ. ಈ ಉಡುಗೊರೆಯು ವಿಶ್ವಸಂಸ್ಥೆಯ ನಿಯಮವನ್ನು ಉಲ್ಲಂಘಿಸಿದಂತಾಗುತ್ತದೆ ಎಂದು ಹೇಳಲಾಗುತ್ತಿದೆ. ವಿಶ್ವಸಂಸ್ಥೆಯು ರಷ್ಯಾ ಮತ್ತು ಉತ್ತರ ಕೊರಿಯಾ ನಡುವಿನ ವಹಿವಾಟುಗಳನ್ನು ನಿಷೇಧಿಸಿದೆ.

ಮಾಧ್ಯಮ ಸಂಸ್ಥೆ ಕೆಸಿಎನ್‌ಎ ಪ್ರಕಾರ, ಫೆಬ್ರವರಿ 18 ರಂದು ರಷ್ಯಾದ ಕಾರನ್ನು ಉತ್ತರ ಕೊರಿಯಾದ ಕಿಮ್‌ನ ಸಹಾಯಕನಿಗೆ ಹಸ್ತಾಂತರಿಸಲಾಯಿತು. ಕಿಮ್ ಸಹೋದರಿ ಪುಟಿನ್ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ ಮತ್ತು ಈ ಉಡುಗೊರೆಯು ಇಬ್ಬರು ನಾಯಕರ ನಡುವಿನ ವೈಯಕ್ತಿಕ ಸಂಬಂಧವನ್ನು ಸ್ಪಷ್ಟಪಡಿಸುತ್ತದೆ ಮತ್ತು ಕಿಮ್ ಜಾಂಗ್ ಉನ್ ಪುಟಿನ್ ಅವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ, ಪುಟಿನ್ ಅವರನ್ನು ಭೇಟಿ ಮಾಡಲು ಕಿಮ್ ರಷ್ಯಾವನ್ನು ತಲುಪಿದ್ದರು, ಅಲ್ಲಿ ಅವರು ಪುಟಿನ್ ಅವರ ಕಾರಿನಲ್ಲಿ ಕುಳಿತುಕೊಂಡರು. ಈ ವೇಳೆ ಪುಟಿನ್ ಅವರ ಕಾರು ‘ಔರಸ್ ಲಿಮೋಸಿನ್’ ಬಗ್ಗೆ ಕಿಮ್ ಆಸಕ್ತಿ ತೋರಿದ್ದು, ಇದೀಗ ಪುಟಿನ್ ಅವರದ್ದೇ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ.

ಮತ್ತಷ್ಟು ಓದಿ:Kim Jong Un: ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ 40 ದಿನಗಳಿಂದ ಕಾಣಿಸ್ತಿಲ್ವಂತೆ, ಆರೋಗ್ಯದ ಬಗ್ಗೆ ಮತ್ತೆ ಊಹಾಪೋಹ

ಕಾರಿನ ಬೆಲೆ ಎಷ್ಟು? ಮಾಧ್ಯಮ ವರದಿಗಳ ಪ್ರಕಾರ, ಪುಟಿನ್ ಅವರು ಆರಿಸ್ ಮೋಟಾರ್ ಕಂಪನಿಯ ಕಾರನ್ನು ಕಿಮ್‌ಗೆ ನೀಡಿದ್ದಾರೆ. ಆರಿಸ್ ಕಂಪನಿಯ ಕಾರುಗಳ ಆರಂಭಿಕ ಬೆಲೆ ಸುಮಾರು 4 ಕೋಟಿ ರೂ.ಗಳಿಂದ ಪ್ರಾರಂಭವಾಗುತ್ತದೆ, ಇದು ರೋಲ್ಸ್ ರಾಯ್ಸ್ ಬೆಲೆಗೆ ಸಮನಾಗಿರುತ್ತದೆ.

ಕಿಮ್‌ಗೆ ಕಾರುಗಳೆಂದರೆ ಒಲವು ರಷ್ಯಾದಿಂದ ಉತ್ತರ ಕೊರಿಯಾಕ್ಕೆ ಯಾವ ಮಾದರಿ ಕಾರನ್ನು ಕಳುಹಿಸಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿಲ್ಲ. ಕಿಮ್‌ಗೆ ಆಟೋಮೊಬೈಲ್‌ಗಳೆಂದರೆ ತುಂಬಾ ಇಷ್ಟ ಎಂದು ನಂಬಲಾಗಿದೆ ಮತ್ತು ಅವರ ಬಳಿ ಅನೇಕ ವಿದೇಶಿ ಐಷಾರಾಮಿ ಕಾರುಗಳಿವೆ.

ಕೊರಿಯಾ ಉಕ್ರೇನ್ ಯುದ್ಧಕ್ಕೆ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತದೆ ಉಭಯ ದೇಶಗಳ ನಡುವೆ ಆಮದು-ರಫ್ತು ವೇಗವಾಗಿ ಹೆಚ್ಚಿದೆ. ಉಕ್ರೇನ್ ವಿರುದ್ಧದ ಯುದ್ಧದಲ್ಲಿ ಬಳಸಿದ ಫಿರಂಗಿ, ರಾಕೆಟ್ ಮತ್ತು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಉತ್ತರ ಕೊರಿಯಾ ಪೂರೈಸುತ್ತದೆ ಎಂದು ನಂಬಲಾಗಿದೆ. ಆದಾಗ್ಯೂ, ಉತ್ತರ ಕೊರಿಯಾ ರಷ್ಯಾಕ್ಕೆ ಶಸ್ತ್ರಾಸ್ತ್ರಗಳನ್ನು ಕಳುಹಿಸಿರುವುದನ್ನು ನಿರಾಕರಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:54 am, Tue, 20 February 24

‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!