AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಶ್ಚಿತಾರ್ಥ ಮುಗಿದು ವಾರವಷ್ಟೇ ಕಳೆದಿತ್ತು, ರಷ್ಯಾದ ಕ್ಷಿಪಣಿ ದಾಳಿಗೆ ಉಕ್ರೇನ್ ಕರಾವಳಿಯಲ್ಲಿ ಕೇರಳದ ನಾವಿಕ ಬಲಿ

ನಿಶ್ಚಿತಾರ್ಥ ಮುಗಿದು ಕೇವಲ ಒಂದು ವಾರವಷ್ಟೇ ಆಗಿತ್ತು, ಮದುವೆಯ ಕನಸುಗಳು ಚಿಗುರಿದ್ದವು. ಆದರೆ ರಷ್ಯಾ-ಉಕ್ರೇನ್ ಯುದ್ಧದ ಜ್ವಾಲೆಗೆ ಕೇರಳದ 26 ವರ್ಷದ ನಾವಿಕ ಅಖಿಲ್ ಜೋಯನ್ ಬಲಿಯಾಗಿದ್ದಾರೆ. ಉಕ್ರೇನ್‌ನ ಒಡೆಸ್ಸಾ ಬಂದರು ಕರಾವಳಿಯಲ್ಲಿ ನಡೆದ ರಷ್ಯನ್ ಕ್ಷಿಪಣಿ ದಾಳಿಯಲ್ಲಿ ನಾಲ್ವರು ಭಾರತೀಯರ ಪೈಕಿ ಅಖಿಲ್ ಒಬ್ಬರು. ಕುಟುಂಬಕ್ಕೆ ಉತ್ತಮ ಭವಿಷ್ಯ ಕಟ್ಟಿಕೊಡುವ ಕನಸು ಕಂಡಿದ್ದ ಯುವಕನ ದುರಂತ ಅಂತ್ಯ ಇಡೀ ಊರನ್ನೇ ಶೋಕಕ್ಕೆ ದೂಡಿದೆ.

ನಿಶ್ಚಿತಾರ್ಥ ಮುಗಿದು ವಾರವಷ್ಟೇ ಕಳೆದಿತ್ತು, ರಷ್ಯಾದ ಕ್ಷಿಪಣಿ ದಾಳಿಗೆ ಉಕ್ರೇನ್ ಕರಾವಳಿಯಲ್ಲಿ ಕೇರಳದ ನಾವಿಕ ಬಲಿ
ಅಖಿಲ್
ನಯನಾ ರಾಜೀವ್
|

Updated on:Jul 21, 2026 | 9:37 AM

Share

ಟೆಹ್ರಾನ್, ಜುಲೈ 21: ನಿಶ್ಚಿತಾರ್ಥ ಮುಗಿದು ಕೇವಲ ಒಂದು ವಾರವಷ್ಟೇ ಆಗಿತ್ತು, ಕೆಲವೇ ತಿಂಗಳುಗಳಲ್ಲಿ ಮದುವೆಯಾಗುವುದು ಕೂಡ ನಿಶ್ಚಯವಾಗಿತ್ತು. ಹೊಸ ಕನಸುಗಳು, ಹೊಸ ಕನಸುಗಳು, ಹೊಸ ಮನೆ ಮತ್ತು ಕುಟುಂಬಕ್ಕೆ ಉತ್ತಮ ಭವಿಷ್ಯ ಕಟ್ಟಿಕೊಡುವ ಹಂಬಲ. ಆದರೆ ವಿಧಿ ಆಟವೇ ಬೇರೆಯಾಗಿತ್ತು. ಸಾವಿರಾರು ಮೈಲಿಗಳ ದೂರದಲ್ಲಿ ನಡೆಯುತ್ತಿರುವ ರಷ್ಯಾ-ಉಕ್ರೇನ್(Ukraine) ಯುದ್ಧದ ಜ್ವಾಲೆಗೆ ಕೇರಳದ 26 ವರ್ಷದ ಅಮಾಯಕರೊಬ್ಬರು ಬಲಿಯಾಗಿದ್ದಾರೆ.

ಕೇರಳದ ಕಾಸರಗೋಡು ಜಿಲ್ಲೆಯ ವೆಲ್ಲರಿಕ್ಕುಂಡು ನಿವಾಸಿ, ನಾವಿಕ ಅಖಿಲ್ ಜೋಯನ್ ಉಕ್ರೇನ್‌ನ ಒಡೆಸಾ ಬಂದರು ಕರಾವಳಿಯಲ್ಲಿ ರಷ್ಯಾದ ಕ್ಷಿಪಣಿ ದಾಳಿಗೆ ಬಲಿಯಾದ ನಾಲ್ವರು ಭಾರತೀಯರಲ್ಲಿ ಒಬ್ಬರು.

ನಿಶ್ಚಿತಾರ್ಥವಾಗಿ ತಿಂಗಳು ಕಳೆಯುವಷ್ಟರಲ್ಲೇ ವಾಪಸ್ ಹೊರಟಿದ್ದ ಅಖಿಲ್ ಅಖಿಲ್ ಜೋಯನ್ ಕೇವಲ 19 ನೇ ವಯಸ್ಸಿನಲ್ಲಿಯೇ ಮರ್ಚೆಂಟ್ ನೇವಿಗೆ ಸೇರಿದ್ದರು. ಕಳೆದ 6 ವರ್ಷಗಳಿಂದ ಹಡಗಿನಲ್ಲಿ ನಾವಿಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಖಿಲ್, ತಮ್ಮ ಶ್ರಮದಿಂದಲೇ ಇತ್ತೀಚೆಗಷ್ಟೇ ಸುಂದರವಾದ ಹೊಸ ಮನೆಯೊಂದನ್ನು ಕಟ್ಟಿದ್ದರು. ಎಲೆಕ್ಟ್ರಿಕಲ್ ಅಂಗಡಿ ನಡೆಸುವ ತಂದೆ ಜೋಯನ್ ಮತ್ತು ವಿಮಾ ಏಜೆಂಟ್ ತಾಯಿ ಸ್ಯಾಲಿ ದಂಪತಿಗೆ ಅಖಿಲ್ ಏಕೈಕ ಪುತ್ರ.

ಕೆಲವೇ ದಿನಗಳ ಹಿಂದೆಯಷ್ಟೇ ಆಲಪ್ಪುಳ ಮೂಲದ ಯುವತಿಯೊಂದಿಗೆ ಅಖಿಲ್ ಅವರ ನಿಶ್ಚಿತಾರ್ಥ ವೈಭವದಿಂದ ನೆರವೇರಿತ್ತು. ಇನ್ನೆರಡು ತಿಂಗಳಲ್ಲಿ ಮದುವೆ ನಿಗದಿಯಾಗಿತ್ತು. ಮದುವೆಯ ನಂತರ ಈ ಅಪಾಯಕಾರಿ ಹಡಗಿನ ಕೆಲಸ ತೊರೆದು ಬೇರೆಡೆ ಹೊಸ ಕೆಲಸಕ್ಕೆ ಸೇರಬೇಕೆಂಬುದು ಅವರ ಕನಸಾಗಿತ್ತು. ಆದರೆ, ನಿಶ್ಚಿತಾರ್ಥ ಮುಗಿಸಿ ಕೆಲಸಕ್ಕೆ ಮರಳಿದ ಕೇವಲ ಒಂದು ತಿಂಗಳಿನಲ್ಲೇ ಈ ಭೀಕರ ದುರಂತ ಸಂಭವಿಸಿದೆ.

ಮತ್ತಷ್ಟು ಓದಿ: ರಷ್ಯಾಗೆ ಮತ್ತೊಂದು ಹೊಡೆತ; ಕ್ರಿಮಿಯನ್ ಸೇತುವೆ ಸ್ಫೋಟಗೊಳಿಸಿದ ಉಕ್ರೇನ್

ಕತ್ತಲೆಯಲ್ಲಿ ಮುಳುಗಿದ ಹುಟ್ಟೂರು: ಇ-ಮೇಲ್ ಮೂಲಕ ಬಂದ ಆಘಾತಕಾರಿ ಸುದ್ದಿ ಸೋಮವಾರ ಸಂಜೆ ಅಖಿಲ್ ಕೆಲಸ ಮಾಡುತ್ತಿದ್ದ ಶಿಪ್ಪಿಂಗ್ ಕಂಪನಿಯಿಂದ ಕುಟುಂಬಕ್ಕೆ ಬಂದ ಒಂದೇ ಒಂದು ಇಮೇಲ್ ಇಡೀ ಕುಟುಂಬದ ಕನಸುಗಳನ್ನು ನುಚ್ಚುನೂರು ಮಾಡಿತು. ಅಖಿಲ್ ತಮ್ಮ ಹುಟ್ಟೂರಿನಲ್ಲಿ ಅತ್ಯಂತ ಜನಪ್ರಿಯ ಮತ್ತು ಶಿಸ್ತಿನ ಯುವಕನಾಗಿದ್ದರು.

ಉಕ್ರೇನ್‌ನ ‘ಒಡೆಸಾ’ ಕರಾವಳಿಯಲ್ಲಿ ನಡೆದಿದ್ದೇನು? ವಿದೇಶಿ ಮಾಧ್ಯಮಗಳ ಪ್ರಕಾರ, ಪಶ್ಚಿಮ ಆಫ್ರಿಕಾದ ಧ್ವಜವನ್ನು ಹೊಂದಿದ್ದ ‘ಎಂವಿ ಗೋಲ್ಡನ್ ಲಿಯೋ’ ಎಂಬ ಸರಕು ಸಾಗಣೆ ಹಡಗು ಉಕ್ರೇನಿಯನ್ ಜೋಳವನ್ನು ಹೊತ್ತು ಒಡೆಸಾ ಬಂದರಿನಿಂದ ಹೊರಟಿತ್ತು. ಈ ವೇಳೆ ರಷ್ಯಾದ ಪಡೆಗಳು ನಡೆಸಿದ ಭಾರಿ ದಾಳಿಗೆ ಹಡಗು ಸಿಲುಕಿ, ಭಾರತದ ನಾಲ್ವರು ಹಾಗೂ ಸಿರಿಯಾದ ಐವರು ನಾವಿಕರು ಸೇರಿದಂತೆ ಒಟ್ಟು 10 ಸಿಬ್ಬಂದಿ ದುರಂತ ಅಂತ್ಯ ಕಂಡಿದ್ದಾರೆ.

ಸದ್ಯ ಅಖಿಲ್ ಅವರ ಭೌತಿಕ ಶರೀರವನ್ನು ಸ್ವದೇಶಕ್ಕೆ ತರಲು ಕೇರಳ ಮುಖ್ಯಮಂತ್ರಿ ಕಚೇರಿ ಹಾಗೂ ನೋರ್ಕಾ ಇಲಾಖೆಯು ರಷ್ಯಾದ ಕಾನ್ಸುಲೇಟ್ ಮತ್ತು ಭಾರತದ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರ ಸಂಪರ್ಕದಲ್ಲಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:36 am, Tue, 21 July 26

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!