AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರದಕ್ಷಿಣೆ ಕಿರುಕುಳ, ಶಾರ್ಜಾದಲ್ಲಿ ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ಕೇರಳದ ಮಹಿಳೆ

ವರದಕ್ಷಿಣೆ(Dowry) ಕಿರುಕುಳದಿಂದ ಬೇಸತ್ತು ಕೇರಳ(Kerala)ದ ಮಹಿಳೆಯೊಬ್ಬಳು ಮಗುವನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಾರ್ಜಾದಲ್ಲಿ ನಡೆದಿದೆ. ಯುನೈಟೆಡ್ ಅರಬ್ ಎಮಿರೇಟ್ಸ್‌ನ ಶಾರ್ಜಾದಲ್ಲಿ ವಿಪಂಜಿಕಾ ಮಣಿ ತನ್ನ ಒಂದೂವರೆ ವರ್ಷದ ಮಗಳು ವೈಭವಿಯನ್ನು ಹತ್ಯೆ ಮಾಡಿ ಬಳಿಕ ಪ್ರಾಣ ಕಳೆದುಕೊಂಡಿದ್ದಾರೆ. ಅವರು ಶಾರ್ಜಾದ ಅಲ್ ನಹ್ದಾದಲ್ಲಿ ವಾಸಿಸುತ್ತಿದ್ದರು.ಪ್ರಕರಣದಲ್ಲಿ ವಿಪಂಜಿಕಾ ಅವರ ಪತಿ ನಿಧೀಶ್ ಅವರನ್ನು ಮೊದಲ ಆರೋಪಿಯನ್ನಾಗಿ ಹೆಸರಿಸಲಾಗಿದೆ. ಅವರು ಶಾರ್ಜಾದ ಅಲ್ ನಹ್ದಾದಲ್ಲಿ ವಾಸಿಸುತ್ತಿದ್ದರು.ಪ್ರಕರಣದಲ್ಲಿ ವಿಪಂಜಿಕಾ ಅವರ ಪತಿ ನಿಧೀಶ್ ಅವರನ್ನು ಮೊದಲ ಆರೋಪಿಯನ್ನಾಗಿ ಹೆಸರಿಸಲಾಗಿದೆ, ನಂತರ ಅವರ ಸಹೋದರಿ ನೀತು ಮತ್ತು ಅವರ ತಂದೆಯನ್ನು ಹೆಸರಿಸಲಾಗಿದೆ.

ವರದಕ್ಷಿಣೆ ಕಿರುಕುಳ, ಶಾರ್ಜಾದಲ್ಲಿ ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ಕೇರಳದ ಮಹಿಳೆ
ಸಾವು
ನಯನಾ ರಾಜೀವ್
|

Updated on: Jul 15, 2025 | 11:02 AM

Share

ಶಾರ್ಜಾ, ಜುಲೈ 15: ವರದಕ್ಷಿಣೆ(Dowry) ಕಿರುಕುಳದಿಂದ ಬೇಸತ್ತು ಕೇರಳ(Kerala)ದ ಮಹಿಳೆಯೊಬ್ಬಳು ಮಗುವನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಾರ್ಜಾದಲ್ಲಿ ನಡೆದಿದೆ. ಯುನೈಟೆಡ್ ಅರಬ್ ಎಮಿರೇಟ್ಸ್‌ನ ಶಾರ್ಜಾದಲ್ಲಿ ವಿಪಂಜಿಕಾ ಮಣಿ ತನ್ನ ಒಂದೂವರೆ ವರ್ಷದ ಮಗಳು ವೈಭವಿಯನ್ನು ಹತ್ಯೆ ಮಾಡಿ ಬಳಿಕ ಪ್ರಾಣ ಕಳೆದುಕೊಂಡಿದ್ದಾರೆ.

ಅವರು ಶಾರ್ಜಾದ ಅಲ್ ನಹ್ದಾದಲ್ಲಿ ವಾಸಿಸುತ್ತಿದ್ದರು.ಪ್ರಕರಣದಲ್ಲಿ ವಿಪಂಜಿಕಾ ಅವರ ಪತಿ ನಿಧೀಶ್ ಅವರನ್ನು ಮೊದಲ ಆರೋಪಿಯನ್ನಾಗಿ ಹೆಸರಿಸಲಾಗಿದೆ, ನಂತರ ಅವರ ಸಹೋದರಿ ನೀತು ಮತ್ತು ಅವರ ತಂದೆಯನ್ನು ಹೆಸರಿಸಲಾಗಿದೆ. ವರದಕ್ಷಿಣೆಗಾಗಿ ವಿಪಂಜಿಕಾ ಅವರಿಗೆ ದೈಹಿಕ ಮತ್ತು ಮಾನಸಿಕವಾಗಿ ಕಿರುಕುಳ ನೀಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ತಾಯಿಯ ದೂರಿನ ಪ್ರಕಾರ, ಕೊಟ್ಟ ವರದಕ್ಷಿಣೆ ಸಾಕಾಗುವುದಿಲ್ಲ ಎಂದು ಹೇಳಿ ವಿಪಂಜಿಕಾಳನ್ನು ಮಾನಸಿಕವಾಗಿ ಮತ್ತು ದೈಹಿಕವಾಗಿ ಹಿಂಸಿಸಿದ್ದರು. ಆಕೆ ತುಂಬಾ ಸುಂದರವಾಗಿದ್ದು, ಆಕೆಯ ಗಂಡನ ಬಣ್ಣಕಪ್ಪು ಹೀಗಾಗಿಆಕೆಯೂ ಕೂಡ ಕೆಟ್ಟಾಗಿ ಕಾಣೇಕೆಂದು ಆಕೆಯ ತಲೆ ಬೋಳಿಸಿದ್ದ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಓದಿ: ಜಾತಿ ನಿಂದನೆಗೆ ಹೆದರಿ ಮಗ ಆತ್ಮಹತ್ಯೆ: ಸುದ್ದಿ ತಿಳಿದು ಹೃದಯಾಘಾತದಿಂದ ತಂದೆ ಕೂಡ ಸಾವು

ಆಕೆಯ ಮೇಲೆ ಹಲ್ಲೆ ನಡೆಸಲಾಗಿದೆ, ತಲೆ ಬೋಳಿಸುವ ಮೂಲಕ ಆಕೆಯ ನೋಟವನ್ನು ಉದ್ದೇಶಪೂರ್ವಕವಾಗಿ ಬದಲಾಯಿಸಲಾಗಿದೆ ಮತ್ತು ತನ್ನ ಗಂಡನ ವಿವಾಹೇತರ ಸಂಬಂಧಗಳನ್ನು ಪ್ರಶ್ನಿಸಿದಾಗ ಆಕೆಗೆ ವಿಚ್ಛೇದನ ನೋಟಿಸ್ ನೀಡಲಾಗಿದೆ ಎಂದು ಅದು ಹೇಳುತ್ತದೆ.

ಕೊಲ್ಲಂ ಮೂಲದ ವಿಪಂಜಿಕಾ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಆತ್ಮಹತ್ಯೆ ಪತ್ರವನ್ನು ಪೋಸ್ಟ್ ಮಾಡಿದ್ದರು. ಆಕೆಯ ಮಾವ ಕೂಡ ಲೈಂಗಿಕ ಕಿರುಕುಳ ನೀಡಿದ್ದ ಎಂಬುದು ತಿಳಿದುಬಂದಿದೆ.

ಆತ್ಮಹತ್ಯೆ ಪತ್ರದಲ್ಲಿ ವಿಪಂಜಿಕಾ ತನ್ನ ಗಂಡನ ಮನೆಯಲ್ಲಿ ಅನುಭವಿಸಿದ ಕ್ರೂರ ಚಿತ್ರಹಿಂಸೆಯನ್ನು ಸಹ ವಿವರಿಸಿದ್ದಾಳೆ ಎಂದು ವರದಿಯಾಗಿದೆ. ಟಿಪ್ಪಣಿಯಲ್ಲಿ ತನ್ನ ಮಾವ ತನ್ನೊಂದಿಗೆ ಕೆಟ್ಟದಾಗಿ ವರ್ತಿಸಿದ್ದಾನೆ ಮತ್ತು ನಿಧೀಶ್‌ಗೆ ಅದರ ಬಗ್ಗೆ ತಿಳಿಸಿದಾಗ, ಅವನು ಏನೂ ಮಾಡಲಿಲ್ಲ ಮತ್ತು ತನ್ನ ತಂದೆಗಾಗಿಯೂ ಅವಳನ್ನು ಮದುವೆಯಾಗಿದ್ದೇನೆಂದು ಹೇಳಿದ್ದ, ನನಗೆ ಚಿತ್ರಹಿಂಸೆ ನೀಡಿ ನಾಯಿಯಂತೆ ಹೊಡೆದನು. ನನಗೆ ಇನ್ನು ಸಹಿಸಲು ಸಾಧ್ಯವಿಲ್ಲ, ಅವರನ್ನು ಬಿಡಬೇಡಿ ಎಂದು ಆಕೆ ಬರೆದಿದ್ದಳು.

ಮಗಳೊಂದಿಗೆ ಮಾತನಾಡಿದ್ದೆ ಆದರೆ ಇಷ್ಟೊಂದು ಹಿಂಸೆ ಆಕೆಗಾಗುತ್ತಿದೆ ಎಂದು ನನಗೆ ತಿಳಿದಿರಲಿಲ್ಲ. ಆರೋಪಿಗೆ ಶಿಕ್ಷೆಯಾಗಬೇಕು, ಆಗ ಮಾತ್ರ ಮಗಳ ಆತ್ಮಕ್ಕೆ ಶಾಂತಿ ಸಿಗಲು ಸಾಧ್ಯ ಎಂದು ಹೇಳಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!