AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಭಾರತೀಯ ದೂತವಾಸ ಕಚೇರಿಗೆ ಬೆಂಕಿ ಹಚ್ಚಿದ ಖಲಿಸ್ತಾನಿ ಬೆಂಬಲಿಗರು

ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ದೂತವಾಸ ಕಚೇರಿಗೆ ಖಲಿಸ್ತಾನಿ(Khalistani) ಬೆಂಬಲಿಗರು ಬೆಂಕಿ ಹಚ್ಚುವ ಯತ್ನ ಮಾಡಿದ್ದು ಇದನ್ನು ಅಮೆರಿಕ ತೀವ್ರವಾಗಿ ಖಂಡಿಸಿದೆ

ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಭಾರತೀಯ ದೂತವಾಸ ಕಚೇರಿಗೆ ಬೆಂಕಿ ಹಚ್ಚಿದ ಖಲಿಸ್ತಾನಿ ಬೆಂಬಲಿಗರು
ಭಾರತೀಯ ದೂತವಾಸImage Credit source: Hindustan Times
Follow us
ನಯನಾ ರಾಜೀವ್
|

Updated on:Jul 04, 2023 | 9:19 AM

ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ದೂತವಾಸ ಕಚೇರಿಗೆ ಖಲಿಸ್ತಾನಿ(Khalistani) ಬೆಂಬಲಿಗರು ಬೆಂಕಿ ಹಚ್ಚಿದ್ದು, ಇದನ್ನು ಅಮೆರಿಕ ತೀವ್ರವಾಗಿ ಖಂಡಿಸಿದೆ. ಮುಂಜಾನೆ 1.30 ರಿಂದ 2. 30 ರ ನಡುವೆ ಖಾಲಿಸ್ತಾನಿ ಮೂಲಭೂತವಾದಿಗಳು ಭಾರತೀಯ ದೂತಾವಾಸಕ್ಕೆ ಬೆಂಕಿ ಹಚ್ಚಿದ್ದಾರೆ ಎಂದು ಅಮೆರಿಕದ ಸ್ಥಳೀಯ ಚಾನೆಲ್ ದಿಯಾ ಟಿವಿ ವರದಿ ಮಾಡಿದೆ, ಆದರೆ ಸ್ಯಾನ್ ಫ್ರಾನ್ಸಿಸ್ಕೋ ಅಗ್ನಿಶಾಮಕ ಇಲಾಖೆ ಅದನ್ನು ತಕ್ಷಣವೇ ನಂದಿಸಿದೆ. ಬೆಂಕಿಯಿಂದ ಹೆಚ್ಚಿನ ಹಾನಿಯಾಗಿಲ್ಲ ಎಂದು ವರದಿಯಲ್ಲಿ ಹೇಳಲಾಗಿದೆ. ಅದೇ ಸಮಯದಲ್ಲಿ, ಈ ಘಟನೆಯಲ್ಲಿ, ಯಾವುದೇ ಉದ್ಯೋಗಿ ಗಾಯಗೊಂಡಿಲ್ಲ. ಖಲಿಸ್ತಾನ್ ಬೆಂಬಲಿಗರು ಘಟನೆಗೆ ಸಂಬಂಧಿಸಿದಂತೆ ವೀಡಿಯೊವನ್ನು ಸಹ ಬಿಡುಗಡೆ ಮಾಡಿದ್ದಾರೆ.

ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ದೂತಾವಾಸಕ್ಕೆ ಧ್ವಂಸ ಮತ್ತು ಬೆಂಕಿ ಹಚ್ಚುವ ಯತ್ನವನ್ನು ಯುಎಸ್ ಬಲವಾಗಿ ಖಂಡಿಸುತ್ತದೆ ಎಂದು ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ ವಕ್ತಾರ ಮ್ಯಾಥ್ಯೂ ಮಿಲ್ಲರ್ ಟ್ವೀಟ್ ಮಾಡಿದ್ದಾರೆ. ಅಮೆರಿಕದಲ್ಲಿ ರಾಜತಾಂತ್ರಿಕ ಸೌಲಭ್ಯಗಳು ಅಥವಾ ವಿದೇಶಿ ರಾಜತಾಂತ್ರಿಕರ ವಿರುದ್ಧ ವಿಧ್ವಂಸಕತೆ ಅಥವಾ ಹಿಂಸಾಚಾರವು ಕ್ರಿಮಿನಲ್ ಅಪರಾಧವಾಗಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: ಖಲಿಸ್ತಾನ್ ಬೆಂಬಲಿಗರನ್ನು ದೂರವಿಡಲು ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್ ಹೊರಗೆ ಬಿಗಿ ಭದ್ರತೆ

ಈ ಮಾರ್ಚ್​ನಲ್ಲಿ ಖಲಿಸ್ತಾನಿ ಬೆಂಬಲಿಗರು ಲಂಡನ್​ನಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಕೆಳಗಿಳಿಸಿದ್ದರು, ಅಮೃತ್​ಪಾಲ್ ಹಾಗೂ ಆತನ ಬೆಂಬಲಿಗರ ವಿರುದ್ಧ ಪಂಜಾಬ್​ನಲ್ಲಿ ಪ್ರತಿಭಟನೆ ನಡೆಯಿತು.

ಮಾರ್ಚ್​ನಲ್ಲಿ ನಡೆದ ಘಟನೆ ಖಲಿಸ್ತಾನಿ ಬೆಂಬಲಿಗರು ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ರಾಯಭಾರಿ ಕಚೇರಿ (Indian embassy in US) ಮೇಲೆ ದಾಳಿ ನಡೆಸಿ ಕಚೇರಿಯನ್ನು ಧ್ವಂಸಗೊಳಿಸಿದ್ದಾರು. ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಭಾರತ ಸರ್ಕಾರ, ಕೃತ್ಯವನ್ನು ಖಂಡಿಸಿದೆ. ಅಲ್ಲದೆ, ಭಾರತದಲ್ಲಿರುವ ಅಮೆರಿಕದ ರಾಯಭಾರಿಗೆ ಸಮನ್ಸ್‌ ಜಾರಿ ಮಾಡಿ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿದೆ. ದಾಳಿ ಬೆನ್ನಲ್ಲೇ ದೆಹಲಿಯಲ್ಲಿ ಅಮೆರಿಕದ ರಾಯಭಾರಿ ಕಚೇರಿ ಅಧಿಕಾರಿಗಳೊಂದಿಗೆ ಸಭೆ ನಡೆದಿದ್ದು, ಭಾರತದ ಕಾನ್ಸುಲೇಟ್ ಕಚೇರಿಗಳಿಗೆ ಭದ್ರತೆ ಕಲ್ಪಿಸುವುದಾಗಿ ಭರವಸೆ ನೀಡಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:34 am, Tue, 4 July 23