AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಲಿಸ್ತಾನಿ ಪ್ರತ್ಯೇಕತಾವಾದಿಗಳು ಕೆನಡಾದಲ್ಲಿ ಸಿಖ್ ಸಮುದಾಯವನ್ನು ಪ್ರತಿನಿಧಿಸುವುದಿಲ್ಲ; ಜಸ್ಟಿನ್ ಟ್ರುಡೊ

ಕೆನಡಾ ಪ್ರಧಾನಮಂತ್ರಿ ಜಸ್ಟಿನ್ ಟ್ರುಡೊ ಅವರು ದೀಪಾವಳಿ ಮತ್ತು ಬಂಡಿ ಛೋರ್ ದಿವಸ್ ಅನ್ನು ಆಚರಿಸಲು ಒಟ್ಟಾವಾದ ಪಾರ್ಲಿಮೆಂಟ್ ಹಿಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಹೇಳಿಕೆಯನ್ನು ನೀಡಿದ್ದಾರೆ.

ಖಲಿಸ್ತಾನಿ ಪ್ರತ್ಯೇಕತಾವಾದಿಗಳು ಕೆನಡಾದಲ್ಲಿ ಸಿಖ್ ಸಮುದಾಯವನ್ನು ಪ್ರತಿನಿಧಿಸುವುದಿಲ್ಲ; ಜಸ್ಟಿನ್ ಟ್ರುಡೊ
ಜಸ್ಟಿನ್ ಟ್ರುಡೊ
ಸುಷ್ಮಾ ಚಕ್ರೆ
|

Updated on: Nov 08, 2024 | 4:14 PM

Share

ನವದೆಹಲಿ: ಖಲಿಸ್ತಾನಿ ಪ್ರತ್ಯೇಕತಾವಾದಿಗಳು ಕೆನಡಾದಲ್ಲಿ ಸಿಖ್ ಸಮುದಾಯವನ್ನು ಪ್ರತಿನಿಧಿಸುವುದಿಲ್ಲ ಎಂದು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ದೀಪಾವಳಿ ಮತ್ತು ಬಂಡಿ ಛೋರ್ ದಿವಸ್ ಆಚರಿಸಲು ಒಟ್ಟಾವಾದ ಪಾರ್ಲಿಮೆಂಟ್ ಹಿಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಟ್ರುಡೊ ಈ ಹೇಳಿಕೆಯನ್ನು ನೀಡಿದ್ದಾರೆ. ಆ ದೀಪಾವಳಿ ಕಾರ್ಯಕ್ರಮವನ್ನು ಕ್ಯಾಬಿನೆಟ್ ಸಚಿವರಾದ ಅನಿತಾ ಆನಂದ್ ಮತ್ತು ಗ್ಯಾರಿ ಆನಂದಸಂಗರಿ ಆಯೋಜಿಸಿದ್ದರು.

“ಕೆನಡಾದಲ್ಲಿ ಖಲಿಸ್ತಾನ್‌ಗೆ ಅನೇಕ ಬೆಂಬಲಿಗರಿದ್ದಾರೆ. ಆದರೆ, ಅವರು ಒಟ್ಟಾರೆಯಾಗಿ ಸಿಖ್ ಸಮುದಾಯವನ್ನು ಪ್ರತಿನಿಧಿಸುವುದಿಲ್ಲ” ಎಂದು ಟ್ರುಡೊ ಹೇಳಿದ್ದಾರೆ. ಬ್ರಾಂಪ್ಟನ್‌ನಲ್ಲಿರುವ ಹಿಂದೂ ಸಭಾ ಮಂದಿರವು ಖಲಿಸ್ತಾನ್-ಪರ ಅಂಶಗಳ ಹಿಂಸಾತ್ಮಕ ದಾಳಿಗೆ ಸಾಕ್ಷಿಯಾದ ಒಂದು ದಿನದ ನಂತರ ಅವರ ಹೇಳಿಕೆ ಬಂದಿದೆ. ಇದು ಉಗ್ರವಾದ ಇಂಡೋ-ಕೆನಡಿಯನ್ ಸಮುದಾಯವು ಪ್ರತ್ಯೇಕತಾವಾದಿಗಳಿಗೆ ಸವಾಲು ಹಾಕಿದ್ದರಿಂದ ಉದ್ವಿಗ್ನತೆಗೆ ಕಾರಣವಾಯಿತು.

ಇದನ್ನೂ ಓದಿ: ಜೈಶಂಕರ್ ಸಂದರ್ಶನ ಪ್ರಸಾರ ಮಾಡಿದ್ದಕ್ಕೆ ಆಸ್ಟ್ರೇಲಿಯಾದ ಚಾನೆಲ್ ನಿಷೇಧಿಸಿದ ಕೆನಡಾ

ಹಿಂಸಾಚಾರ, ಅಸಹಿಷ್ಣುತೆ, ಬೆದರಿಕೆ ಅಥವಾ ವಿಭಜನೆಗೆ ಅವಕಾಶವಿಲ್ಲ. ಜನರು ತಮ್ಮ ಸಂಸ್ಕೃತಿಗಳು ಮತ್ತು ಅವರ ಸಮುದಾಯಗಳನ್ನು ಹಿಡಿದಿಟ್ಟುಕೊಳ್ಳಲು ನಾವು ಪ್ರೋತ್ಸಾಹಿಸುತ್ತೇವೆ ಎಂದು ಟ್ರುಡೊ ಹೇಳಿದ್ದಾರೆ.

ಕೆನಡಾದಲ್ಲಿ ಹಿಂದೂ ದೇಗುಲಗಳ ಮೇಲೆ ಖಲಿಸ್ತಾನಿ ಪ್ರತ್ಯೇಕತಾವಾದಿಗಳ ದಾಳಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಖಂಡನೆ ವ್ಯಕ್ತಪಡಿಸಿದ್ದು, ಇದು ರಾಜತಾಂತ್ರಿಕ ಅಧಿಕಾರಿಗಳನ್ನು ಬೆದರಿಸುವ ಹೇಡಿತನದ ಪ್ರಯತ್ನ ಎಂದು ಕರೆದಿದ್ದಾರೆ. ಹಾಗೇ, ಭಾರತದ ವಿದೇಶಾಂಗ ಸಚಿವ ಜೈಶಂಕರ್ ಕೂಡ ಭಾರತ-ಕೆನಡಾ ಬಿಕ್ಕಟ್ಟಿನ ಬಗ್ಗೆ ಬಹಿರಂಗವಾಗಿ ಪ್ರತಿಕ್ರಿಯಿಸಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ