Hardeep Singh Nijjar: ಕೆನಡಾದಲ್ಲಿ ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ನ ಗುಂಡಿಕ್ಕಿ ಹತ್ಯೆ
ಕೆನಡಾದಲ್ಲಿ ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಕೆನಡಾದಲ್ಲಿ ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಖಲಿಸ್ತಾನ್ ಟೈಗರ್ ಫೋರ್ಸ್ ಮುಖ್ಯಸ್ಥ ಮತ್ತು ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಅವರನ್ನು ಕೆನಡಾದ ಸರ್ರೆ ನಗರದಲ್ಲಿ ಇಬ್ಬರು ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಸೋಮವಾರ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ನಿಜ್ಜರ್ ಹಲವಾರು ಭಾರತ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ, 2011ರಲ್ಲಿ ಪಂಜಾಬ್‌ನ ಜಲಂಧರ್‌ನಲ್ಲಿ ಹಿಂದೂ ಅರ್ಚಕರನ್ನು ಗುರಿಯಾಗಿಸಿ ಹತ್ಯೆಗೈದ ಪ್ರಕರಣದ ಪ್ರಮುಖ ಆರೋಪಿಯೂ ಆಗಿದ್ದ. ನಿಜ್ಜರ್ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಯು ಆತನನ್ನು ಹಿಡಿದುಕೊಟ್ಟವರಿಗೆ 10 ಲಕ್ಷ ರೂ ನೀಡುವುದಾಗಿ ಘೋಷಿಸಿತ್ತು.
ಮತ್ತಷ್ಟು ಓದಿ: Khalistan Terrorist: ಲಾಹೋರ್ನಲ್ಲಿ ಖಲಿಸ್ತಾನಿ ಉಗ್ರ ಪರಮ್ಜಿತ್ ಸಿಂಗ್ನನ್ನು ಗುಂಡಿಕ್ಕಿ ಹತ್ಯೆ
ಭಾರತ ಸರ್ಕಾರವು ಇತ್ತೀಚೆಗೆ ಬಿಡುಗಡೆ ಮಾಡಿದ ವಾಂಟೆಡ್ ಉಗ್ರರ ಪಟ್ಟಿಯಲ್ಲಿ ನಿಜ್ಜರ್ ಹೆಸರು ಕೂಡ ಇತ್ತು. ಈ ಪಟ್ಟಿಯಲ್ಲಿ 40 ಇತರ ಭಯೋತ್ಪಾದಕರ ಹೆಸರೂ ಇದೆ, ಕಳೆದ ವರ್ಷ ಅಂದರೆ 2022ರಲ್ಲಿ ಪಂಜಾಬ್‌ನ ಜಲಂಧರ್‌ನಲ್ಲಿ ಹಿಂದೂ ಅರ್ಚಕರೊಬ್ಬರ ಹತ್ಯೆಗೆ ಸಂಚು ರೂಪಿಸಿದ ಆರೋಪ ನಿಜ್ಜರ್ ಮೇಲಿತ್ತು.
ನಿಜ್ಜರ್ ಭಾರತದಲ್ಲಿನ ಇತರ ಹಲವಾರು ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾನೆ ಎಂದು ಆರೋಪಿಸಲಾಗಿತ್ತು. ಎನ್‌ಐಎ ಕೂಡ ಆತನ ವಿರುದ್ಧ ಭಯೋತ್ಪಾದಕ ಚಟುವಟಿಕೆಗಳ ಬಗ್ಗೆ ತನಿಖೆ ನಡೆಸುತ್ತಿತ್ತು. ಆದರೆ ಈಗ ಆತ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ್ದಾನೆ. ಇದುವರೆಗೂ ಯಾರು ಕೊಲೆ ಮಾಡಿದ್ದಾರೆ ಎಂಬುದು ತಿಳಿದು ಬಂದಿಲ್ಲ. ಕೆನಡಾ ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:48 am, Mon, 19 June 23