ಲಂಡನ್ನಲ್ಲಿ ಭಾರತದ ತ್ರಿವರ್ಣ ಧ್ವಜಕ್ಕೆ ಅವಮಾನ, ಭಾರತೀಯ ಹೈಕಮಿಷನ್ ಕಚೇರಿಯಲ್ಲಿ ಖಲಿಸ್ತಾನಿ ಉಗ್ರರ ಗದ್ದಲ
ಖಲಿಸ್ತಾನಿ ಉಗ್ರರು ಲಂಡನ್ನಲ್ಲಿರುವ ಭಾರತೀಯ ಹೈಕಮಿಷನ್ನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದಾರೆ. ಇದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ ಮತ್ತು ದೆಹಲಿಯಲ್ಲಿರುವ ಬ್ರಿಟಿಷ್ ಹೈಕಮಿಷನ್‌ನ ಉಪ ಮುಖ್ಯಸ್ಥರನ್ನು ಕರೆಸಿ ತನ್ನ ಕಠಿಣ ನಿಲುವಿನ ಬಗ್ಗೆ ಎಚ್ಚರಿಸಿದೆ.
ಖಲಿಸ್ತಾನಿ ಉಗ್ರರು ಲಂಡನ್ನಲ್ಲಿರುವ ಭಾರತೀಯ ಹೈಕಮಿಷನ್ನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದಾರೆ. ಇದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ ಮತ್ತು ದೆಹಲಿಯಲ್ಲಿರುವ ಬ್ರಿಟಿಷ್ ಹೈಕಮಿಷನ್‌ನ ಉಪ ಮುಖ್ಯಸ್ಥರನ್ನು ಕರೆಸಿ ತನ್ನ ಕಠಿಣ ನಿಲುವಿನ ಬಗ್ಗೆ ಎಚ್ಚರಿಸಿದೆ. ಖಲಿಸ್ತಾನ ಪರ ಪ್ರತ್ಯೇಕವಾದಿಗಳು ಪ್ರತಿಭಟನೆ ವೇಳೆ ಲಂಡನ್ನಲ್ಲಿರುವ ಭಾರತೀಯ ಹೈಕಮಿಷನ್ನಲ್ಲಿ ಭಾರತ ಧ್ವಜವನ್ನು ಕೆಳಗಿಳಿಸಿದ ಘಟನೆಗೆ ಸಂಬಂಧಿಸಿದಂತೆ ಭಾರತ ಭಾನುವಾರ ರಾತ್ರಿ ದೆಹಲಿಯ ಹಿರಿಯ ಬ್ರಿಟಿಷ್ ರಾಜತಾಂತ್ರಿಕರನ್ನು ಕರೆಸಿಕೊಂಡು ಮಾತುಕತೆ ನಡೆಸಿದೆ.
ಲಂಡನ್ನಲ್ಲಿರುವ ಭಾರತೀಯ ರಾಜತಾಂತ್ರಿಕ ಸ್ಥಳಗಳು ಮತ್ತು ಸಿಬ್ಬಂದಿಯ ಭದ್ರತೆ ಬಗ್ಗೆ ಬ್ರಿಟನ್ ಸರ್ಕಾರದ ಉದಾಸೀನತೆ ಸ್ವೀಕಾರಾರ್ಹವಲ್ಲ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.
ಮತ್ತಷ್ಟು ಓದಿ: Pakistan: ಹಿಂದೂ ದೇವಾಲಯದ ಮೇಲೆ ದಾಳಿ, ದೇವತೆಗಳ ವಿಗ್ರಹಗಳು ಧ್ವಂಸ!
ಧ್ವಜವನ್ನು ಕೆಳಗಿಳಿಸಿರುವ ಘಟನೆ ಕುರಿತು ದೆಹಲಿಯಲ್ಲಿರುವ ಹೈಕಮಿಷನ್‌ನ ಅಧಿಕಾರಿಯನ್ನು ಎಂಇಎಗೆ ಕರೆಸಲಾಗಿದೆ. ಪ್ರತಿಭಟನಾಕಾರರಿಗೆ ಹೈಕಮಿಷನ್ ಆವರಣ ಪ್ರವೇಶಿಸಲು ಅವಕಾಶ ಮಾಡಿಕೊಟ್ಟ ಭದ್ರತಾ ಲೋಪದ ಕುರಿತು ವಿವರಣೆ ಕೇಳಲಾಗಿದೆ.
UK ?: BUNCH OF KHALISTANIS TAKE DOWN INDIAN NATIONAL FLAG AT THE INDIAN HIGH COMMISSION. #Khalistan #Punjab #AmritpalSingh #India pic.twitter.com/7rfuAAcqkf
— Arunima Dey (@ArunimaDey17) March 19, 2023
ಇತ್ತೀಚೆಗಷ್ಟೇ ಆಸ್ಪ್ರೇಲಿಯಾದಲ್ಲಿಯೂ ಖಲಿಸ್ತಾನಿ ಬೆಂಬಲಿಗರು ಹಿಂದೂ ದೇಗುಲಗಳ ಮೇಲೆ ಧ್ವೇಷದ ಬರಹ ಬರೆದಿದ್ದರು. ಜೊತೆಗೆ ಮೆಲ್ಬರ್ನ್‌ನಲ್ಲಿನ ಭಾರತೀಯ ರಾಯಭಾರ ಕಚೇರಿಯಲ್ಲಿನ ಧ್ವಜ ಇಳಿಸಿ ದುಷ್ಕೃತ್ಯ ಎಸಗಿದ್ದರು.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ