ಅಮೆರಿಕದಲ್ಲಿ ಭಾರತದ ರಾಯಭಾರ ಕಚೇರಿ ಮೇಲೆ ಖಲಿಸ್ತಾನಿಗಳ ದಾಳಿ, ಕಚೇರಿ ಧ್ವಂಸ
ಬ್ರಿಟನ್, ಲಂಡನ್ ನಂತರ ಇದೀಗ ಅಮೆರಿಕದಲ್ಲಿ ಖಾಲಿಸ್ತಾನಿಗಳು ಅಟ್ಟಹಾಸ ಮೆರೆದಿದ್ದು, ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಮೇಲೆ ದಾಳಿ ನಡೆಸಿ ಕಚೇರಿಯನ್ನು ಧ್ವಂಸಗೊಳಿಸಿದ್ದಾರೆ.

ಅಮೆರಿಕದದಲ್ಲಿ ಭಾರತದ ರಾಯಭಾರ ಕಚೇರಿ ಮೇಲೆ ಖಲಿಸ್ತಾನಿಗಳ ದಾಳಿ
ಬ್ರಿಟನ್‌ನ ಲಂಡನ್ ಬಳಿಕ ಇದೀಗ ಅಮೆರಿಕದಲ್ಲೂ ಖಲಿಸ್ತಾನಿ (Khalistanis) ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದು, ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ರಾಯಭಾರಿ ಕಚೇರಿ (Indian embassy in US) ಮೇಲೆ ದಾಳಿ ನಡೆಸಿ ಕಚೇರಿಯನ್ನು ಧ್ವಂಸಗೊಳಿಸಿದ್ದಾರೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಭಾರತ ಸರ್ಕಾರ, ಕೃತ್ಯವನ್ನು ಖಂಡಿಸಿದೆ. ಅಲ್ಲದೆ, ಭಾರತದಲ್ಲಿರುವ ಅಮೆರಿಕದ ರಾಯಭಾರಿಗೆ ಸಮನ್ಸ್ ಜಾರಿ ಮಾಡಿ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿದೆ. ದಾಳಿ ಬೆನ್ನಲ್ಲೇ ದೆಹಲಿಯಲ್ಲಿ ಅಮೆರಿಕದ ರಾಯಭಾರಿ ಕಚೇರಿ ಅಧಿಕಾರಿಗಳೊಂದಿಗೆ ಸಭೆ ನಡೆದಿದ್ದು, ಭಾರತದ ಕಾನ್ಸುಲೇಟ್ ಕಚೇರಿಗಳಿಗೆ ಭದ್ರತೆ ಕಲ್ಪಿಸುವುದಾಗಿ ಭರವಸೆ ನೀಡಿದ್ದಾರೆ.
Published On - 10:59 pm, Mon, 20 March 23