Kuwait Fire: ಕುವೈತ್​ನ ಕಟ್ಟಡವೊಂದರಲ್ಲಿ ಭಾರಿ ಅಗ್ನಿ ಅವಘಡ, ನಾಲ್ವರು ಭಾರತೀಯರು ಸೇರಿ 35 ಜನರ ಸಜೀವ ದಹನ

ಕುವೈತ್​ನಲ್ಲಿ ಮಲಯಾಳಿ ಉದ್ಯಮಿಗೆ ಸೇರಿದ ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 35 ಮಂದಿ ಸಜೀವದಹನವಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ.

Kuwait Fire: ಕುವೈತ್​ನ ಕಟ್ಟಡವೊಂದರಲ್ಲಿ ಭಾರಿ ಅಗ್ನಿ ಅವಘಡ, ನಾಲ್ವರು ಭಾರತೀಯರು ಸೇರಿ  35 ಜನರ ಸಜೀವ ದಹನ
ಅಗ್ನಿ ಅವಘಡ

Updated on: Jun 12, 2024 | 2:53 PM

ಕುವೈತ್​ನಲ್ಲಿ ಮಲಯಾಳಿ ಉದ್ಯಮಿಗೆ ಸೇರಿದ ಕಟ್ಟಡವೊಂದರಲ್ಲಿ ಅಗ್ನಿ ಅವಘಡ(Fire Accident) ಸಂಭವಿಸಿದ್ದು, 35 ಮಂದಿ ಸಜೀವದಹನವಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಮೃತರಲ್ಲಿ ನಾಲ್ವರು ಭಾರತೀಯರಾಗಿದ್ದಾರೆ. ದಕ್ಷಿಣ ಕುವೈತ್‌ನ ಮಂಗಾಫ್ ನಗರದಲ್ಲಿ ಕಟ್ಟಡದಲ್ಲಿ ಅವಘಡ ಸಂಭವಿಸಿದೆ, ಈ ಕಟ್ಟಡದಲ್ಲಿರುವವರು ಹೆಚ್ಚಿನವರು ಮಲಯಾಳಿಗಳು ಎನ್ನಲಾಗಿದೆ. ಮೃತರಲ್ಲಿ ಇಬ್ಬರು ತಮಿಳುನಾಡು ಮತ್ತು ಉತ್ತರ ಭಾರತದವರು ಎನ್ನಲಾಗಿದೆ.

ಕುವೈತ್ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ಕೆಲವು ಗಂಭೀರ ಸ್ಥಿತಿಯಲ್ಲಿರುವ ಎಲ್ಲಾ ಗಾಯಾಳುಗಳನ್ನು ಅಗತ್ಯ ವೈದ್ಯಕೀಯ ಚಿಕಿತ್ಸೆಗಾಗಿ ಹತ್ತಿರದ ಹಲವಾರು ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ.

ಕಟ್ಟಡದ ಬೆಂಕಿಯಲ್ಲಿ ಗಾಯಗೊಂಡವರಿಗೆ ಸೂಕ್ತ ವೈದ್ಯಕೀಯ ಆರೈಕೆಯನ್ನು ಒದಗಿಸಲು ವೈದ್ಯಕೀಯ ತಂಡಗಳು ತಮ್ಮ ಕೈಲಾದಷ್ಟು ಪ್ರಯತ್ನಿಸುತ್ತಿವೆ ಎಂದು ಸಚಿವಾಲಯ ಹೇಳಿದೆ.

 

ಅಡುಗೆ ಮನೆಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ, ಬೆಂಕಿಯನ್ನು ಕಂಡು ಕೆಲವರು ಅಪಾರ್ಟ್​ಮೆಂಟ್​ನಿಂದ ಕೆಳಗೆ ಹಾರಿ ಸಾವನ್ನಪ್ಪಿದ್ದಾರೆ, ಇನ್ನೂ ಕೆಲವರು ಬೆಂಕಿಯಲ್ಲೇ ಬೆಂದು ಹೋಗಿದ್ದಾರೆ.

ಈ ಕಟ್ಟಡದಲ್ಲಿ ಸುಮಾರು 195 ಮಂದಿ ಸಾವಿಸುತ್ತಿದ್ದರು, ಈ ಕಟ್ಟಡವು ಕೆಜಿ ಅಬ್ರಹಾಂ ಮಾಲಿಕತ್ವದಲ್ಲಿದೆ. ಬೆಂಕಿಯನ್ನು ಹತೋಟಿಗೆ ತರಲಾಗಿದ್ದರೂ, ಇನ್ನೂ ಕೆಲವರು ಒಳಗೆ ಸಿಲುಕಿರುವ ಬಗ್ಗೆ ವರದಿಯಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:47 pm, Wed, 12 June 24

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us