AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಸಹಚರ ‘ಹ್ಯಾರಿ ಬಾಕ್ಸರ್’ ಅಮೆರಿಕದಲ್ಲಿ ವಶಕ್ಕೆ

ಕುಖ್ಯಾತ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ ಜತೆಗೆ ಸಂಬಂಧ ಹೊಂದಿದ್ದ ಎನ್ನಲಾದ ಗ್ಯಾಂಗ್‌ಸ್ಟರ್ ಹ್ಯಾರಿ ಬಾಕ್ಸರ್‌ನನ್ನು ಅಮೆರಿಕದ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಚಿತ್ರ ನಿರ್ದೇಶಕ ರೋಹಿತ್ ಶೆಟ್ಟಿ ಮುಂಬೈ ನಿವಾಸದ ಹೊರಭಾಗದ ಫೆಬ್ರವರಿಯಲ್ಲಿ ನಡೆದಿದ್ದ ಗುಂಡಿನ ದಾಳಿಯ ಹೊಣೆಯನ್ನು ಹ್ಯಾರಿ ಬಾಕ್ಸರ್‌ ಹೊತ್ತಿದ್ದ.

ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಸಹಚರ ‘ಹ್ಯಾರಿ ಬಾಕ್ಸರ್’ ಅಮೆರಿಕದಲ್ಲಿ ವಶಕ್ಕೆ
ಹ್ಯಾರಿ ಬಾಕ್ಸರ್
ಗಣಪತಿ ಶರ್ಮಾ
|

Updated on: Nov 07, 2026 | 11:38 AM

Share

ಮುಖ್ಯಾಂಶಗಳು

  • ಅಮೆರಿಕದಲ್ಲಿ ಹ್ಯಾರಿ ಬಾಕ್ಸರ್ ವಶಕ್ಕೆ
  • ರೋಹಿತ್ ಶೆಟ್ಟಿ ನಿವಾಸದ ದಾಳಿ ಕೇಸ್​ನಲ್ಲೂ ಶಾಮೀಲಾಗಿರುವ ಶಂಕೆ
  • ಹಲವು ಬಾಲಿವುಡ್ ಗಣ್ಯರಿಗೆ ಬೆದರಿಕೆ ಹಾಕಿದ್ದ ಆರೋಪಿ

ನವದೆಹಲಿ, ನವೆಂಬರ್ 7: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನೊಂದಿಗೆ ಗುರುತಿಸಿಕೊಂಡಿರುವ ಗ್ಯಾಂಗ್‌ಸ್ಟರ್ ಹ್ಯಾರಿ ಬಾಕ್ಸರ್ನನ್ನು ಅಮೆರಿಕದ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಮೆರಿಕದಲ್ಲೇ ಇದ್ದುಕೊಂಡು ಗ್ಯಾಂಗ್‌ನ ಚಟುವಟಿಕೆಗಳನ್ನು ನಿರ್ವಹಿಸುತ್ತಿದ್ದ ಎನ್ನಲಾದ ಹ್ಯಾರಿ ಬಾಕ್ಸರ್ ವಿರುದ್ಧ ಕೊಲೆ ಹಾಗೂ ಬೆದರಿಕೆ ಮೂಲಕ ಸುಲಿಗೆಗೆ ಸಂಬಂಧಿಸಿದ ಹಲವು ಪ್ರಕರಣಗಳು ದಾಖಲಾಗಿವೆ.

ಚಿತ್ರ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈ ನಿವಾಸದ ಹೊರಭಾಗದಲ್ಲಿ ನಡೆದ ಗುಂಡಿನ ದಾಳಿಯ ಹೊಣೆಯನ್ನು ಹ್ಯಾರಿ ಬಾಕ್ಸರ್ ಹೊತ್ತುಕೊಂಡಿದ್ದ ಎನ್ನಲಾಗಿದೆ. ಘಟನೆಯ ಬಳಿಕ ಸಾಮಾಜಿಕ ಜಾಲತಾಣದ ಪೋಸ್ಟ್‌ಗಳು ಹಾಗೂ ಆಡಿಯೊ ಸಂದೇಶಗಳ ಮೂಲಕ ಬಾಲಿವುಡ್‌ನ ಹಲವು ಗಣ್ಯರಿಗೆ ಬೆದರಿಕೆ ಹಾಕಿದ್ದ ಆರೋಪವೂ ಆತನ ಮೇಲಿದೆ.

ರೋಹಿತ್ ಶೆಟ್ಟಿ ನಿವಾಸದ ಬಳಿ ನಡೆದಿದ್ದ ಗುಂಡಿನ ದಾಳಿ

ಫೆಬ್ರವರಿಯಲ್ಲಿ ರೋಹಿತ್ ಶೆಟ್ಟಿ ಅವರ ಮುಂಬೈ ನಿವಾಸದ ಹೊರಭಾಗದಲ್ಲಿ ನಡೆದ ಗುಂಡಿನ ದಾಳಿಯ ಬಳಿಕ ಚಿತ್ರರಂಗದ ಹಲವು ಮಂದಿಗೆ ಬೆದರಿಕೆ ಸಂದೇಶಗಳು ಬಂದಿದ್ದವು. ಈ ದಾಳಿಯ ಹೊಣೆಯನ್ನು ಹ್ಯಾರಿ ಬಾಕ್ಸರ್ ಹೊತ್ತುಕೊಂಡಿದ್ದ ಎಂದು ವರದಿಯಾಗಿತ್ತು. ಒಂದು ಆಡಿಯೊ ಸಂದೇಶದಲ್ಲಿ ತನ್ನನ್ನು ಅರ್ಜು ಬಿಷ್ಣೋಯ್ ಎಂದು ಪರಿಚಯಿಸಿಕೊಂಡ ವ್ಯಕ್ತಿಯೊಬ್ಬ, ಹ್ಯಾರಿ ಬಾಕ್ಸರ್ ಮತ್ತು ಶುಭಂ ಲೋಂಕರ್ ಹೆಸರುಗಳನ್ನು ಉಲ್ಲೇಖಿಸಿ ದಾಳಿಯ ಹೊಣೆಯನ್ನು ಹೊತ್ತಿದ್ದ. ಈ ಆಡಿಯೊ ಸಂದೇಶದ ಸತ್ಯಾಸತ್ಯತೆಯನ್ನು ಪೊಲೀಸರು ಪರಿಶೀಲಿಸುತ್ತಿದ್ದು, ಫೆಬ್ರವರಿಯ ಗುಂಡಿನ ದಾಳಿಯಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಪಾತ್ರದ ಬಗ್ಗೆಯೂ ತನಿಖೆ ನಡೆಸಲಾಗಿತ್ತು.

ಇದನ್ನೂ ಓದಿ: ದೆಹಲಿ ಉದ್ಯಮಿಯ ಕೊಲೆ ಹಿಂದೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಕೈವಾಡ

ಹ್ಯಾರಿ ಬಾಕ್ಸರ್ ವಶಕ್ಕೆ ಪಡೆಯುವ ಕೆಲವೇ ದಿನಗಳ ಮೊದಲು, ಗ್ಯಾಂಗ್‌ಸ್ಟರ್‌ಗಳಾದ ಹಿಮಾಂಶು ಭಾವು ಮತ್ತು ನೀರಜ್ ಫರೀದ್‌ಪುರಿಯಾ ಅವರನ್ನೂ ಅಮೆರಿಕದಲ್ಲಿ ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಏರ್​ಪೋರ್ಟ್ ಪ್ರಯಾಣಿಕರಿಗೆ ಇಂದಿನಿಂದ ತಟ್ಟಲಿದೆ ಟ್ರಾಫಿಕ್ ಬಿಸಿ
ಏರ್​ಪೋರ್ಟ್ ಪ್ರಯಾಣಿಕರಿಗೆ ಇಂದಿನಿಂದ ತಟ್ಟಲಿದೆ ಟ್ರಾಫಿಕ್ ಬಿಸಿ
ಈ ವಾರ ಇಲ್ಲ ಎಲಿಮಿನೇಷನ್? ಪ್ರೋಮೋ ಮೂಲಕ ಸೂಚನೆ ಕೊಟ್ಟ ಬಿಗ್ ಬಾಸ್
ಈ ವಾರ ಇಲ್ಲ ಎಲಿಮಿನೇಷನ್? ಪ್ರೋಮೋ ಮೂಲಕ ಸೂಚನೆ ಕೊಟ್ಟ ಬಿಗ್ ಬಾಸ್
ಇಂದು ಈ ರಾಶಿಯವರು ನಿಮ್ಮ ಕೋಪವನ್ನು ಹತೋಟಿಯಲ್ಲಿಡಲೇಬೇಕು!
ಇಂದು ಈ ರಾಶಿಯವರು ನಿಮ್ಮ ಕೋಪವನ್ನು ಹತೋಟಿಯಲ್ಲಿಡಲೇಬೇಕು!
ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳೊಂದಿಗೆ ಸಂವಾದ: ತೊಟ್ಟಿಲು ಖರೀದಿಸಿದ ಡಿಕೆಶಿ
ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳೊಂದಿಗೆ ಸಂವಾದ: ತೊಟ್ಟಿಲು ಖರೀದಿಸಿದ ಡಿಕೆಶಿ
ಹಾಸನಾಂಬೆ ದರ್ಶನ: ಸಿದ್ದರಾಮಯ್ಯ ಆಗಮನದ ವೇಳೆ ಗೊಂದಲ
ಹಾಸನಾಂಬೆ ದರ್ಶನ: ಸಿದ್ದರಾಮಯ್ಯ ಆಗಮನದ ವೇಳೆ ಗೊಂದಲ
ಪೀಣ್ಯ ಫ್ಲೈ ಓವರ್ ಮೇಲೆ ಚೆಲ್ಲಾಪಿಲ್ಲಿಯಾದ ಲಗ್ನ ಪತ್ರಿಕೆಗಳು
ಪೀಣ್ಯ ಫ್ಲೈ ಓವರ್ ಮೇಲೆ ಚೆಲ್ಲಾಪಿಲ್ಲಿಯಾದ ಲಗ್ನ ಪತ್ರಿಕೆಗಳು
ಅಪ್ಪ-ಅಮ್ಮನ ಪ್ರಭಾವ ಬಳಸಿ ಅವಕಾಶ ಪಡೆಯಲ್ಲ: ಖುಷಿ ಚಂದ್ರಶೇಖರ್ ದಿಟ್ಟ ಮಾತು
ಅಪ್ಪ-ಅಮ್ಮನ ಪ್ರಭಾವ ಬಳಸಿ ಅವಕಾಶ ಪಡೆಯಲ್ಲ: ಖುಷಿ ಚಂದ್ರಶೇಖರ್ ದಿಟ್ಟ ಮಾತು
ಉಗ್ರ ದಾವೂದ್ ಇಬ್ರಾಹಿಂ ವೈಭವೀಕರಣ: ಚಿಕ್ಕಮಗಳೂರಲ್ಲಿ ಬಸ್ ಸೀಜ್​​
ಉಗ್ರ ದಾವೂದ್ ಇಬ್ರಾಹಿಂ ವೈಭವೀಕರಣ: ಚಿಕ್ಕಮಗಳೂರಲ್ಲಿ ಬಸ್ ಸೀಜ್​​
ಕೆಟ್ಟದಾಗಿ ಬೈದ ಜಗ್ಗಮಮ್ಮಿಗೆ ಝಾಡಿಸಿದ ಸೌಂದರ್ಯಾ: ವಿಡಿಯೋ ನೋಡಿ
ಕೆಟ್ಟದಾಗಿ ಬೈದ ಜಗ್ಗಮಮ್ಮಿಗೆ ಝಾಡಿಸಿದ ಸೌಂದರ್ಯಾ: ವಿಡಿಯೋ ನೋಡಿ
7 ಜನರ ಕೊಲೆ: ಆರೊಪಿಯ ಮನಸ್ಥಿತಿ ಬಗ್ಗೆ ಮನೋವೈದ್ಯರ ಶಾಕಿಂಗ್ ಮಾತು
7 ಜನರ ಕೊಲೆ: ಆರೊಪಿಯ ಮನಸ್ಥಿತಿ ಬಗ್ಗೆ ಮನೋವೈದ್ಯರ ಶಾಕಿಂಗ್ ಮಾತು