ವಕೀಲನ ಹತ್ಯೆ ಪ್ರಕರಣ: ಜು.24ರಂದು ವಿಚಾರಣೆಗೆ ಬರುವಂತೆ ಪಾಕ್​​ ಮಾಜಿ ಪ್ರಧಾನಿ ಇಮ್ರಾನ್ ಖಾನ್​​​ಗೆ ಸುಪ್ರೀಂ ಸಮನ್ಸ್​​

ಸುಪ್ರೀಂ ಕೋರ್ಟ್​ನ ಹಿರಿಯ ವಕೀಲ ಅಡ್ವೊಕೇಟ್ ಅಬ್ದುಲ್ ರಜಾಕ್ ಶಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಪಾಕಿಸ್ತಾನ ಸುಪ್ರೀಂ ಕೋರ್ಟ್ ಸಮನ್ಸ್ ನೀಡಿದೆ.

ವಕೀಲನ ಹತ್ಯೆ ಪ್ರಕರಣ: ಜು.24ರಂದು ವಿಚಾರಣೆಗೆ ಬರುವಂತೆ ಪಾಕ್​​ ಮಾಜಿ ಪ್ರಧಾನಿ ಇಮ್ರಾನ್ ಖಾನ್​​​ಗೆ ಸುಪ್ರೀಂ ಸಮನ್ಸ್​​
ಇಮ್ರಾನ್ ಖಾನ್
Follow us
ಅಕ್ಷಯ್​ ಪಲ್ಲಮಜಲು​​
|

Updated on:Jul 20, 2023 | 6:19 PM

ಇಸ್ಲಾಮಾಬಾದ್: ಸುಪ್ರೀಂ ಕೋರ್ಟ್​ನ ಹಿರಿಯ ವಕೀಲ ಅಡ್ವೊಕೇಟ್ ಅಬ್ದುಲ್ ರಜಾಕ್ ಶಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಮುಖ್ಯಸ್ಥ ಮತ್ತು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಪಾಕಿಸ್ತಾನ ಸುಪ್ರೀಂ ಕೋರ್ಟ್ ಸಮನ್ಸ್ ನೀಡಿದೆ ಎಂದು ARY ನ್ಯೂಸ್ ವರದಿ ಮಾಡಿದೆ. ಜುಲೈ 24 ರಂದು ಬೆಳಿಗ್ಗೆ 10:30 ಕ್ಕೆ ಸುಪ್ರೀಂ ಕೋರ್ಟ್‌ಗೆ ಹಾಜರಾಗುವಂತೆ ಇಮ್ರಾನ್ ಖಾನ್​​​ಗೆ ಕೋರ್ಟ್​ ತಿಳಿಸಿದೆ.

ನ್ಯಾಯಮೂರ್ತಿ ಯಾಹ್ಯಾ ಖಾನ್ ಅಫ್ರಿದಿ ನೇತೃತ್ವದ ತ್ರಿಸದಸ್ಯ ಪೀಠವು ಇಮ್ರಾನ್ ಖಾನ್ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲಿದೆ. ಈ ವಿಚಾರಣೆಯ ಆರಂಭದಲ್ಲಿ, ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಪಕ್ಷದ ಅಧ್ಯಕ್ಷ ಲತೀಫ್ ಖೋಸಾ ಅವರ ಈ ಪ್ರಕರಣದ ವಿಚಾರಣೆಯನ್ನು ನಡೆಸದಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು ಎಂದು ARY ನ್ಯೂಸ್ ವರದಿ ತಿಳಿಸಿದೆ.

ಈಗಾಗಲೇ ಪಾಕ್ ಸರ್ಕಾರವು ರಚಿಸಿರುವ ಜಂಟಿ ತನಿಖಾ ತಂಡ (ಜೆಐಟಿ) ದೇಶದ ಕಾನೂನಿಗೆ ವಿರುದ್ಧವಾಗಿದೆ ಎಂದು ಲತೀಫ್ ಖೋಸಾ ಅವರು ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ. ಮೊದಲು ಅವರು ನ್ಯಾಯಾಲಯಕ್ಕೆ ಶರಣಾಗಬೇಕು, ಮತ್ತೆ ಅವರ ಬಗ್ಗೆ ವಾದ ಮಾಡಿ ಎಂದು ನ್ಯಾಯಮೂರ್ತಿ ಯಾಹ್ಯಾ ಅಫ್ರಿದಿ ಹೇಳಿದ್ದಾರೆ.

ಇದನ್ನೂ ಓದಿ: ಇಮ್ರಾನ್ ಖಾನ್ ಪ್ರಧಾನಿಯಾಗಲು ಸಹಾಯ ಮಾಡಿ ತಪ್ಪು ಮಾಡಿದ್ದೇನೆಂದು ವಿಷಾದ ವ್ಯಕ್ತಪಡಿಸಿದ ಜಾವೇದ್ ಮಿಯಾಂದಾದ್

ಇನ್ನೂ ಪೊಲೀಸ್ ಠಾಣೆಯಲ್ಲಿ ಕೊಲೆಯಾದ ಶಾಹೀದ್ ಜಮೀಲ್ ಕಾಕರ್ ಪ್ರಕರಣ, ಭಯೋತ್ಪಾದನೆ ಮತ್ತು ಇತರ ಆರೋಪಗಳು ಹಾಗೂ ಜೂನ್ 7 ರಂದು ಅಡ್ವೊಕೇಟ್ ಅಬ್ದುಲ್ ರಜಾಕ್ ಶಾರ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಮ್ರಾನ್ ಖಾನ್ ಅವರನ್ನು ಕೋರ್ಟ್​​ ವಿಚಾರಣೆಗೆ ಬರುವಂತೆ ಸಮನ್ಸ್​​ ನೀಡಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 6:17 pm, Thu, 20 July 23

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್