AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿಬಿಯಾದಲ್ಲಿ ಭೀಕರ ಚಂಡಮಾರುತ: ಮೃತಪಟ್ಟವರ ಸಂಖ್ಯೆ 20 ಸಾವಿರಕ್ಕೆ ಏರಿಕೆ

ಡೇನಿಯಲ್ ಚಂಡಮಾರುತ ಹಾಗೂ ಭಾರಿ ಪ್ರವಾಹಕ್ಕೆ ಲಿಬಿಯಾ ದೇಶದ ಜನರು ತತ್ತರಿಸಿದ್ದಾರೆ. ಮಹಾ ಪ್ರವಾಹಕ್ಕೆ ಸಿಲುಕಿ ಸಾವನ್ನಪ್ಪಿದವರ ಸಂಖ್ಯೆ 20 ಸಾವಿರಕ್ಕೆ ಏರಿಕೆಯಾಗಿದೆ. ಈ ಪೈಕಿ ಐದು ಸಾವಿರ ಶವಗಳು ಡೆರ್ನಾ ನಗರವೊಂದರಲ್ಲೇ ಪತ್ತೆಯಾಗಿವೆ. ಚಂಡಮಾರುತದಿಂದಾಗಿ 2 ಡ್ಯಾಮ್ ಒಡೆದು ಈ ದುರಂತ ಸಂಭವಿಸಿದೆ.

ಲಿಬಿಯಾದಲ್ಲಿ ಭೀಕರ ಚಂಡಮಾರುತ: ಮೃತಪಟ್ಟವರ ಸಂಖ್ಯೆ 20 ಸಾವಿರಕ್ಕೆ ಏರಿಕೆ
ಲಿಬಿಯಾದ ಡೆರ್ನಾದಲ್ಲಿ ಹಾನಿಯನ್ನು ವೀಕ್ಷಿಸುತ್ತಿರುವ ವ್ಯಕ್ತಿImage Credit source: Reuters
Rakesh Nayak Manchi
|

Updated on:Sep 14, 2023 | 9:12 AM

Share

ಟ್ರಿಪೋಲಿ, ಸೆ.14: ಲಿಬಿಯಾ ದೇಶದಲ್ಲಿ ಅಬ್ಬರಿಸಿದ ಭೀಕರ ಡೇನಿಯಲ್ ಚಂಡಮಾರುತ (Daniel cyclone) ಹಾಗೂ ಪ್ರವಾಹಕ್ಕೆ (Flood) ಸಾವನ್ನಪ್ಪಿದವರ ಸಂಖ್ಯೆ 20 ಸಾವಿರಕ್ಕೆ ಏರಿಕೆಯಾಗಿದ್ದು, ಈ ಪೈಕಿ ಐದು ಸಾವಿರ ಶವಗಳು ಡೆರ್ನಾ ನಗರವೊಂದರಲ್ಲೇ ಪತ್ತೆಯಾಗಿದೆ. ಚಂಡಮಾರುತದಿಂದಾಗಿ 2 ಡ್ಯಾಮ್ ಒಡೆದು ಈ ದುರಂತ ಸಂಭವಿಸಿದೆ.

ಸಾವಿರಾರು ಜನರನ್ನು ಬಲಿತೆಗೆದುಕೊಂಡ ಮತ್ತು ಅನೇಕರು ಸಮುದ್ರಕ್ಕೆ ಕೊಚ್ಚಿಕೊಂಡು ಹೋದ ಭೀಕರ ಪ್ರವಾಹದ ನಂತರ, ಹಾನಿಗೊಳಗಾದ ಲಿಬಿಯಾದ ನಗರ ಡೆರ್ನಾದ ನಿವಾಸಿಗಳು ಕಾಣೆಯಾದ ತಮ್ಮ ಸಂಬಂಧಿಕರಿಗಾಗಿ ತೀವ್ರ ಹುಡುಕಾಡುತ್ತಿದ್ದಾರೆ. ಸ್ಥಳದಲ್ಲಿ ರಕ್ಷಣಾ ತಂಡಗಳು ಬೀಡುಬಿಟ್ಟಿದ್ದು, ಕಟ್ಟಡ ಹಾಗೂ ಸಮುದ್ರ ತೀರದಿಂದ ಶವಗಳನ್ನು ಹೊರತೆಗೆಯುತ್ತಿದ್ದಾರೆ.

ಇದನ್ನೂ ಓದಿ: ಜೀವಂತವಾಗಿರಲು ಟಾಯ್ಲೆಟ್​ನ ನೀರು ಕುಡಿದಿದ್ದೆವು, 6 ತಿಂಗಳ ಬಳಿಕ ಲಿಬಿಯಾದಿಂದ ಹಿಂದಿರುಗಿದ ಭಾರತೀಯರ ಮಾತು

ಡೆರ್ನಾ ಮತ್ತು ಪ್ರವಾಹ ಪೀಡಿತ ಇತರ ಪಟ್ಟಣಗಳಲ್ಲಿನ ಸುಮಾರು 40,000 ಜನರನ್ನು ಈಗಾಗಲೇ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ. ಭೀಕರ ಪ್ರವಾಹಕ್ಕೆ ತತ್ತರಿಸಿದ ಲಿಬಿಯಾಕ್ಕೆ ವಿವಿಧ ದೇಶಗಳು ನೆರವಿನ ಹಸ್ತ ಚಾಚಿದ್ದು, ಜನರ ರಕ್ಷಣೆಗೆ ಮುಂದೆ ಬಂದಿವೆ.

ಡೇನಿಯಲ್ ಚಂಡಮಾರುತವು ಭಾನುವಾರ ಮತ್ತು ಸೋಮವಾರದಂದು ಬೆಂಗಾಜಿ, ಸುಸಾ, ಬೈಡಾ, ಅಲ್-ಮಾರ್ಜ್ ಮತ್ತು ಡರ್ನಾ ನಗರಗಳ ಮೇಲೆ ಪರಿಣಾಮ ಬೀರಿತ್ತು. ಸದ್ಯ ಸಾವಿರಾರು ಮಂದಿ ನಾಪತ್ತೆಯಾಗಿದ್ದು, ತೀವ್ರ ಹುಡುಕಾಟ ನಡೆಸಲಾಗುತ್ತಿದೆ.

ವಿದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:34 am, Thu, 14 September 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್