AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shinzo Abe Murder Case: ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆ ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ

ಜಪಾನ್‌ನ ಮಾಜಿ ಪ್ರಧಾನಿ ಶಿಂಜೊ ಅಬೆ ಕೊಲೆ ಪ್ರಕರಣದಲ್ಲಿ, ಆರೋಪಿ ಟೆಟ್ಸುಯಾ ಯಮಗಾಮಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. 2022ರಲ್ಲಿ ಚುನಾವಣಾ ಪ್ರಚಾರದ ವೇಳೆ ಅಬೆ ಅವರನ್ನು ಹತ್ಯೆ ಮಾಡಲಾಗಿತ್ತು. ತಾನು ದ್ವೇಷಿಸುತ್ತಿದ್ದ ಸಂಘಟನೆಗೆ ಅಬೆ ಸಂಬಂಧ ಹೊಂದಿದ್ದಾರೆಂದು ಆರೋಪಿ ಕೃತ್ಯ ಎಸಗಿದ್ದ. ಇದು ಜಪಾನ್‌ನಲ್ಲಿ ದಶಕಗಳ ನಂತರ ನಡೆದ ಮೊದಲ ರಾಜಕೀಯ ಹತ್ಯೆಯಾಗಿದ್ದು, ಈ ತೀರ್ಪು ಮಹತ್ವದ ಬೆಳವಣಿಗೆಯಾಗಿದೆ.

Shinzo Abe Murder Case: ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆ ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ
ಶಿಂಜೊ
ನಯನಾ ರಾಜೀವ್
|

Updated on: Jan 21, 2026 | 11:32 AM

Share

ಜಪಾನ್, ಜನವರಿ 21: ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆ(Shinzo Abe) ಕೊಲೆ ಪ್ರಕರಣದ ಆರೋಪಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಜಪಾನ್‌ನ ಮಾಜಿ ಪ್ರಧಾನಿ ಶಿಂಜೋ ಅಬೆ ಅವರನ್ನು ಜುಲೈ 8, 2022 ರಂದು ಜಪಾನ್‌ನ ನಾರಾದಲ್ಲಿ ಚುನಾವಣಾ ಪ್ರಚಾರ ಭಾಷಣ ಮಾಡುತ್ತಿದ್ದಾಗ ಶೂಟರ್ ಟೆಟ್ಸುಯಾ ಗುಂಡು ಹಾರಿಸಿ ಹತ್ಯೆ ಮಾಡಿದ್ದ. ಗುಂಡು ತಗಲಿದ ಪರಿಣಾಮ ರಕ್ತಸ್ರಾವದಿಂದ ಅವರು ಆಸ್ಪತ್ರೆಯಲ್ಲಿ ನಿಧನರಾದರು.

ಇದು ಜಪಾನ್‌ನಲ್ಲಿ ದಶಕಗಳ ನಂತರ ನಡೆದ ಮೊದಲ ರಾಜಕೀಯ ಹತ್ಯೆಯಾಗಿತ್ತು. ಶೂಟರ್ ಅಬೆಗೂ, ತಾನು ದ್ವೇಷಿಸುತ್ತಿದ್ದ ಸಂಘಟನೆಗೂ ಸಂಬಂಧವಿದೆ ಎಂದು ಹೇಳಿ ಆರೋಪಿ  ಈ ಕೃತ್ಯ ಎಸಗಿದ್ದ. ಶಿಂಜೋ ಅಬೆ ಜಪಾನ್​​ನಲ್ಲಿ ಅತಿ ಹೆಚ್ಚು ಆಡಳಿತ ನಡೆಸಿರುವ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. 2006-2007, 2012-2020ರವರೆಗೂ ಅವರು ಪ್ರಧಾನಿ ಆಗಿದ್ದರು.

ಮಾಜಿ ಪ್ರಧಾನಿ ಅಬೆ ಅವರ ಮೇಲೆ ನಾರಾದಲ್ಲಿ  ಗುಂಡು ಹಾರಿಸಲಾಗಿತ್ತು. ಶೂಟರ್​ನನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿತ್ತು. ಆತನ ಶಿಂಜೋ ಅಬೆ ಅವರ ಬಗ್ಗೆ ತೀವ್ರ ಅಸಮಾಧಾನ ಹೊಂದಿದ್ದ. ಅದೇ ಕಾರಣಕ್ಕೆ ಅವರನ್ನು ಕೊಲೆ ಮಾಡಲು ಪ್ರಯತ್ನಿಸಿದ್ದ ಎಂದು ಹೇಳಲಾಗಿದೆ.

ಮತ್ತಷ್ಟು ಓದಿ: Shinzo Abe Death: ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ನಿಧನ; ಭಾರತದಲ್ಲಿ ಇಂದು ರಾಷ್ಟ್ರೀಯ ಶೋಕಾಚರಣೆ

ನಾರಾ ಸಿಟಿಯ ನಿವಾಸಿ ಎನ್ನಲಾದ 41 ವರ್ಷದ ಟೆಟ್ಸುಯಾ ಯಮಗಾಮಿ ಎಂಬಾತನನ್ನು ಶಿಂಜೋ ಅಬೆ ಮೇಲೆ ಗುಂಡಿಕ್ಕಿ ಕೊಲೆ ಯತ್ನದ ಶಂಕೆಯ ಮೇಲೆ ಬಂಧಿಸಲಾಗಿತ್ತು. ಟಿವಿಯಲ್ಲಿ ಪ್ರಸಾರವಾದ ದೃಶ್ಯಗಳಲ್ಲಿ, ಶಿಂಜೋ ಅಬೆ ಗುಂಡೇಟಿನಿಂದ ಕುಸಿದು ಬೀಳುತ್ತಿರುವುದನ್ನು ಕಾಣಬಹುದು. ತಕ್ಷಣ ಹಲವಾರು ಭದ್ರತಾ ಸಿಬ್ಬಂದಿ ಅವರ ಕಡೆಗೆ ಓಡಿದ್ದಾರೆ. ಅಬೆ ಕುಸಿದು ಬಿದ್ದಾಗ ಅವರು ತಮ್ಮ ಎದೆಯನ್ನು ಗಟ್ಟಿಯಾಗಿ ಒತ್ತಿ ಹಿಡಿದಿರುವುದನ್ನು ನೋಡಬಹುದು. ಅವರ ಶರ್ಟ್​ ಪೂರ್ತಿ ರಕ್ತದಿಂದ ತೊಯ್ದುಹೋಗಿತ್ತು.

ಅಕ್ಟೋಬರ್‌ನಲ್ಲಿ ಪ್ರಾರಂಭವಾದ ವಿಚಾರಣೆಯ ಸಂದರ್ಭದಲ್ಲಿ ಟೆಟ್ಸುಯಾ ಯಮಗಾಮಿ ಕೊಲೆಗೆ ತಪ್ಪೊಪ್ಪಿಕೊಂಡಿದ್ದ. ನ್ಯಾಯಾಲಯವು ಬುಧವಾರ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ಯೂನಿಫಿಕೇಶನ್ ಚರ್ಚ್‌ಗೆ ಸಂಬಂಧಿಸಿದ ಗುಂಪಿಗೆ ಮಾಜಿ ನಾಯಕ ಅಬೆ ಕಳುಹಿಸಿದ ವೀಡಿಯೊ ಸಂದೇಶವನ್ನು ನೋಡಿದ ನಂತರ ತಾನು ಅವರನ್ನು ಕೊಂದಿದ್ದೇನೆ ಎಂದು ಆರೋಪಿ ಹೇಳಿದ್ದ.

ಜಪಾನ್‌ನ ಅತ್ಯಂತ ಪ್ರಭಾವಿ ರಾಜಕಾರಣಿಗಳಲ್ಲಿ ಒಬ್ಬರಾದ ಅಬೆ, ಪ್ರಧಾನ ಮಂತ್ರಿ ಹುದ್ದೆಯನ್ನು ತೊರೆದ ನಂತರ ನಿಯಮಿತ ಶಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾಗ, 2022 ರಲ್ಲಿ ಪಶ್ಚಿಮ ನಗರವಾದ ನಾರಾದಲ್ಲಿ ಪ್ರಚಾರ ಮಾಡುವಾಗ ಕೊಲೆಯಾಗಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ