AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟರ್ಕಿಯ ಸಂಸತ್ ಬಳಿ ಭಾರಿ ಸ್ಫೋಟ, ಗುಂಡಿನ ದಾಳಿ

ಟರ್ಕಿಯ ರಾಜಧಾನಿ ಅಂಕಾರದ ಹೃದಯಭಾಗದಲ್ಲಿ ಭಾನುವಾರ ಭಾರೀ ಸ್ಫೋಟದ ಸದ್ದು ಕೇಳಿಸಿದೆ ಎಂದು ಟರ್ಕಿಯ ಮಾಧ್ಯಮ ವರದಿಗಳು ತಿಳಿಸಿವೆ. ಕೆಲವು ವರದಿಗಳ ಪ್ರಕಾರ ಸ್ಫೋಟದ ನಂತರ ಗುಂಡಿನ ದಾಳಿ ನಡೆದಿದೆ. ಸಂಸತ್ತು ಮತ್ತು ಆಂತರಿಕ ವ್ಯವಹಾರಗಳ ಸಚಿವಾಲಯದ ಸಮೀಪವಿರುವ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದ್ದು, ಕಾರಣ ತಿಳಿದುಬಂದಿಲ್ಲ. ಯಾವುದೇ ಸಾವು-ನೋವುಗಳ ಬಗ್ಗೆ ತಕ್ಷಣದ ವರದಿಗಳಿಲ್ಲ.

ಟರ್ಕಿಯ ಸಂಸತ್ ಬಳಿ ಭಾರಿ ಸ್ಫೋಟ, ಗುಂಡಿನ ದಾಳಿ
ಟರ್ಕಿ ಸಂಸತ್Image Credit source: Hindustan Times
ನಯನಾ ರಾಜೀವ್
|

Updated on:Oct 01, 2023 | 2:40 PM

Share

ಟರ್ಕಿಯ ರಾಜಧಾನಿ ಅಂಕಾರದ ಹೃದಯಭಾಗದಲ್ಲಿ ಭಾನುವಾರ ಭಾರೀ ಸ್ಫೋಟದ ಸದ್ದು ಕೇಳಿಸಿದೆ ಎಂದು ಟರ್ಕಿಯ ಮಾಧ್ಯಮ ವರದಿಗಳು ತಿಳಿಸಿವೆ. ಕೆಲವು ವರದಿಗಳ ಪ್ರಕಾರ ಸ್ಫೋಟದ ನಂತರ ಗುಂಡಿನ ದಾಳಿ ನಡೆದಿದೆ. ಸಂಸತ್ತು ಮತ್ತು ಆಂತರಿಕ ವ್ಯವಹಾರಗಳ ಸಚಿವಾಲಯದ ಸಮೀಪವಿರುವ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದ್ದು, ಕಾರಣ ತಿಳಿದುಬಂದಿಲ್ಲ. ಯಾವುದೇ ಸಾವು-ನೋವುಗಳ ಬಗ್ಗೆ ತಕ್ಷಣದ ವರದಿಗಳಿಲ್ಲ. ಬೇಸಿಗೆ ರಜೆಯ ನಂತರ ಸಂಸತ್ತು ಭಾನುವಾರ ಮತ್ತೆ ತೆರೆಯಲು ನಿರ್ಧರಿಸಲಾಗಿದೆ. ಭದ್ರತಾ ಪಡೆಗಳು ಈ ಪ್ರದೇಶದಲ್ಲಿ ತಡೆಗೋಡೆಗಳನ್ನು ಸ್ಥಾಪಿಸಿವೆ.

ದೂರದರ್ಶನದ ದೃಶ್ಯಾವಳಿಗಳಲ್ಲಿ ಬಾಂಬ್ ಸ್ಕ್ವಾಡ್‌ಗಳು ಆ ಪ್ರದೇಶದಲ್ಲಿ ನಿಲ್ಲಿಸಿದ ವಾಹನದ ಬಳಿ ತಪಾಸಣೆ ಮಾಡುತ್ತಿರುವುದನ್ನು ಕಾಣಬಹುದು.

ಬೆಳಗ್ಗೆ 9.30ರ ಸುಮಾರಿಗೆ ಈ ಘಟನೆ ನಡೆದಿದೆ. ಈ ಅವಧಿಯಲ್ಲಿ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಭಾರೀ ಬಾಂಬ್ ಸ್ಫೋಟದ ನಂತರ ಭದ್ರತಾ ಮತ್ತು ತನಿಖಾ ಸಂಸ್ಥೆಗಳು ಸ್ಥಳಕ್ಕೆ ಧಾವಿಸಿವೆ.

ಟರ್ಕಿ ಸರ್ಕಾರ ಇದನ್ನು ಭಯೋತ್ಪಾದಕ ದಾಳಿ ಎಂದು ಬಣ್ಣಿಸಿದೆ. ಟರ್ಕಿಯ ಸಂಸತ್ತಿನ ಸಮೀಪವಿರುವ ಅಂಕಾರಾದಲ್ಲಿ ಈ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಸ್ಫೋಟದ ಜೊತೆಗೆ ಗುಂಡಿನ ದಾಳಿ ನಡೆದಿದೆ ಎಂದು ವರದಿಯಾಗಿದೆ. ಈ ಘಟನೆ ಅಂಕಾರಾದಲ್ಲಿ ಸಂಚಲನ ಮೂಡಿಸಿದೆ. ಎಎಫ್‌ಪಿ ಸುದ್ದಿ ಸಂಸ್ಥೆ ಪ್ರಕಾರ, ಅಧ್ಯಕ್ಷ ಎರ್ಡೊಗನ್ ಸರ್ಕಾರ ಇದನ್ನು ಭಯೋತ್ಪಾದಕ ದಾಳಿ ಎಂದು ಕರೆದಿದೆ. ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ ಇನ್ನೂ ತಿಳಿದುಬಂದಿಲ್ಲ.

ಇದೊಂದು ಆತ್ಮಹತ್ಯಾ ದಾಳಿಯಾಗಿದೆ, ದಾಳಿಕೋರನು ಸ್ಫೋಟಕ ಸಾಧನವನ್ನು ಸ್ಫೋಟಿಸಿದ್ದ, ಮತ್ತೊಬ್ಬ ದಾಳಿಕೋರನನ್ನು ಪೊಲೀಸ್​ ಎನ್​ಕೌಂಟರ್​ನಲ್ಲಿ ಹತ್ಯೆ ಮಾಡಿದ್ದಾರೆ.

ಟರ್ಕಿಯಲ್ಲಿ ಬೇಸಿಗೆ ರಜೆ ಮುಗಿದ ನಂತರ ಸಂಸತ್ತಿನ ಕಲಾಪಗಳು ಭಾನುವಾರ ಪುನರಾರಂಭಗೊಳ್ಳಬೇಕಿತ್ತು. ವಿಚಾರಣೆ ಆರಂಭವಾಗುವ ಕೆಲವೇ ಗಂಟೆಗಳ ಮೊದಲು ಆತ್ಮಹತ್ಯಾ ದಾಳಿ ನಡೆದಿದೆ. ಟಿವಿ ಫೂಟೇಜ್‌ನಲ್ಲಿ ಬಾಂಬ್ ನಿಷ್ಕ್ರಿಯ ದಳವು ಆ ಪ್ರದೇಶದಲ್ಲಿ ನಿಲ್ಲಿಸಿದ ವಾಹನದ ಬಳಿ ಕೆಲಸ ಮಾಡುವುದನ್ನು ಕಾಣಬಹುದು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:00 pm, Sun, 1 October 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ