AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಶಾನ್ಯ ಜಪಾನ್​ನಲ್ಲಿ ಭೂಕಂಪ; ಸುನಾಮಿ ಏಳುವ ಸಾಧ್ಯತೆ

Japan Earthquake: ಮಿಯಾಮಿ ಪ್ರದೇಶದ ಸಾಗರದ ಆಳದಲ್ಲಿ ಈ ಭೂಕಂಪ ಸಂಭವಿಸಿದೆ. ಭೂಕಂಪನದಿಂದ ಯಾವುದೇ ಸಾವು ನೋವು ಅಥವಾ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಸುನಾಮಿ ಏಳುವ ಮುನ್ಸೂಚನೆ ಇದೆ ಎಂದು ವರದಿಯಾಗಿದೆ.

ಈಶಾನ್ಯ ಜಪಾನ್​ನಲ್ಲಿ ಭೂಕಂಪ; ಸುನಾಮಿ ಏಳುವ ಸಾಧ್ಯತೆ
ಸಾಂದರ್ಭಿಕ ಚಿತ್ರ
guruganesh bhat
|

Updated on:Mar 20, 2021 | 6:43 PM

Share

ಟೋಕಿಯೋ: ಜಪಾನ್​ನ ಈಶಾನ್ಯ ಕರಾವಳಿಯಲ್ಲಿ ಶನಿವಾರ ಪ್ರಬಲ ಭೂಕಂಪವಾಗಿದ್ದು ರಿಕ್ಟರ್ ಮಾಪಕದಲ್ಲಿ 7 ರಷ್ಟು ತೀವ್ರತೆ ದಾಖಲಾಗಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ವರದಿ ಮಾಡಿದೆ. ಜಪಾನ್​​ನ ಈಶಾನ್ಯ ಕಡಲತೀರದಲ್ಲಿ ಸಂಭವಿಸಿರುವ ಈ ಭೂಕಂಪದಿಂದ ಜಪಾನ್​ಗೆ ಸುನಾಮಿ ಭೀತಿ ಎದುರಾಗುವ ಸಾಧ್ಯತೆ ಇದೆ ಎಂದು ಅಲ್ಲಿನ ಹವಾಮಾನ ಇಲಾಖೆ ತಿಳಿಸಿದೆ.

ಮಿಯಾಮಿ ಪ್ರದೇಶದ ಸಾಗರದ ಆಳದಲ್ಲಿ ಈ ಭೂಕಂಪ ಸಂಭವಿಸಿದೆ. ಭೂಕಂಪನದಿಂದ ಯಾವುದೇ ಸಾವು ನೋವು ಅಥವಾ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಸುನಾಮಿ ಏಳುವ ಮುನ್ಸೂಚನೆ ಇದೆ ಎಂದು ವರದಿಯಾಗಿದೆ. ಹೀಗಾಗಿ ಜಪಾನ್​ನಾದ್ಯಂತ ಭಾರಿ ಮುಂಜಾಗರೂಕತೆ ವಹಿಸಲಾಗಿದೆ.

ರಿಕ್ಟರ್ ಮಾಪಕದಲ್ಲಿ 7ರಷ್ಟು ತೀವ್ರತೆ ದಾಖಲಾಗಿರುವುದರಿಂದ ರೈಲ್ವೆ ಇಲಾಖೆಯು ರೈಲು ಸಂಚಾರವನ್ನು ಸ್ಥಗಿತಗೊಳಿಸಿದೆ. ಅಲ್ಲದೇ ಈಶಾನ್ಯ ಜಪಾನ್​ನ ಅಣು ಸ್ಥಾವರಗಳ ಸುರಕ್ಷತೆಯ ಪ್ರಶ್ನೆಯೂ ಈ ಭೂಕಂಪದಿಂದ ಉಂಟಾಗಿದ್ದು, ಈ ಕುರಿತು ತಜ್ಞ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. 2011ರಲ್ಲಿ ಸುನಾಮಿ ಹೊಡೆತದಿಂದ ಪುಕುಶಿಮಾ ಅಣು ಸ್ಥಾವರಕ್ಕೆ ಧಕ್ಕೆ ಬಂದಿತ್ತು ಎಂದು ಸ್ಮರಿಸಬಹುದು.

ಇದನ್ನೂ ಓದಿ: ಎರಡೇ ನಿಮಿಷ ಮೊದಲು ಕಚೇರಿಯಿಂದ ಹೊರಟರೂ ಜಪಾನ್​ ಸರ್ಕಾರ ನೀಡೋ ಶಿಕ್ಷೆ ಏನು ಗೊತ್ತಾ?

Japan Earthquake: ಜಪಾನ್​ನಲ್ಲಿ 7.1 ತೀವ್ರತೆಯ ಭೂಕಂಪ: ಸುನಾಮಿ ಮುನ್ಸೂಚನೆ ಇಲ್ಲ ಎಂದ ಅಧಿಕಾರಿಗಳು

Published On - 6:34 pm, Sat, 20 March 21

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!