ಅಮೆರಿಕದಲ್ಲಿ ಗಾಂಧಿ ಪ್ರತಿಮೆ ಧ್ವಂಸ: ಭುಗಿಲೆದ್ದ ಭಾರತೀಯರ ಆಕ್ರೋಶ
ಘಟನೆ ಸಂಬಂಧ ಸಾಕಷ್ಟು ಭಾರತೀಯರು ಆಕ್ರೋಶ ಹೊರ ಹಾಕಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಆಗಬೇಕು ಎಂದು ಆಗ್ರಹಿಸಿದ್ದಾರೆ.
ವಾಷಿಂಗ್ಟನ್: ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಮಹಾತ್ಮಾ ಗಾಂಧೀಜಿ ಅವರ ಪ್ರತಿಮೆಯನ್ನು ದುಷ್ಕರ್ಮಿಗಳು ನಾಶ ಮಾಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ಅಮೆರಿಕದಲ್ಲಿರುವ ಭಾರತೀಯರು ಆಕ್ರೋಶ ಹೊರ ಹಾಕಿದ್ದಾರೆ.
ಉತ್ತರ ಕ್ಯಾಲಿಫೋರ್ನಿಯಾದ ಡೇವಿಸ್ ನಗರದಲ್ಲಿರುವ ಕೇಂದ್ರ ಉದ್ಯಾನವನದಲ್ಲಿ 6 ಅಡಿ ಎತ್ತರದ ಕಂಚಿನ ಗಾಂಧಿ ಪ್ರತಿಮೆ ಇತ್ತು. ಇದರ ತೂಕ 294 ಕೆ.ಜಿ. ಇದೆ. ಈ ಪ್ರತಿಮೆಯನ್ನು ರಾತ್ರೋ ರಾತ್ರಿ ವಿರೂಪಗೊಳಿಸಲಾಗಿದೆ. ಕಾಲು ಹಾಗೂ ಮುಖದ ಭಾಗಕ್ಕೆ ಹಾನಿ ಮಾಡಲಾಗಿದೆ. ಮುಂಜಾನೆ ಪಾರ್ಕ್ ತೆರೆದಾಗ ಈ ವಿಚಾರ ಬೆಳಕಿಗೆ ಬಂದಿದೆ.
ಸದ್ಯ, ಈ ಪ್ರತಿಮೆಯನ್ನು ಸ್ಥಳದಿಂದ ತೆಗೆಯಲಾಗಿದೆ. ವಿರೂಪಗೊಂಡಿರುವ ಪ್ರತಿಮೆಯನ್ನು ಸರಿ ಮಾಡಿದ ನಂತರವೇ ಮತ್ತೆ ಸ್ಥಾಪನೆ ಮಾಡಲು ಸ್ಥಳೀಯ ಅಧಿಕಾರಿಗಳು ನಿರ್ಧರಿಸಿದ್ದಾರೆ.
ಘಟನೆ ಸಂಬಂಧ ಸಾಕಷ್ಟು ಭಾರತೀಯರು ಆಕ್ರೋಶ ಹೊರ ಹಾಕಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಆಗಬೇಕು ಎಂದು ಆಗ್ರಹಿಸಿದ್ದಾರೆ. ನಾಲ್ಕು ವರ್ಷಗಳ ಹಿಂದೆ ಭಾರತ ಸರ್ಕಾರ ಈ ಗಾಂಧಿ ಪ್ರತಿಮೆಯನ್ನು ಡೇವಿಸ್ ನಗರಕ್ಕೆ ನೀಡಿತ್ತು.
ಗಾಂಧೀಜಿ ಬಳಸಿದ ಬಟ್ಟಲು, ಚಮಚ ಹರಾಜಿಗಿದೆ.. ಆರಂಭಿಕ ಬೆಲೆ ಕೇಳಿದರೆ ಹೌಹಾರುತ್ತೀರಿ!