ಅಮೆರಿಕದಲ್ಲಿ ಗಾಂಧಿ ಪ್ರತಿಮೆ ಧ್ವಂಸ: ಭುಗಿಲೆದ್ದ ಭಾರತೀಯರ ಆಕ್ರೋಶ

ಘಟನೆ ಸಂಬಂಧ ಸಾಕಷ್ಟು ಭಾರತೀಯರು ಆಕ್ರೋಶ ಹೊರ ಹಾಕಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಆಗಬೇಕು ಎಂದು ಆಗ್ರಹಿಸಿದ್ದಾರೆ.

ಅಮೆರಿಕದಲ್ಲಿ ಗಾಂಧಿ ಪ್ರತಿಮೆ ಧ್ವಂಸ: ಭುಗಿಲೆದ್ದ ಭಾರತೀಯರ ಆಕ್ರೋಶ
ಗಾಂಧೀಜಿ ಪ್ರತಿಮೆ
Edited By:

Updated on: Jan 30, 2021 | 7:11 PM

ವಾಷಿಂಗ್ಟನ್: ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಮಹಾತ್ಮಾ ಗಾಂಧೀಜಿ ಅವರ ಪ್ರತಿಮೆಯನ್ನು ದುಷ್ಕರ್ಮಿಗಳು ನಾಶ ಮಾಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ಅಮೆರಿಕದಲ್ಲಿರುವ ಭಾರತೀಯರು ಆಕ್ರೋಶ ಹೊರ ಹಾಕಿದ್ದಾರೆ.

ಉತ್ತರ ಕ್ಯಾಲಿಫೋರ್ನಿಯಾದ ಡೇವಿಸ್​ ನಗರದಲ್ಲಿರುವ ಕೇಂದ್ರ ಉದ್ಯಾನವನದಲ್ಲಿ 6 ಅಡಿ ಎತ್ತರದ ಕಂಚಿನ ಗಾಂಧಿ ಪ್ರತಿಮೆ ಇತ್ತು. ಇದರ ತೂಕ 294 ಕೆ.ಜಿ. ಇದೆ. ಈ ಪ್ರತಿಮೆಯನ್ನು ರಾತ್ರೋ ರಾತ್ರಿ ವಿರೂಪಗೊಳಿಸಲಾಗಿದೆ. ಕಾಲು ಹಾಗೂ ಮುಖದ ಭಾಗಕ್ಕೆ ಹಾನಿ ಮಾಡಲಾಗಿದೆ. ಮುಂಜಾನೆ ಪಾರ್ಕ್​ ತೆರೆದಾಗ ಈ ವಿಚಾರ ಬೆಳಕಿಗೆ ಬಂದಿದೆ.

ಸದ್ಯ, ಈ ಪ್ರತಿಮೆಯನ್ನು ಸ್ಥಳದಿಂದ ತೆಗೆಯಲಾಗಿದೆ. ವಿರೂಪಗೊಂಡಿರುವ ಪ್ರತಿಮೆಯನ್ನು ಸರಿ ಮಾಡಿದ ನಂತರವೇ ಮತ್ತೆ ಸ್ಥಾಪನೆ ಮಾಡಲು ಸ್ಥಳೀಯ ಅಧಿಕಾರಿಗಳು ನಿರ್ಧರಿಸಿದ್ದಾರೆ.

ಘಟನೆ ಸಂಬಂಧ ಸಾಕಷ್ಟು ಭಾರತೀಯರು ಆಕ್ರೋಶ ಹೊರ ಹಾಕಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಆಗಬೇಕು ಎಂದು ಆಗ್ರಹಿಸಿದ್ದಾರೆ. ನಾಲ್ಕು ವರ್ಷಗಳ ಹಿಂದೆ ಭಾರತ ಸರ್ಕಾರ ಈ ಗಾಂಧಿ ಪ್ರತಿಮೆಯನ್ನು ಡೇವಿಸ್​ ನಗರಕ್ಕೆ ನೀಡಿತ್ತು.

ಗಾಂಧೀಜಿ ಬಳಸಿದ ಬಟ್ಟಲು, ಚಮಚ ಹರಾಜಿಗಿದೆ.. ಆರಂಭಿಕ ಬೆಲೆ ಕೇಳಿದರೆ ಹೌಹಾರುತ್ತೀರಿ!

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us