ಪ್ರಧಾನಿ ಮೋದಿ ವಿರುದ್ಧ ಸಚಿವರ ಅವಹೇಳನಕಾರಿ ಹೇಳಿಕೆ, ಈ ವಿಚಾರದಿಂದ ಅಂತರ ಕಾಯ್ದುಕೊಂಡ ಮಾಲ್ಡೀವ್ಸ್​ ಸರ್ಕಾರ

ಪ್ರಧಾನಿ ಮೋದಿ ಲಕ್ಷದ್ವೀಪ ಪ್ರವಾಸದ ವಿಚಾರವಾಗಿ ಮಾಲ್ಡೀವ್ಸ್​ ಸಚಿವ ಅವಹೇಳನಕಾರಿ ಹೇಳಿಕೆ ನೀಡಿದ್ದರೂ ಈ ವಿಚಾರದಲ್ಲಿ ಮಾಲ್ಡೀವ್ಸ್​ ಸರ್ಕಾರ ಅಂತರ ಕಾಯ್ದುಕೊಂಡಿದೆ. ಆದರೆ ಪ್ರಧಾನಿ ವಿರುದ್ಧದ ಹೇಳಿಕೆ ಬಗ್ಗೆ ಭಾರತವು ಕಳವಳ ವ್ಯಕ್ತಪಡಿಸಿದೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಚಿವೆ ಮರಿಯಮ್ ಶಿಯುನಾ ಅವರು ಮಾಡಿದ ಅವಹೇಳನಕಾರಿ ಹೇಳಿಕೆಗಳಿಂದ ಮಾಲ್ಡೀವ್ಸ್ ಸರ್ಕಾರ ಅಂತರ ಕಾಯ್ದುಕೊಂಡಿದೆ.

ಪ್ರಧಾನಿ ಮೋದಿ ವಿರುದ್ಧ ಸಚಿವರ ಅವಹೇಳನಕಾರಿ ಹೇಳಿಕೆ, ಈ ವಿಚಾರದಿಂದ ಅಂತರ ಕಾಯ್ದುಕೊಂಡ ಮಾಲ್ಡೀವ್ಸ್​ ಸರ್ಕಾರ
ನರೇಂದ್ರ ಮೋದಿImage Credit source: Hindustan Times
Follow us
ನಯನಾ ರಾಜೀವ್
|

Updated on: Jan 07, 2024 | 3:18 PM

ಪ್ರಧಾನಿ ಮೋದಿ ಲಕ್ಷದ್ವೀಪ ಪ್ರವಾಸದ ವಿಚಾರವಾಗಿ ಮಾಲ್ಡೀವ್ಸ್​ ಸಚಿವ ಅವಹೇಳನಕಾರಿ ಹೇಳಿಕೆ ನೀಡಿದ್ದರೂ ಈ ವಿಚಾರದಲ್ಲಿ ಮಾಲ್ಡೀವ್ಸ್​ ಸರ್ಕಾರ ಅಂತರ ಕಾಯ್ದುಕೊಂಡಿದೆ. ಆದರೆ ಪ್ರಧಾನಿ ವಿರುದ್ಧದ ಹೇಳಿಕೆ ಬಗ್ಗೆ ಭಾರತವು ಕಳವಳ ವ್ಯಕ್ತಪಡಿಸಿದೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಚಿವೆ ಮರಿಯಮ್ ಶಿಯುನಾ ಅವರು ಮಾಡಿದ ಅವಹೇಳನಕಾರಿ ಹೇಳಿಕೆಗಳಿಂದ ಮಾಲ್ಡೀವ್ಸ್ ಸರ್ಕಾರ ಅಂತರ ಕಾಯ್ದುಕೊಂಡಿದೆ.

ಮಾಲ್ಡೀವ್ಸ್​ ಸರ್ಕಾರ ಹೇಳಿಕೆಯಲ್ಲಿ ಸಚಿವರ ಅಭಿಪ್ರಾಯ ವೈಯಕ್ತಿಕ, ಮಾಲ್ಡೀವ್ಸ್ ಸರ್ಕಾರದ ಅಭಿಪ್ರಾಯಗಳಲ್ಲ ಎಂದು ಹೇಳಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಲಕ್ಷದ್ವೀಪಕ್ಕೆ ಭೇಟಿ ನೀಡಿದ್ದರು. ಪ್ರಧಾನಿ ಮೋದಿಯವರ ಲಕ್ಷದ್ವೀಪ ಭೇಟಿಯ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಭಾರತದಲ್ಲಿ ಮಾಲ್ಡೀವ್ಸ್ ಮತ್ತು ಲಕ್ಷದ್ವೀಪಗಳ ನಡುವಿನ ಹೋಲಿಕೆಗಳು ಪ್ರಾರಂಭವಾದವು.

ಈ ಹೇಳಿಕೆಯಿಂದಾಗಿ ಇದೀಗ ಎಕ್ಸ್​ನಲ್ಲಿ Boycott Maldives ಹ್ಯಾಶ್​ಟ್ಯಾಗ್​ನಲ್ಲಿ ಅಭಿಯಾನ ಶುರುವಾಗಿದೆ. ಪ್ರವಾಸೋದ್ಯಮವನ್ನು ಅವಲಂಬಿಸಿರುವ ಮಾಲ್ಡೀವ್ಸ್‌ಗೆ ಭಾರತದ ಶಕ್ತಿಯ ಬಗ್ಗೆ ತಿಳಿದಿಲ್ಲ ಎಂದು ಭಾರತೀಯರು ಹೇಳುತ್ತಿದ್ದಾರೆ. ಮಾಲ್ಡೀವ್ಸ್ ಪ್ರವಾಸವನ್ನು ರದ್ದುಗೊಳಿಸಿದ ನಂತರ ಲಕ್ಷದ್ವೀಪಕ್ಕೆ ಆದ್ಯತೆ ನೀಡುವವರು ಅನೇಕರಿದ್ದಾರೆ.

ಮತ್ತಷ್ಟು ಓದಿ: Boycott Maldives: ಪ್ರಧಾನಿ ಮೋದಿಯ ಲಕ್ಷದ್ವೀಪ ಭೇಟಿ ಲೇವಡಿ ಮಾಡಿದ ಮಾಲ್ಡೀವ್ಸ್​ ಸಚಿವ, ಭಾರತೀಯರು ಮಾಡಿದ್ದೇನು?

ಮಾಲ್ಡೀವ್ಸ್​ ಸಚಿವ ಅಬ್ದುಲ್ಲಾ ಮೊಹ್ಜುಮ್ ಮಜೀಸ್ ಎಂಬುವವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಹಂಚಿಕೊಂಡಿದ್ದು, ಮಾಲ್ಡೀವ್ಸ್​ ಹಾಗೂ ಭಾರತದ ಪ್ರವಾಸೋದ್ಯಮಕ್ಕೆ ಹೋಲಿಕೆ ಮಾಡಿದ್ದಾರೆ, ಭಾರತಕ್ಕಿಂತ ಅಲ್ಲಿ ರೆಸಾರ್ಟ್​ನಿಂದ ಹಿಡಿದು ಎಲ್ಲಾ ಮೂಲಸೌಕರ್ಯಗಳು ಹೆಚ್ಚು ಎಂದು ಬರೆದುಕೊಂಡಿದ್ದಾರೆ.

ಮಾಲ್ಡೀವ್ಸ್​ನ ಮತ್ತೊಬ್ಬ ನಾಯಕ ಜಾಹಿದ್ ರಮೀಜ್ ಪೋಸ್ಟ್​ ಮಾಡಿದ್ದು, ಲಕ್ಷದ್ವೀಪದಲ್ಲಿ ಪ್ರವಾಸೋದ್ಯಮವನ್ನು ಹೆಚ್ಚಿಸುವ ಬಗ್ಗೆ ಮಾತನಾಡಿದ್ದು, ಖಂಡಿತವಾಗಿಯೂ ಮೋದಿಯವರದ್ದು ಉತ್ತಮ ಹೆಜ್ಜೆ, ಆದರೆ ನಮ್ಮೊಂದಿಗೆ ಸ್ಪರ್ಧಿಸುವುದು ಭ್ರಮೆ. ನಮ್ಮಂತಹ ಸೇವೆಯನ್ನು ಒದಗಿಸುವುದು ಸಾಧ್ಯವೇ ಎಂದು ಬರೆದಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್  ಮಾಡಿ 

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್