American Airlines: ನ್ಯೂಯಾರ್ಕ್-ದೆಹಲಿ ವಿಮಾನದಲ್ಲಿ ಸಹ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜಿಸಿದ ಪಾನಮತ್ತ ವ್ಯಕ್ತಿ
ಅಮೆರಿಕನ್ ಏರ್‌ಲೈನ್ಸ್( American Airlines) ನಲ್ಲಿ ನ್ಯೂಯಾರ್ಕ್ನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ಸಹ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

ಅಮೆರಿಕನ್ ಏರ್‌ಲೈನ್ಸ್( American Airlines) ನಲ್ಲಿ ನ್ಯೂಯಾರ್ಕ್ನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ಸಹ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಅವರು ಮದ್ಯಪಾನ ಮಾಡಿದ್ದರು ಎಂದು ಸಿಬ್ಬಂದಿ ಹೇಳಿದ್ದಾರೆ. ರಾತ್ರಿ ದೆಹಲಿ ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆದ ನಂತರ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಮಾನಯಾನ ಸಂಸ್ಥೆಯಿಂದ ವರದಿ ಬಂದ ನಂತರ ವಿಮಾನಯಾನ ನಿಗಾ ಸಂಸ್ಥೆ ಸೂಕ್ತ ಕ್ರಮ ಕೈಗೊಂಡಿದೆ ಎಂದು ಮೂಲಗಳು ತಿಳಿಸಿವೆ. ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯವು ತನ್ನ ಆಂತರಿಕ ಕಾರ್ಯವಿಧಾನದ ಪ್ರಕಾರ ವಿಷಯವನ್ನು ಮತ್ತಷ್ಟು ತನಿಖೆ ಮಾಡುತ್ತದೆ ಎಂದು ಅವರು ಹೇಳಿದರು.
ಅಮೆರಿಕನ್ ಏರ್‌ಲೈನ್ಸ್ ವಿಮಾನವು ರಾತ್ರಿ 9 ಗಂಟೆಯ ಸುಮಾರಿಗೆ ದೆಹಲಿ ವಿಮಾನ ನಿಲ್ದಾಣವನ್ನು ತಲುಪಿತು, ಆದರೆ ಇಳಿಯುವ ಮೊದಲು ವಿಮಾನ ನಿಲ್ದಾಣಕ್ಕೆ ವಿಷಯವನ್ನು ತಿಳಿಸಲಾಗಿತ್ತು.
ಸಂತ್ರಸ್ತ ಪ್ರಯಾಣಿಕರು ವಿಮಾನಯಾನ ಸಂಸ್ಥೆಗೆ ಔಪಚಾರಿಕ ದೂರು ಸಲ್ಲಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಉಪ ಪೊಲೀಸ್ ಕಮಿಷನರ್ (ವಿಮಾನ ನಿಲ್ದಾಣ) ದೇವೇಶ್ ಕುಮಾರ್ ಮಹ್ಲಾ, ಆದಾಗ್ಯೂ, ತಮ್ಮ ಮೇಲೆ ಮೂತ್ರ ವಿಸರ್ಜನೆ ಮಾಡಿದ ಬಗ್ಗೆ ಈವರೆಗೆ ದೂರು ನೀಡಿಲ್ಲ ಎಂದು ಹೇಳಿದರು.
ಮತ್ತಷ್ಟು ಓದಿ: Air India: ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿ ಬೆಂಗಳೂರಿನಲ್ಲಿ ಬಂಧನ
ಕಳೆದ ಕೆಲವು ತಿಂಗಳುಗಳಿಂದ ವಿಮಾನ ಪ್ರಯಾಣಿಕರು ಸಹ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಸಾಕಷ್ಟು ಘಟನೆ ನಡೆದಿವೆ. ಅಮೆರಿಕನ್ ಏರ್ಲೈನ್ಸ್ನಲ್ಲೇ ಎರಡು ತಿಂಗಳ ಅವಧಿಯಲ್ಲಿ ನಡೆದ ಎರಡನೇ ಘಟನೆ ಇದಾಗಿದೆ.
ಕಳೆದ ನವೆಂಬರ್‌ನಲ್ಲಿ ಏರ್ ಇಂಡಿಯಾ ವಿಮಾನದ ಬಿಸಿನೆಸ್ ಕ್ಲಾಸ್‌ನಲ್ಲಿ ವ್ಯಕ್ತಿಯೊಬ್ಬ ಕುಡಿದ ಅಮಲಿನಲ್ಲಿ ವೃದ್ಧೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದರು. ಘಟನೆಯು ಜನವರಿಯಲ್ಲಿ ವರದಿಯಾಗಿದೆ ಮತ್ತು ಆರೋಪಿಯನ್ನು ಬಂಧಿಸಲಾಗಿತ್ತು ಮತ್ತು ವಿಮಾನಯಾನ ಸಂಸ್ಥೆಯು 30 ದಿನಗಳವರೆಗೆ ಆ ವ್ಯಕ್ತಿಗೆ ವಿಮಾನ ಹಾರಾಟವನ್ನು ನಿರ್ಬಂಧಿಸಿತ್ತು.
ಕಳೆದ ಡಿಸೆಂಬರ್‌ನಲ್ಲಿ ಇದೇ ರೀತಿಯ ಮತ್ತೊಂದು ಘಟನೆಯಲ್ಲಿ, ಪ್ಯಾರಿಸ್‌ನಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ಖಾಲಿ ಸೀಟಿನಲ್ಲಿ ಪ್ರಯಾಣಿಕರೊಬ್ಬರು ಮೂತ್ರ ವಿಸರ್ಜನೆ ಮಾಡಿದ್ದರು.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ




