90 ಹೆಣ್ಣುಮಕ್ಕಳ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ

ದಕ್ಷಿಣ ಆಫ್ರಿಕಾದ ನ್ಯಾಯಾಲಯವು 42 ವಿವಿಧ ಅತ್ಯಾಚಾರ ಪ್ರಕರಣಗಳಲ್ಲಿ ವ್ಯಕ್ತಿಯೊಬ್ಬನಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಈ ವ್ಯಕ್ತಿಯ ಹೆಸರು ನಕೋಸಿನತಿ ಫಕತಿ. ಕಳೆದ 9 ವರ್ಷಗಳಲ್ಲಿ 90 ಹೆಣ್ಣುಮಕ್ಕಳ ಮೇಲೆ ಈತ ಅತ್ಯಾಚಾರವೆಸಗಿದ್ದಾನೆ.

90 ಹೆಣ್ಣುಮಕ್ಕಳ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ
ಅಪರಾಧಿ
Follow us
ನಯನಾ ರಾಜೀವ್
|

Updated on: Oct 06, 2024 | 10:36 AM

ದಕ್ಷಿಣ ಆಫ್ರಿಕಾದ ನ್ಯಾಯಾಲಯವು 42 ವಿವಿಧ ಅತ್ಯಾಚಾರ ಪ್ರಕರಣಗಳಲ್ಲಿ ವ್ಯಕ್ತಿಯೊಬ್ಬನಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಈ ವ್ಯಕ್ತಿಯ ಹೆಸರು ನಕೋಸಿನತಿ ಫಕತಿ. ಕಳೆದ 9 ವರ್ಷಗಳಲ್ಲಿ 90 ಹೆಣ್ಣುಮಕ್ಕಳ ಮೇಲೆ ಈತ ಅತ್ಯಾಚಾರವೆಸಗಿದ್ದಾನೆ. ವಿದ್ಯಾರ್ಥಿನಿಯರು ಮತ್ತು ಮಹಿಳೆಯರ ಮೇಲೆ ಅತ್ಯಾಚಾರ ಮತ್ತು ಹಲ್ಲೆ ನಡೆಸಿದ 42 ಪ್ರಕರಣಗಳಲ್ಲಿ ಈ ವ್ಯಕ್ತಿ ಶಿಕ್ಷೆಗೆ ಗುರಿಯಾಗಿದ್ದಾನೆ. ತಪ್ಪಿತಸ್ಥ ವ್ಯಕ್ತಿ ಎಲೆಕ್ಟ್ರಿಷಿಯನ್‌ನಂತೆ ಮನೆಗಳಿಗೆ ನುಗ್ಗಿ ಅನೇಕ ಮಹಿಳೆಯರು ಮತ್ತು ಹುಡುಗಿಯರ ಜೀವನ ಹಾಳು ಮಾಡಿದ್ದಾನೆ.

ಇಷ್ಟು ಮಾತ್ರವಲ್ಲದೆ ಬಾಲಕಿಯರನ್ನು ಅಪಹರಿಸಿ ಅತ್ಯಾಚಾರವೆಸಗಿದ್ದಾನೆ. 40 ವರ್ಷದ ಅಪರಾಧಿ 2012 ರಿಂದ 2021 ರವರೆಗೆ ಅಪರಾಧಗಳನ್ನು ಎಸಗಿದ್ದಾನೆ. ಜೋಹಾನ್ಸ್‌ಬರ್ಗ್ ಮತ್ತು ನೆರೆಯ ಎಕುರ್ಹುಲೆನಿಯಲ್ಲಿ ಒಂಟಿ ವಿದ್ಯಾರ್ಥಿನಿಯರನ್ನು ಗುರಿಯಾಗಿಸಿಕೊಂಡು ಕೃತ್ಯವೆಸಗುತ್ತಿದ್ದ.

ಇದೇ ವೇಳೆ ಆರೋಪಿಗಳ ವಿರುದ್ಧ ನ್ಯಾಯಾಲಯದಲ್ಲಿ ಆಘಾತಕಾರಿ ಅಂಶಗಳೂ ಬೆಳಕಿಗೆ ಬಂದಿವೆ. ಆರೋಪಿ ವಿದ್ಯಾರ್ಥಿನಿಯರಿಗೆ ಹಿಂಸಾತ್ಮಕ ಮತ್ತು ಅಶ್ಲೀಲ ವೀಡಿಯೊಗಳನ್ನು ತೋರಿಸುತ್ತಿದ್ದ, ಮನೆಯಲ್ಲಿ ಒಬ್ಬಂಟಿಯಾಗಿರುವ ಹುಡುಗಿಯರು, ಮಹಿಳೆಯರನ್ನು ಈತ ಟಾರ್ಗೆಟ್ ಮಾಡುತ್ತಿದ್ದ, ಆರೋಪಿ ತನ್ನ ಕುಟುಂಬದ ಸದಸ್ಯರ ಎದುರು ಕೂಡ ಹಲವು ಕೃತ್ಯ ಎಸಗಿದ್ದಾನೆ, ಈತ ಕರುಣೆಗೆ ಯೋಗ್ಯನಲ್ಲ, ಅಮಾಯಕ ಮತ್ತು ಅಸಹಾಯಕತೆಯ ಲಾಭ ಪಡೆದಿದ್ದಾನೆ ಎಂದು ನ್ಯಾಯಮೂರ್ತಿ ಅಭಿಪ್ರಾಯಪಟ್ಟಿದ್ದಾರೆ.

ಮತ್ತಷ್ಟು ಓದಿ: 16 ವರ್ಷಗಳಿಂದ ಗಂಡನ ಮನೆಯಲ್ಲಿ ಬಂಧಿಯಾಗಿದ್ದ ಮಹಿಳೆಯ ರಕ್ಷಣೆ

ಹಲವು ದಿನಗಳಿಂದ ಮಕ್ಕಳ ಮೇಲೆ ಕಣ್ಣಿಟ್ಟಿದ್ದ ಈತ ಶಾಲೆಗೆ ಹೋಗುವಾಗ ಮಕ್ಕಳನ್ನು ಕಿಡ್ನಾಪ್ ಮಾಡಿ ತನ್ನ ಪ್ಲಾನ್ ನಡೆಸುತ್ತಿದ್ದ. ದಕ್ಷಿಣ ಆಫ್ರಿಕಾದಲ್ಲಿ ಮಹಿಳೆಯರು ಮತ್ತು ಮಕ್ಕಳ ವಿರುದ್ಧದ ಅಪರಾಧಗಳ ಪ್ರಕರಣಗಳಲ್ಲಿ ಈಗಾಗಲೇ ಭಾರಿ ಹೆಚ್ಚಳ ಕಂಡುಬಂದಿದೆ, ಆದ್ದರಿಂದ ನ್ಯಾಯಾಲಯದ ಈ ನಿರ್ಧಾರವನ್ನು ಬಹಳ ಮುಖ್ಯವೆಂದು ಪರಿಗಣಿಸಲಾಗಿದೆ.

ಈ ವರ್ಷದ ಏಪ್ರಿಲ್ ಮತ್ತು ಜೂನ್ ನಡುವೆ ದಕ್ಷಿಣ ಆಫ್ರಿಕಾದಲ್ಲಿ 9300 ಲೈಂಗಿಕ ಶೋಷಣೆ ಪ್ರಕರಣಗಳು ದಾಖಲಾಗಿವೆ. ಕಳೆದ ವರ್ಷ ಇದೇ ಅವಧಿಗೆ ಹೋಲಿಸಿದರೆ ಲೈಂಗಿಕ ಕಿರುಕುಳ ಪ್ರಕರಣಗಳಲ್ಲಿ ಶೇ.0.6ರಷ್ಟು ಹೆಚ್ಚಳವಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಒಡಿಶಾದಲ್ಲಿ ಬಸ್ ಪಲ್ಟಿ, ಇಬ್ಬರು ಸಾವು, 30ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯ
ಒಡಿಶಾದಲ್ಲಿ ಬಸ್ ಪಲ್ಟಿ, ಇಬ್ಬರು ಸಾವು, 30ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯ
’ಹನುಮಂತ ಗೆದ್ದಿದ್ದು ಬೇಸರ ಇಲ್ಲ’: ತ್ರಿವಿಕ್ರಂ ಫಸ್ಟ್ ರಿಯಾಕ್ಷನ್
’ಹನುಮಂತ ಗೆದ್ದಿದ್ದು ಬೇಸರ ಇಲ್ಲ’: ತ್ರಿವಿಕ್ರಂ ಫಸ್ಟ್ ರಿಯಾಕ್ಷನ್
ತಾಳಿ ಕಟ್ಟುವಾಗ ಮೂರು ಗಂಟು ಹಾಕುವುದು ಏಕೆ? ಅದರ ಮಹತ್ವ ತಿಳಿಯಿರಿ
ತಾಳಿ ಕಟ್ಟುವಾಗ ಮೂರು ಗಂಟು ಹಾಕುವುದು ಏಕೆ? ಅದರ ಮಹತ್ವ ತಿಳಿಯಿರಿ
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭ ಫಲವಿದೆ
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭ ಫಲವಿದೆ
ಬಿಗ್ ಬಾಸ್ ಮನೆ ಎದುರು ಹನುಮಂತನ ಅಭಿಮಾನಿಗಳ ಸಂಭ್ರಮಾಚರಣೆ
ಬಿಗ್ ಬಾಸ್ ಮನೆ ಎದುರು ಹನುಮಂತನ ಅಭಿಮಾನಿಗಳ ಸಂಭ್ರಮಾಚರಣೆ
ಸ್ಪರ್ಧೆ ಖಚಿತ, ಗೆಲುವು ನಿಶ್ಚಿತ, ಠೇವಣಿ ಉಚಿತ ಎಂದ ಶಾಸಕ ಯತ್ನಾಳ್
ಸ್ಪರ್ಧೆ ಖಚಿತ, ಗೆಲುವು ನಿಶ್ಚಿತ, ಠೇವಣಿ ಉಚಿತ ಎಂದ ಶಾಸಕ ಯತ್ನಾಳ್
ಹಣದಾಸೆಗೆ ಟ್ರೋಫಿ ತ್ಯಾಗ? ಬಿಗ್ ಬಾಸ್ ಮನೆಗೆ ಬಂತು ಸೂಟ್ ಕೇಸ್ ತುಂಬ ದುಡ್ಡು
ಹಣದಾಸೆಗೆ ಟ್ರೋಫಿ ತ್ಯಾಗ? ಬಿಗ್ ಬಾಸ್ ಮನೆಗೆ ಬಂತು ಸೂಟ್ ಕೇಸ್ ತುಂಬ ದುಡ್ಡು
‘ರಜತ್ ರೀತಿಯ ಮಗನಿರಬಾರದು’; ಸುದೀಪ್​ ಎದುರು ಹೇಳಿದ ಹನುಮಂತ
‘ರಜತ್ ರೀತಿಯ ಮಗನಿರಬಾರದು’; ಸುದೀಪ್​ ಎದುರು ಹೇಳಿದ ಹನುಮಂತ
‘ಮಜಾ ಟಾಕೀಸ್​​’ನಲ್ಲಿ ಭರ್ಜರಿ ಡಬಲ್​ ಮೀನಿಂಗ್ ಡೈಲಾಗ್ಸ್; ದೊಡ್ಡದಾಗಿದೆ ನಗ
‘ಮಜಾ ಟಾಕೀಸ್​​’ನಲ್ಲಿ ಭರ್ಜರಿ ಡಬಲ್​ ಮೀನಿಂಗ್ ಡೈಲಾಗ್ಸ್; ದೊಡ್ಡದಾಗಿದೆ ನಗ
ಅಪ್ಪಾಜಿ ಕಿಡ್ನಾಪ್ ಆಗಿ ವಾಪಸ್ ಬಂದಾಗ ಆದಷ್ಟು ಸಂತೋಷ ಈಗ ಆಗಿದೆ: ರಾಘಣ್ಣ
ಅಪ್ಪಾಜಿ ಕಿಡ್ನಾಪ್ ಆಗಿ ವಾಪಸ್ ಬಂದಾಗ ಆದಷ್ಟು ಸಂತೋಷ ಈಗ ಆಗಿದೆ: ರಾಘಣ್ಣ