AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pakistan: ಪಾಕಿಸ್ತಾನದ ಬಜೌರ್ ನಗರದಲ್ಲಿ ಬಾಂಬ್ ಸ್ಫೋಟ, ಸಾವಿನ ಸಂಖ್ಯೆ 40ಕ್ಕೆ ಏರಿಕೆ

ಪಾಕಿಸ್ತಾನದ ಬಜೌರ್ ನಗರದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ನಡೆಯುತ್ತಿದ್ದ ಇಸ್ಲಾಮಿಕ್ ರಾಜಕೀಯ ಪಕ್ಷದ ಸಭೆಯಲ್ಲಿ ಬಾಂಬ್ ಸ್ಫೋಟಗೊಂಡಿದೆ. ಘಟನೆಯಲ್ಲಿ 40 ಮಂದಿ ಸಾವನ್ನಪ್ಪಿದ್ದು, 50 ಮಂದಿ ಗಾಯಗೊಂಡಿದ್ದಾರೆ.

Pakistan: ಪಾಕಿಸ್ತಾನದ ಬಜೌರ್ ನಗರದಲ್ಲಿ ಬಾಂಬ್ ಸ್ಫೋಟ, ಸಾವಿನ ಸಂಖ್ಯೆ 40ಕ್ಕೆ ಏರಿಕೆ
ಪಾಕಿಸ್ತಾನದ ಬಜೌರ್ ನಗರದಲ್ಲಿ ನಡೆದ ಬಾಂಬ್​ ಬ್ಲಾಸ್ಟ್​ನಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸುತ್ತಿರುವುದು​​
Follow us
Rakesh Nayak Manchi
|

Updated on:Jul 30, 2023 | 7:38 PM

ಇಸ್ಲಾಮಾಬಾದ್, ಜುಲೈ 30: ಪಾಕಿಸ್ತಾನದ ಬಜೌರ್ ನಗರದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ನಡೆಯುತ್ತಿದ್ದ ಇಸ್ಲಾಮಿಕ್ ರಾಜಕೀಯ ಪಕ್ಷದ ಸಭೆಯಲ್ಲಿ ಇಂದು ಸಂಭವಿಸಿದ ಬಾಂಬ್ ಸ್ಫೋಟದಲ್ಲಿ (Bomb Blast) ಸಾವನ್ನಪ್ಪಿದವರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ 50 ಮಂದಿ ಗಾಯಗೊಂಡಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

ಬಜೌರ್‌ನ ಖಾರ್‌ನಲ್ಲಿ ಜಮಿಯತ್ ಉಲೇಮಾ-ಎ-ಇಸ್ಲಾಂ-ಫಜಲ್ (JUI-F) ಕಾರ್ಯಕರ್ತರ ಸಮಾವೇಶದಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ ಜಿಯೋ ನ್ಯೂಸ್ ವರದಿ ಮಾಡಿದೆ. ಘಟನೆಯಲ್ಲಿ ಗಾಯಗೊಂಡ ಸುಮಾರು 50 ಮಂದಿಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Ukraine Drone Attack: ಉಕ್ರೇನ್​ನ ಡ್ರೋನ್ ದಾಳಿಯಿಂದ 2 ಕಟ್ಟಡಗಳಿಗೆ ಹಾನಿ, ಮಾಸ್ಕೋ ವಿಮಾನ ನಿಲ್ದಾಣ ಬಂದ್

ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಐದು ಆಂಬ್ಯುಲೆನ್ಸ್‌ಗಳು ಸ್ಥಳಕ್ಕೆ ತಲುಪಿವೆ ಎಂದು 1122 ರಕ್ಷಣಾ ತಂಡ ವಕ್ತಾರ ಬಿಲಾಲ್ ಫೈಜಿ ಡಾನ್ ಪತ್ರಿಕೆಗೆ ಹೇಳಿಕೆ ನೀಡಿದ್ದಾರೆ. ಪಕ್ಷದ ಹಿರಿಯ ನಾಯಕನ ಆಗಮನಕ್ಕೂ ಮುನ್ನ ಸ್ಫೋಟ ಸಂಭವಿಸಿದೆ ಎಂದು ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಪೊಲೀಸ್ ಮಹಾನಿರೀಕ್ಷಕ ಅಖ್ತರ್ ಹಯಾತ್ ಗಂದಾಪುರ್ ಹೇಳಿದ್ದಾರೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ನಗರದ ಮುಖ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ನಜೀರ್ ಖಾನ್ ಹೇಳಿದ್ದಾರೆ.

ಮೌಲಾನಾ ಫಜ್ಲುರ್ ರೆಹಮಾನ್ ಅವರನ್ನು ತಾಲಿಬಾನ್ ಪರ ಧರ್ಮಗುರು ಎಂದು ಪರಿಗಣಿಸಲಾಗಿದೆ. ಅವರ ರಾಜಕೀಯ ಪಕ್ಷವು ಇಸ್ಲಾಮಾಬಾದ್‌ನಲ್ಲಿ ಸಮ್ಮಿಶ್ರ ಸರ್ಕಾರದ ಭಾಗವಾಗಿದೆ. ಅಕ್ಟೋಬರ್ ವೇಳೆಗೆ ನಡೆಯಲಿರುವ ಚುನಾವಣೆಗೆ ಬೆಂಬಲಿಗರನ್ನು ಸಜ್ಜುಗೊಳಿಸಲು ದೇಶಾದ್ಯಂತ ಸಭೆಗಳನ್ನು ಆಯೋಜಿಸಲಾಗಿದೆ.

ವಿದೇಶ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:12 pm, Sun, 30 July 23

ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ
ಅಖ್ನೂರ್​ ಬಳಿ ಬರಿದಾದ ಚೆನಾಬ್ ನದಿ, ಖಾಲಿ ನದಿಯಲ್ಲಿ ಸ್ಥಳೀಯರ ಓಡಾಟ
ಅಖ್ನೂರ್​ ಬಳಿ ಬರಿದಾದ ಚೆನಾಬ್ ನದಿ, ಖಾಲಿ ನದಿಯಲ್ಲಿ ಸ್ಥಳೀಯರ ಓಡಾಟ
ಹರೀಶ್ ಪೂಂಜಾ ಸೀರಿಯಲ್ ಅಫೆಂಡರ್ ಹಾಗೆ ಗೋಚರಿಸಸುತ್ತಾರೆ: ದಿನೇಶ್ ಗುಂಡೂರಾವ್
ಹರೀಶ್ ಪೂಂಜಾ ಸೀರಿಯಲ್ ಅಫೆಂಡರ್ ಹಾಗೆ ಗೋಚರಿಸಸುತ್ತಾರೆ: ದಿನೇಶ್ ಗುಂಡೂರಾವ್
ಭದ್ರತಾ ಸಿಬ್ಬಂದಿ ಮೇಲೆ ಕಾರು ಹತ್ತಿಸಿದ ಚಾಲಕ
ಭದ್ರತಾ ಸಿಬ್ಬಂದಿ ಮೇಲೆ ಕಾರು ಹತ್ತಿಸಿದ ಚಾಲಕ
ಪೆಟ್ರೋಲ್​ ಹಾಕುವ ವಿಚಾರಕ್ಕೆ ಗಲಾಟೆ: ಅಟ್ಟಾಡಿಸಿ ಕೆಲಸಗಾರರ ಮೇಲೆ ಹಲ್ಲೆ
ಪೆಟ್ರೋಲ್​ ಹಾಕುವ ವಿಚಾರಕ್ಕೆ ಗಲಾಟೆ: ಅಟ್ಟಾಡಿಸಿ ಕೆಲಸಗಾರರ ಮೇಲೆ ಹಲ್ಲೆ
ಸದಾನಂದಗೌಡರು ಬುಲ್ಡೋಜರ್ ಬಳಸುವ ಬಗ್ಗೆ ಹೇಳಿದ್ದು ಗೊತ್ತಿಲ್ಲ: ಪರಮೇಶ್ವರ್
ಸದಾನಂದಗೌಡರು ಬುಲ್ಡೋಜರ್ ಬಳಸುವ ಬಗ್ಗೆ ಹೇಳಿದ್ದು ಗೊತ್ತಿಲ್ಲ: ಪರಮೇಶ್ವರ್
ಕರ್ನಾಟಕದಿಂದ ಎಷ್ಟು ಪಾಕಿಸ್ತಾನೀಯರು ವಾಪಸ್? ಮಾಹಿತಿ ನೀಡಿದ ಪರಮೇಶ್ವರ್
ಕರ್ನಾಟಕದಿಂದ ಎಷ್ಟು ಪಾಕಿಸ್ತಾನೀಯರು ವಾಪಸ್? ಮಾಹಿತಿ ನೀಡಿದ ಪರಮೇಶ್ವರ್
ಶಿವಾನಂದ ರಾಜೀನಾಮೆ ಸಲ್ಲಿಸಿರುವುದು ಕೇವಲ ನಾಟಕ ಮಾತ್ರ: ವಿಶ್ವನಾಥ್
ಶಿವಾನಂದ ರಾಜೀನಾಮೆ ಸಲ್ಲಿಸಿರುವುದು ಕೇವಲ ನಾಟಕ ಮಾತ್ರ: ವಿಶ್ವನಾಥ್
ಡಿಎಂಕೆ ಸಂಸದ ರಾಜಾ ಭಾಷಣ ಮಾಡುವಾಗ ಬಿದ್ದ ಫೆಡ್​ಲೈಟ್ ಕಂಬ
ಡಿಎಂಕೆ ಸಂಸದ ರಾಜಾ ಭಾಷಣ ಮಾಡುವಾಗ ಬಿದ್ದ ಫೆಡ್​ಲೈಟ್ ಕಂಬ
ಉಗ್ರರಿಗೆ ಸಹಾಯ ಮಾಡಿದ್ದ ಇಮ್ತಿಯಾಜ್ ನದಿಗೆ ಹಾರಿ ಪ್ರಾಣ ಬಿಟ್ಟ
ಉಗ್ರರಿಗೆ ಸಹಾಯ ಮಾಡಿದ್ದ ಇಮ್ತಿಯಾಜ್ ನದಿಗೆ ಹಾರಿ ಪ್ರಾಣ ಬಿಟ್ಟ