ಭಯೋತ್ಪಾದನೆ ವಿರುದ್ಧದ ಹೋರಾಟ, ಭಾರತದ ಜತೆ ನಾವಿದ್ದೇವೆಂದು ಅಭಯ ನೀಡಿದ ಅಮೆರಿಕ

ಭಾರತದ ಜತೆ ನಾವಿದ್ದೇವೆ ಎಂದು ಅಮೆರಿಕ ಭಾರತಕ್ಕೆ ಅಭಯ ನೀಡಿದೆ. ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಅಮೆರಿಕ ಭಾರತದ ಜೊತೆ ನಿಲ್ಲುತ್ತದೆ ಎಂದು ಅಮೆರಿಕದ ವಿದೇಶಾಂಗ ಇಲಾಖೆ ಹೇಳಿಕೆ ನೀಡಿದೆ. ನಾವು ಪ್ರಧಾನಿ ಮೋದಿಯವರನ್ನು ಸಂಪೂರ್ಣವಾಗಿ ಬೆಂಬಲಿಸುತ್ತೇವೆ ಎಂದು ಅವರು ಹೇಳಿದರು. ಪಹಲ್ಗಾಮ್ ದಾಳಿಯ ನಂತರ ಅಮೆರಿಕ ವಿದೇಶಾಂಗ ಇಲಾಖೆಯಿಂದ ಈ ಹೇಳಿಕೆ ಬಂದಿದೆ.

ಭಯೋತ್ಪಾದನೆ ವಿರುದ್ಧದ ಹೋರಾಟ, ಭಾರತದ ಜತೆ ನಾವಿದ್ದೇವೆಂದು ಅಭಯ ನೀಡಿದ ಅಮೆರಿಕ
ಮಾರ್ಕ್​

Updated on: May 02, 2025 | 2:20 PM

ವಾಷಿಂಗ್ಟನ್, ಮೇ 02: ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಅಮೆರಿಕ ಭಾರತದ ಜೊತೆ ನಿಲ್ಲುತ್ತದೆ ಎಂದು ಅಮೆರಿಕದ ವಿದೇಶಾಂಗ ಇಲಾಖೆ ಹೇಳಿಕೆ ನೀಡಿದೆ. ನಾವು ಪ್ರಧಾನಿ ಮೋದಿ(Narendra Modi)ಯವರನ್ನು ಸಂಪೂರ್ಣವಾಗಿ ಬೆಂಬಲಿಸುತ್ತೇವೆ ಎಂದು ಅವರು ಹೇಳಿದರು. ಪಹಲ್ಗಾಮ್ ದಾಳಿಯ ನಂತರ ಅಮೆರಿಕ ವಿದೇಶಾಂಗ ಇಲಾಖೆಯಿಂದ ಈ ಹೇಳಿಕೆ ಬಂದಿದೆ.

ಭಾರತ ಮತ್ತು ಅಮೆರಿಕ ಒಟ್ಟಾಗಿ ಕೆಲಸ ಮಾಡಿ ಪ್ರಾದೇಶಿಕ ಶಾಂತಿ ಮತ್ತು ಸ್ಥಿರತೆಯನ್ನು ಕಾಪಾಡಿಕೊಳ್ಳಲು ಪ್ರಯತ್ನಿಸಬೇಕೆಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಮನವಿ ಮಾಡಿದರು.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ಉಗ್ರರು ದಾಳಿ ನಡೆಸಿ 26 ಮಂದಿಯನ್ನು ಹತ್ಯೆ ಮಾಡಿದ್ದರು.

ಲಷ್ಕರ್ ಎ ತೊಯ್ಬಾದ ಟಿಆರ್​ಎಫ್​ ಹೊಣೆ ಹೊತ್ತುಕೊಂಡಿತ್ತು. ಬಳಿಕ ಉಲ್ಟಾ ಹೊಡೆದಿತ್ತು. ಅದೇನೇ ಇರಲಿ ದಾಳಿಯಲ್ಲಿ ಪಾಕಿಸ್ತಾನದ ಕೈವಾಡವಿರುವುದು ದೃಢಪಟ್ಟಿದೆ. ಹಾಗೆಯೇ ಭಾರತವು ಪಾಕಿಸ್ತಾನದ ವಿರುದ್ಧ ಹಲವು ಕ್ರಮಗಳನ್ನು ಕೈಗೊಂಡಿದೆ. ಜತೆಗೆ ಉಗ್ರರನ್ನು ಹುಡುಕಿ ಕೊಲ್ಲುತ್ತೇವೆ, ಅವರು ಕನಸಲ್ಲೂ ಎಣಿಸಿರದ ಶಿಕ್ಷೆ ಅವರಿಗಾಗಿ ಕಾದಿದೆ ಎಂದು ಪ್ರಧಾನಿ ಮೋದಿ ಹೇಳಿದ್ದರು.

ಇದನ್ನೂ ಓದಿ
ರಾಜ್ಯಸಭೆಯಲ್ಲಿ ಅಸಂಸದೀಯ ಹೇಳಿಕೆಗೆ ಮಲ್ಲಿಕಾರ್ಜುನ ಖರ್ಗೆ ಕ್ಷಮೆಯಾಚನೆ
ಬಸ್‌ ತಡೆದು ನಡು ರಸ್ತೆಯಲ್ಲಿ ಪಾನಮತ್ತ ಮಹಿಳೆಯ ಕಿರಿಕ್; ವಿಡಿಯೋ ವೈರಲ್‌
ಛತ್ತೀಸ್​ಗಢ ಮಾಜಿ ಸಿಎಂ ಭೂಪೇಶ್ ಬಘೇಲ್ ಮನೆ ಸೇರಿ ಹಲವೆಡೆ ಇಡಿ ದಾಳಿ
ಮೊಬೈಲ್​ನಲ್ಲಿ ಮಾತನಾಡುತ್ತಾ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು

ಮತ್ತಷ್ಟು ಓದಿ: ಭಾರತದಿಂದ ವೈಮಾನಿಕ ದಾಳಿ ಭೀತಿ; ಪಾಕಿಸ್ತಾನದಿಂದ ಗಡಿಯಲ್ಲಿ ತುರ್ತು ಸೈರನ್ ಅಳವಡಿಕೆ

ಅಮೆರಿಕ ವಿದೇಶಾಂಗ ಇಲಾಖೆಯ ವಕ್ತಾರ ಟ್ಯಾಮಿ ಬ್ರೂಸ್ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯನ್ನು ಅಮೆರಿಕ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಹೇಳಿದರು.

ಈ ಘಟನೆಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹೆಚ್ಚಿದೆ. ಈ ಘಟನೆಗೆ ಪಾಕಿಸ್ತಾನವೇ ಕಾರಣ ಎಂದು ಭಾರತ ಆರೋಪಿಸಿದೆ ಮತ್ತು ಪಾಕಿಸ್ತಾನದೊಂದಿಗಿನ ಸಿಂಧೂ ನದಿ ನೀರು ಒಪ್ಪಂದವನ್ನು ಸ್ಥಗಿತಗೊಳಿಸುವುದಾಗಿ ಘೋಷಿಸಿದೆ. ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಅವರು ಬುಧವಾರ ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದರು.

ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಅಮೆರಿಕ ಭಾರತದ ಜೊತೆ ನಿಲ್ಲುತ್ತದೆ ಮತ್ತು ಪ್ರಧಾನಿ ಮೋದಿ ಅವರಿಗೆ ನಮ್ಮ ಸಂಪೂರ್ಣ ಬೆಂಬಲವಿದೆ. ‘ನಮ್ಮ ಸರ್ಕಾರ ಭಾರತ ಮತ್ತು ಪಾಕಿಸ್ತಾನದೊಂದಿಗೆ ನಿರಂತರವಾಗಿ ಮಾತುಕತೆ ನಡೆಸುತ್ತಿದೆ’ ಎಂದು ಬ್ರೂಸ್ ಹೇಳಿದರು.

ಎರಡೂ ದೇಶಗಳು ಜವಾಬ್ದಾರಿಯುತವಾಗಿ ವರ್ತಿಸುವಂತೆ ನಾವು ಮನವಿ ಮಾಡಿದ್ದೇವೆ. ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರೊಂದಿಗಿನ ಸಂಭಾಷಣೆಯಲ್ಲಿ, ಮಾರ್ಕೊ ರೂಬಿಯೊ ಪಹಲ್ಗಾಮ್ ದಾಳಿಯ ಬಗ್ಗೆ ದುಃಖ ವ್ಯಕ್ತಪಡಿಸಿದರು.

ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಅಮೆರಿಕ ಭಾರತದ ಜೊತೆ ನಿಲ್ಲುತ್ತದೆ ಎಂದು ಅವರು ದೃಢಪಡಿಸಿದರು. ಪ್ರಾದೇಶಿಕ ಶಾಂತಿ ಮತ್ತು ಸ್ಥಿರತೆಯನ್ನು ಕಾಪಾಡಿಕೊಳ್ಳಲು ಪಾಕಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಕಡಿಮೆ ಮಾಡುವಂತೆ ಅವರು ಭಾರತಕ್ಕೆ ಸಲಹೆ ನೀಡಿದ್ದಾರೆ.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Published On - 2:18 pm, Fri, 2 May 25