ತೈವಾನ್ ಸಂಸತ್ತಿನಲ್ಲಿ ಭಾರೀ ಗದ್ದಲ, ಸ್ಪೀಕರನ್ನು ಬಿಡದೆ ಹಿಗ್ಗಾಮುಗ್ಗಾ ಥಳಿಸಿದ ಸಂಸದರು

ತೈವಾನ್ ಸಂಸತ್ತಿನಲ್ಲಿ ಭಾರೀ ಗದ್ದಲ ಉಂಟಾಗಿದೆ, ಸ್ವೀಕರ್​​​ ಎಂದು ನೋಡದೆ ಸಂಸದರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ತೈವಾನ್ ಸಂಸತ್ತಿನಲ್ಲಿ ಅವ್ಯವಸ್ಥೆ ಉಂಟಾಗಿದ್ದು, ಇದೀಗ ಈ ಬಗ್ಗೆ ಒಂದು ವಿಡಿಯೋ ಕೂಡ ವೈರಲ್​​ ಆಗಿದೆ. ಇಷ್ಟಕ್ಕೂ ತೈವಾನ್ ಸಂಸತ್ತಿನಲ್ಲಿ ಈ ಗದ್ದಲಕ್ಕೆ ಕಾರಣ ಏನು ಎಂಬುದನ್ನು ಅಲ್ಲಿ ಮಾಧ್ಯಮಗಳು ವರದಿ ಮಾಡಿದೆ.

ತೈವಾನ್ ಸಂಸತ್ತಿನಲ್ಲಿ ಭಾರೀ ಗದ್ದಲ, ಸ್ಪೀಕರನ್ನು ಬಿಡದೆ ಹಿಗ್ಗಾಮುಗ್ಗಾ ಥಳಿಸಿದ ಸಂಸದರು
Follow us
ಅಕ್ಷಯ್​ ಪಲ್ಲಮಜಲು​​
|

Updated on:May 18, 2024 | 11:48 AM

ತೈವಾನ್ ಸಂಸತ್ತಿನಲ್ಲಿ ಭಾರೀ ಗದ್ದಲ ಉಂಟಾಗಿದೆ. ಸಂಸತ್ತು ಸುಧಾರಣಾ ಕ್ರಮಗಳ ಕುರಿತು ಬಿಸಿಬಿಸಿ ಚರ್ಚೆಯ ಸಂದರ್ಭದಲ್ಲಿ ಸಂಸದರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಈ ಬಗ್ಗೆ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಇದೀಗ ತೈವಾನ್ ಸಂಸತ್ತಿನಲ್ಲಿ ಭಾರೀ ಅವ್ಯವಸ್ಥೆಗೆ ಕಾರಣವಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ. ಮಾಧ್ಯಮ ವರದಿಗಳ ಪ್ರಕಾರ, ಸರ್ಕಾರದ ಕ್ರಮಗಳ ಮೇಲ್ವಿಚಾರಣೆ ಬಗ್ಗೆ ಸಂಸತ್​​​ ಸದಸ್ಯರಿಗೆ ಹೆಚ್ಚಿನ ಅಧಿಕಾರ ನೀಡುವ ಬಗ್ಗೆ ಚರ್ಚಿಸಲಾಗಿದೆ. ಈ ಸಮಯದಲ್ಲಿ ಸಂಸದರ ನಡುವೆ ಮಾತಿನ ಚಕಮಕಿ ನಡೆದಿದೆ.

ಇನ್ನು ಈ ವಿಡಿಯೋದಲ್ಲಿ ಸಂಸತ್​​ ಸದಸ್ಯರು ಕಡತಗಳನ್ನು ಕಸಿದುಕೊಂಡು ಸಂಸತ್ತಿನ ಹೊರಗೆ ಓಡುತ್ತಿರುವುದನ್ನು ನೋಡಬಹುದು. ಮತ್ತೊಂದು ವೀಡಿಯೊದಲ್ಲಿ ಕೆಲವು ಸಂಸದರು ಸ್ಪೀಕರ್ ಆಸನದತ್ತ ದಾಳಿ ಮಾಡಿರುವುದನ್ನು ಕಾಣಬಹುದು. ಮೇಜುಗಳ ಮೇಲೆ ಜಿಗಿದಿದು, ಸಭಾಪತಿಯನ್ನು ಎಳೆದಾಡಿದ್ದಾರೆ. ಇದೀಗ ಈ ಸಭೆಯನ್ನು ಮುಂದೂಡಲಾಗಿದ್ದು, ಮಧ್ಯಾಹ್ನದ ನಂತರ ಈ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಸೋಮವಾರ ಸಂಸದರ ಬಹುಮತವಿಲ್ಲದೆ ಅಧ್ಯಕ್ಷರಾಗಿ ಚುನಾಯಿತ ಲೈ ಚಿಂಗ್-ಟೆ ಅಧಿಕಾರ ವಹಿಸಿಕೊಂಡ ನಂತರ ನಡೆದ ಮೊದಲ ಜಗಳವಾಗಿದೆ ಎಂದು ಮಾಧ್ಯಮಗಳು ಹೇಳಿದೆ. ಈ ವಿಡಿಯೋದಲ್ಲಿ ಮಹಿಳೆಯರು ಎಂದು ನೋಡದೆ ಎಳೆದಾಡಿದ್ದಾರೆ. ಇನ್ನು ಸಂಸತ್ತಿನಲ್ಲಿ ಗದ್ದಲಕ್ಕೆ ಕಾರಣವಾಗಿರುವ ಕಾನೂನಿನಲ್ಲಿ ಏನಿದೆ ಎಂಬುದನ್ನು ನೋಡುವುದಾದರೆ, ಸಂಸತ್ತಿನಲ್ಲಿ ಸುಳ್ಳು ಹೇಳಿಕೆಗಳನ್ನು ನೀಡುವ ಸಂಸದರನ್ನು ಅಪರಾಧಿ ಎಂದು ಪರಿಗಣಿಸುವ ಕ್ರಮಕ್ಕೆ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ (ಡಿಪಿಪಿ) ಮತ್ತು ಕ್ಯುಮಿಂಟಾಂಗ್ (ಕೆಎಂಟಿ)ಪಕ್ಷದ ನಡುವೆ ಈ ಜಗಳ ನಡೆದಿದೆ.

ಇದನ್ನೂ ಓದಿ: ಪಾಕಿಸ್ತಾನ ಸಂಸತ್ತಿನಲ್ಲಿ ಮತ್ತೊಮ್ಮೆ ಮೊಳಗಿದ ಭಾರತ ಜಯಘೋಷ, ಶತ್ರು ರಾಷ್ಟ್ರದ ಅಸಹಾಯಕತೆ ಬಯಲು

ಈ ಸಂಸತ್ತಿನ ಹೊರಗೆ ಕೂಡ ಈ ಬಗ್ಗೆ ಬಿಸಿಬಿಸಿ ಚರ್ಚೆಗಳು ನಡೆದಿದೆ. ಹೊಸ ಸರ್ಕಾರದ ರಚನೆಯು ಈಗಾಗಲೇ ವಿವಾದದಲ್ಲಿದೆ. ಜನವರಿಯಲ್ಲಿ ನಡೆದ ಚುನಾವಣೆಯಲ್ಲಿ ಡಿಪಿಪಿ ಪಕ್ಷ ಗೆದ್ದರೂ, ಬಹುಮತ ಸಾಬೀತು ಪಡೆಸುವುದರಲ್ಲಿ ಸೋತಿಗೆ ಎಂದು ಹೇಳಲಾಗಿದೆ. ಇನ್ನು ವಿರೋಧ ಪಕ್ಷದಲ್ಲಿರುವ KMT ಪಕ್ಷ ಹೆಚ್ಚಿನ ಸ್ಥಾನಗಳನ್ನು ಹೊಂದಿದೆ. ಆದರೆ ಈ ಪಕ್ಷಕ್ಕೂ ತನ್ನ ಬಹುಮತ ಸಾಬೀತು ಪಡೆಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಲಾಗಿದೆ. ಸಂಸತ್ತಿನ 113 ಸ್ಥಾನಗಳಲ್ಲಿ ಎಂಟು ಸ್ಥಾನಗಳು ಡಿಪಿಪಿ ಪಕ್ಷಕ್ಕೆ ಬೇಕಾಗಿದೆ. ಅದಕ್ಕಾಗಿ ಮೈತ್ರಿ ಒಕ್ಕೂಟ ಮಾಡಲು ಪ್ರಯತ್ನಿಸುತ್ತಿದೆ ಎಂದು ಮಾಧ್ಯಮಗಳು ಹೇಳಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:35 am, Sat, 18 May 24

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ