ಇಂಡೋನೇಷ್ಯಾದ ಬೃಹತ್ ತೈಲ ಸಂಸ್ಕರಣಾಗಾರದಲ್ಲಿ ಅಗ್ನಿ ಅವಘಡ: ಸುಮಾರು 1000 ಸ್ಥಳೀಯರ ಸ್ಥಳಾಂತರ

ಸಂಸ್ಕರಣಾಗಾರದ ಸಂಗ್ರಹ ಟ್ಯಾಂಕ್​ನಲ್ಲಿ ಬೆಂಕಿ ಮೊದಲು ಕಾಣಿಸಿಕೊಂಡಿತು. ನಂತರ ಅಕ್ಕಪಕ್ಕದ ಸಂಗ್ರಹ ಟ್ಯಾಂಕ್​ಗಳೂ ಸ್ಫೋಟಗೊಂಡವು. ಸ್ಫೋಟದ ಸದ್ದಿನಿಂದ ಓರ್ವ ವ್ಯಕ್ತಿಗೆ ಹೃದಯಾಘಾತವಾಗಿ, ಮೃತಪಟ್ಟಿದ್ದಾನೆ. ಘಟನೆಯಲ್ಲಿ 15 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೂವರು ನಾಪತ್ತೆಯಾಗಿದ್ದಾರೆ.

ಇಂಡೋನೇಷ್ಯಾದ ಬೃಹತ್ ತೈಲ ಸಂಸ್ಕರಣಾಗಾರದಲ್ಲಿ ಅಗ್ನಿ ಅವಘಡ: ಸುಮಾರು 1000 ಸ್ಥಳೀಯರ ಸ್ಥಳಾಂತರ
ಇಂಡೊನೇಷ್ಯಾದಲ್ಲಿ ಹೊತ್ತಿ ಉರಿಯುತ್ತಿರುವ ತೈಲ ಸಂಸ್ಕರಣಾಗಾರ
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on:Mar 29, 2021 | 6:39 PM

ಜಕಾರ್ತಾ: ಇಂಡೋನೇಷ್ಯಾದ ಬೃಹತ್ ತೈಲ ಸಂಸ್ಕರಣಾಗಾರದಲ್ಲಿ ಸೋಮವಾರ ಭಾರೀ ಅಗ್ನಿಅವಘಡ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಸಂಸ್ಕರಣಾ ಸಮುಚ್ಚಯದ ಕಟ್ಟಡಗಳು ಛಿದ್ರವಾಗಿವೆ. ಪಶ್ಚಿಮ ಜಾವಾದ ಬಾಲನ್​ಗಾನ್​ ತೈಲ ಸಂಸ್ಕರಣಾಗಾರದಲ್ಲಿ ದುರಂತ ಸಂಭವಿಸಿದೆ. ಸರ್ಕಾರಿ ಸ್ವಾಮ್ಯದ ಪೆರ್ಟಮಿನಾ ಕಂಪನಿಯು ಈ ಸಂಸ್ಕರಣಾ ಘಟಕವನ್ನು ನಿರ್ವಹಿಸುತ್ತಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ಧಾವಿಸಿದ್ದಾರೆ. ‘ಭಾರೀ ಪ್ರಮಾಣದಲ್ಲಿ ಸದ್ದು ಕೇಳಿಸಿತು. ನಾನೆಲ್ಲೋ ಚಂಡಮಾರುತವೇ ಬಂತು ಎಂದುಕೊಂಡೆ ಎಂದು ಸ್ಥಳೀಯ ನಿವಾಸಿ ರುಮಾಜಿ ಎಎಫ್​ಪಿ ಸುದ್ದಿಸಂಸ್ಥೆಗೆ ಹೇಳಿಕೆ ನೀಡಿದ್ದಾರೆ. ನಾನು ಹೊರಗೆ ಬಂದು ನೋಡಿದೆ. ಆಕಾಶದ ಎತ್ತರಕ್ಕೆ ಬೆಂಕಿ ಕಾಣಿಸಿಕೊಂಡಿತ್ತು’ ಎಂದು ಅವರು ತಿಳಿಸಿದ್ದಾರೆ.

ದುರ್ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸುಮಾರು 1000 ಸ್ಥಳೀಯರನ್ನು ಸ್ಥಳಾಂತರಿಸಲಾಗಿದೆ. ಸಂಸ್ಕರಣಾಗಾರದ ಸಂಗ್ರಹ ಟ್ಯಾಂಕ್​ನಲ್ಲಿ ಬೆಂಕಿ ಮೊದಲು ಕಾಣಿಸಿಕೊಂಡಿತು. ನಂತರ ಅಕ್ಕಪಕ್ಕದ ಸಂಗ್ರಹ ಟ್ಯಾಂಕ್​ಗಳೂ ಸ್ಫೋಟಗೊಂಡವು. ಸ್ಫೋಟದ ಸದ್ದಿನಿಂದ ಓರ್ವ ವ್ಯಕ್ತಿಗೆ ಹೃದಯಾಘಾತವಾಗಿ, ಮೃತಪಟ್ಟಿದ್ದಾನೆ. ಘಟನೆಯಲ್ಲಿ 15 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೂವರು ನಾಪತ್ತೆಯಾಗಿದ್ದಾರೆ.

ಬೆಂಕಿ ಹರಡುವುದನ್ನು ತಡೆಯಲೆಂದು ನಾವು ತೈಲ ಸಂಸ್ಕರಣೆ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದ್ದೇವೆ. ಬೆಂಕಿ ಆರಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಪರ್ಟಮಿನಾ ಕಂಪನಿಯ ನಿರ್ದೇಶಕಿ ನಿಕಿ ವಿದ್ಯಾವತಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಬೆಂಕಿಗೆ ಏನು ಕಾರಣ ಎಂಬುದು ಈವರೆಗೆ ತಿಳಿದುಬಂದಿಲ್ಲ. ಸಿಡಿಲು ಸಹಿತ ಮಳೆ ಆರಂಭವಾದಾಗಲೇ ಸ್ಫೋಟದ ಸದ್ದೂ ಕೇಳಿಸಿತು ಎಂದು ಸ್ಥಳೀಯರು ಹೇಳಿದ್ದಾರೆ.

Indonesia

ಇಂಡೋನೇಷ್ಯಾದಲ್ಲಿ ಹೊತ್ತಿ ಉರಿಯುತ್ತಿರುವ ತೈಲ ಸಂಸ್ಕರಣಾಗಾರ

ಬೆಂಕಿಯನ್ನು ನಿಯಂತ್ರಿಸಲಾಗಿದೆ. ಆದರೆ ಪೂರ್ಣ ಪ್ರಮಾಣದಲ್ಲಿ ಆರಿಸಲು ಸಾಧ್ಯವಾಗಿಲ್ಲ ಎಂದು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದಾರೆ. ಅಗ್ನಿ ಅವಘಡದಿಂದ ದೇಶದಲ್ಲಿ ಇಂಧನ ಸರಬರಾಜು ವ್ಯವಸ್ಥೆಗೆ ಹಾನಿಯಾಗಬಹುದು ಎಂಬ ವರದಿಗಳನ್ನು ಪರ್ಟಮಿನಾ ಕಂಪನಿ ನಿರಾಕರಿಸಿದೆ. ದೇಶಕ್ಕೆ ಅಗತ್ಯವಿರುವಷ್ಟು ಇಂಧನ ದಾಸ್ತಾನು ಲಭ್ಯವಿದೆ ಎಂದು ಕಂಪನಿಯ ಮತ್ತೋರ್ವ ನಿರ್ದೇಶಕ ಮುಲ್ಯೊನೊ ಹೇಳಿದ್ದಾರೆ.

ಜನರು ಹೆದರುವ ಅಗತ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ. ಗ್ರೀನ್​ಪೀಸ್ ಸಂಸ್ಥೆಯು ಪ್ರಕರಣದ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದೆ. 90ರ ದಶಕದ ಮಧ್ಯಭಾಗದಲ್ಲಿ ಆರಂಭವಾದ ತೈಲ ಸಂಸ್ಕರಣಾಗಾರವು ದಿನಕ್ಕೆ 1.25 ಲಕ್ಷ ಬ್ಯಾರೆಲ್ ತೈಲವನ್ನು ಸಂಸ್ಕರಿಸಬಲ್ಲದು. ಈ ಪ್ರದೇಶವು ಇಂಡೋನೇಷ್ಯಾದ ರಾಜಧಾನಿ ಜಕಾರ್ತಾದಿಂದ 200 ಕಿ.ಮೀ. ದೂರದಲ್ಲಿದೆ.

ಇದನ್ನೂ ಓದಿ: ಡಿಎಂಕೆಯ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆಗಳ ಮಹಾಪೂರ; ಇಂಧನ ಬೆಲೆ ಕಡಿತಕ್ಕೆ ಆದ್ಯತೆಯೆಂದ ಸ್ಟಾಲಿನ್​ ​

Published On - 6:38 pm, Mon, 29 March 21

ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು