ಪಾಕಿಸ್ತಾನದ ಖ್ಯಾತ ಇಸ್ಲಾಮಿಕ್ ವಿದ್ವಾಂಸ ಮೌಲಾನಾ ತಾರಿಕ್ ಪುತ್ರ ಎದೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
ಪಾಕಿಸ್ತಾನದ ಖ್ಯಾತ ಇಸ್ಲಾಮಿಕ್ ವಿದ್ವಾಂಸ ಮೌಲಾನಾ ತಾರಿಕ್ ಜಮೀಲ್ ಅವರ ಪುತ್ರ ಆಸಿಮ್ ಜಮೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮೌಲಾನಾ ಮಾಹಿತಿ ನೀಡಿದ್ದಾರೆ, ತನ್ನ ಮಗ ಆಸೀಮ್ ಜಮೀಲ್ ಇಂದು ತಲಂಬಾದಲ್ಲಿ ಮೃತಪಟ್ಟಿದ್ದಾನೆ. ಈ ಹಠಾತ್ ಸಾವಿನ ಶಾಕ್ನಿಂದ ನಮಗೆ ಹೊರಬರಲಾಗುತ್ತಿಲ್ಲ ಎಂದು ಬರೆದುಕೊಂಡಿದ್ದಾರೆ.
ಪಾಕಿಸ್ತಾನದ ಖ್ಯಾತ ಇಸ್ಲಾಮಿಕ್ ವಿದ್ವಾಂಸ ಮೌಲಾನಾ ತಾರಿಕ್ ಜಮೀಲ್(Maulana Tariq Jamil) ಅವರ ಪುತ್ರ ಆಸಿಮ್ ಜಮೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮೌಲಾನಾ ಮಾಹಿತಿ ನೀಡಿದ್ದಾರೆ, ತನ್ನ ಮಗ ಆಸೀಮ್ ಜಮೀಲ್ ಇಂದು ತಲಂಬಾದಲ್ಲಿ ಮೃತಪಟ್ಟಿದ್ದಾನೆ. ಈ ಹಠಾತ್ ಸಾವಿನ ಶಾಕ್ನಿಂದ ನಮಗೆ ಹೊರಬರಲಾಗುತ್ತಿಲ್ಲ ಎಂದು ಬರೆದುಕೊಂಡಿದ್ದಾರೆ.
ತಲಂಬಾದಲ್ಲಿರುವ ತಮ್ಮ ತೋಟದ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಎದೆಗೆ ಗುಂಡು ತಗುಲಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಪೊಲೀಸರು ಮತ್ತು ಫೋರೆನ್ಸಿಕ್ ತಂಡವು ಪ್ರಕರಣದ ತನಿಖೆ ನಡೆಸುತ್ತಿದ್ದು, ಸಾವಿನ ಕಾರಣದ ಬಗ್ಗೆ ಇನ್ನೂ ಏನೂ ಸ್ಪಷ್ಟಪಡಿಸಲಾಗಿಲ್ಲ.
ಮೃತದೇಹವನ್ನು ಆರೋಗ್ಯ ಕೇಂದ್ರದಿಂದ ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿಸಿದರು. ವಿಧಿವಿಜ್ಞಾನ ವರದಿಯ ಆಧಾರದ ಮೇಲೆ ಸಾವಿಗೆ ಕಾರಣವನ್ನು ತಿಳಿಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಖನೇವಾಲ್ ಜಿಲ್ಲಾ ಪೊಲೀಸ್ ಅಧಿಕಾರಿ ಮತ್ತು ಇತರ ಹಿರಿಯ ಸಿಬ್ಬಂದಿ ಸ್ಥಳದಲ್ಲಿ ಹಾಜರಿದ್ದು, ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಮತ್ತಷ್ಟು ಓದಿ: ಗಲಾಟೆ ವೇಳೆ ಸೀರೆ ಹಿಡಿದು ವ್ಯಕ್ತಿ ಎಳೆದಾಡಿದ ಆರೋಪ: ಮನನೊಂದು ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ
ಪಾಕಿಸ್ತಾನ್ ಟ್ರಿಬ್ಯೂನ್ ತನ್ನ ವರದಿಯಲ್ಲಿ ಖ್ಯಾತ ಇಸ್ಲಾಮಿಕ್ ವಿದ್ವಾಂಸ ಮೌಲಾನಾ ತಾರಿಕ್ ಜಮೀಲ್ ಅವರ ಪುತ್ರ ಆಸಿಮ್ ತನ್ನ ಫಾರ್ಮ್‌ಹೌಸ್‌ನಲ್ಲಿ ಎದೆಗೆ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾರೆ ಎಂದು ವರದಿ ಮಾಡಿದೆ.
ತುಲಂಬಾ ಆಸ್ಪತ್ರೆಯ ವೈದ್ಯ ಆಸಿಫ್ ಇಮಾಮ್ ಸಾವನ್ನು ಖಚಿತಪಡಿಸಿದ್ದಾರೆ. ಮೌಲಾನಾ ಅವರ ಪುತ್ರ ಆಸೀಮ್ ಫಾರ್ಮ್‌ಹೌಸ್‌ನಲ್ಲಿರುವ ಜಿಮ್‌ನಲ್ಲಿ ವ್ಯಾಯಾಮ ಮಾಡುತ್ತಿದ್ದರು, ಸಿಬ್ಬಂದಿಯೊಬ್ಬರು ಅವರ ಸುರಕ್ಷತೆಗಾಗಿ ಅಲ್ಲೇ ಇದ್ದರು ಎಂದು ಮೂಲಗಳನ್ನು ಉಲ್ಲೇಖಿಸಿ ವರದಿ ಹೇಳಿದೆ. ಆಸೀಮ್ ಸಿಬ್ಬಂದಿಯಿಂದ ಪಿಸ್ತೂಲ್ ತೆಗೆದುಕೊಂಡು ಎದೆಗೆ ಗುಂಡು ಹಾರಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಆಸಿಮ್ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದರು, ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು, ಪಿಸ್ತೂಲ್ ತೆಗೆದು ಗುಂಡು ಹಾರಿಸಿಕೊಳ್ಳಲು ಯತ್ನಿಸಿದಾಗ ಅಲ್ಲಿದ್ದ ಸಿಬ್ಬಂದಿ ಅದನ್ನು ತಡೆಯಲು ತುಂಬಾ ಪ್ರಯತ್ನ ಪಟ್ಟರು, ಆದರೂ ಸಾಧ್ಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:43 am, Mon, 30 October 23