AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mehul Choksi: ಬೆಲ್ಜಿಯಂನಲ್ಲಿ ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿ ಬಂಧನ

Mehul Choksi: Arrested: ಪಂಜಾಬ್ ನ್ಯಾಷನಲ್ ಬ್ಯಾಂಕ್ ಸಾಲ ಹಗರಣದಲ್ಲಿ ಪ್ರಮುಖ ಆರೋಪಿಯಾಗಿರುವ ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿ(Mehul Choksi)ಯನ್ನು ಬೆಲ್ಜಿಯಂನಲ್ಲಿ ಬಂಧಿಸಲಾಗಿದೆ. ಕೇಂದ್ರ ತನಿಖಾ ದಳದ (ಸಿಬಿಐ) ಮೇಲ್ಮನವಿಯ ಮೇರೆಗೆ ಶುಕ್ರವಾರ (ಏಪ್ರಿಲ್ 11, 2025) 65 ವರ್ಷದ ಚೋಕ್ಸಿಯನ್ನು ಬಂಧಿಸಲಾಯಿತು ಮತ್ತು ಅವರು ಇನ್ನೂ ಜೈಲಿನಲ್ಲಿದ್ದಾರೆ.

Mehul Choksi: ಬೆಲ್ಜಿಯಂನಲ್ಲಿ ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿ ಬಂಧನ
ಮೆಹುಲ್ ಚೋಕ್ಸಿImage Credit source: The News Minute
Follow us
ನಯನಾ ರಾಜೀವ್
|

Updated on:Apr 14, 2025 | 8:10 AM

ಬೆಲ್ಜಿಯಂ, ಏಪ್ರಿಲ್ 14: ಪಂಜಾಬ್ ನ್ಯಾಷನಲ್ ಬ್ಯಾಂಕ್ ಸಾಲ ಹಗರಣದಲ್ಲಿ ಪ್ರಮುಖ ಆರೋಪಿಯಾಗಿರುವ ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿ(Mehul Choksi)ಯನ್ನು ಬೆಲ್ಜಿಯಂನಲ್ಲಿ ಬಂಧಿಸಲಾಗಿದೆ. ಕೇಂದ್ರ ತನಿಖಾ ದಳದ (ಸಿಬಿಐ) ಮೇಲ್ಮನವಿಯ ಮೇರೆಗೆ ಶುಕ್ರವಾರ (ಏಪ್ರಿಲ್ 11, 2025) 65 ವರ್ಷದ ಚೋಕ್ಸಿಯನ್ನು ಬಂಧಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮೆಹುಲ್ ಚೋಕ್ಸಿ ಪಂಜಾಬ್ ನ್ಯಾಷನಲ್ ಬ್ಯಾಂಕಿನಿಂದ 13,500 ಕೋಟಿ ರೂ. ಸಾಲ ವಂಚನೆ ಮಾಡಿದ್ದ ಮತ್ತು ಬಂಧನವನ್ನು ತಪ್ಪಿಸಲು ಭಾರತದಿಂದ ಬೆಲ್ಜಿಯಂಗೆ ಪರಾರಿಯಾಗಿದ್ದ. ಇಲ್ಲಿ ಅವರು ತಮ್ಮ ಪತ್ನಿ ಪ್ರೀತಿ ಚೋಕ್ಸಿ ಅವರೊಂದಿಗೆ ಆಂಟ್ವೆರ್ಪ್‌ನಲ್ಲಿ ವಾಸಿಸುತ್ತಿದ್ದರು. ಪ್ರೀತಿ ಚೋಕ್ಸಿ ಬೆಲ್ಜಿಯಂ ಪೌರತ್ವವನ್ನು ಹೊಂದಿದ್ದಾರೆ.

ಚೋಕ್ಸಿ ಬೆಲ್ಜಿಯಂನಲ್ಲಿ ‘ಎಫ್ ರೆಸಿಡೆನ್ಸಿ ಕಾರ್ಡ್’ ಹೊಂದಿದ್ದಾರೆ ಮತ್ತು ಅವರು ಚಿಕಿತ್ಸೆಗಾಗಿ ಆಂಟಿಗುವಾದಿಂದ ಬೆಲ್ಜಿಯಂಗೆ ಬಂದಿದ್ದಾರೆ ಎಂದು ಹಲವಾರು ವರದಿಗಳಲ್ಲಿ ಬಹಿರಂಗವಾಗಿದೆ. ಮೆಹುಲ್ ಚೋಕ್ಸಿಯನ್ನು ಬಂಧಿಸುವಾಗ, ಬೆಲ್ಜಿಯಂ ಪೊಲೀಸರು ಮುಂಬೈ ನ್ಯಾಯಾಲಯವು ಅವರ ವಿರುದ್ಧ ಹೊರಡಿಸಿದ ಎರಡು ಬಂಧನ ವಾರಂಟ್‌ಗಳನ್ನು ಉಲ್ಲೇಖಿಸಿದರು.

ಮತ್ತಷ್ಟು ಓದಿ: Mehul Choksi: ರಕ್ಷಣೆಗಾಗಿ ಮೆಹುಲ್ ಚೋಕ್ಸಿ ಆಂಟಿಗುವಾ ಅಧಿಕಾರಿಗಳಿಗೆ ಲಂಚ ನೀಡಿರುವುದು ಬಯಲು

ಈ ವಾರಂಟ್‌ಗಳನ್ನು ಮೇ 23, 2018 ಮತ್ತು ಜೂನ್ 15, 2021 ರಂದು ಹೊರಡಿಸಲಾಗಿದೆ ಎಂದು ವರದಿ ಹೇಳಿದೆ. ಆದಾಗ್ಯೂ, ಮೆಹುಲ್ ಚೋಕ್ಸಿ ಅನಾರೋಗ್ಯ ಮತ್ತು ಇತರ ಕಾರಣಗಳನ್ನು ಉಲ್ಲೇಖಿಸಿ ಜಾಮೀನು ಮತ್ತು ತಕ್ಷಣದ ಬಿಡುಗಡೆಯನ್ನು ಕೋರಬಹುದು ಎಂದು ಹೇಳಲಾಗುತ್ತಿದೆ.

ಪಿಎನ್‌ಬಿಗೆ 13,500 ಕೋಟಿ ರೂ.ಗಳಷ್ಟು ವಂಚನೆ ಮಾಡಿರುವ ಆರೋಪದ ಮೇಲೆ ಮೆಹುಲ್ ಚೋಕ್ಸಿ ವಿರುದ್ಧ ಸಿಬಿಐ ಮತ್ತು ಇಡಿ ಪ್ರಕರಣ ದಾಖಲಿಸಿವೆ. ಈ ಪ್ರಕರಣದಲ್ಲಿ ಚೋಕ್ಸಿಯವರ ಸೋದರಳಿಯ ನೀರವ್ ಮೋದಿ ಕೂಡ ಆರೋಪಿಯಾಗಿದ್ದು, ಅವರು ಲಂಡನ್‌ನಲ್ಲಿ ತಲೆಮರೆಸಿಕೊಂಡಿದ್ದಾರೆ ಮತ್ತು ಅವರ ಹಸ್ತಾಂತರವೂ ನಿರೀಕ್ಷೆಯಲ್ಲಿದೆ.

ಮೆಹುಲ್ ಚೋಕ್ಸಿ 2018 ರ ಜನವರಿಯಲ್ಲಿ ತನ್ನ ಸೋದರಳಿಯ ನೀರವ್ ಮೋದಿ ಜೊತೆ ಭಾರತದಿಂದ ಪಲಾಯನ ಮಾಡಿದ್ದ. ಪಂಜಾಬ್ ನ್ಯಾಷನಲ್ ಬ್ಯಾಂಕಿನಲ್ಲಿನ ಸಾಲ ವಂಚನೆ ಪ್ರಕರಣ ಬೆಳಕಿಗೆ ಬರುವ ಮೊದಲೇ ಇಬ್ಬರೂ ದೇಶ ಬಿಟ್ಟು ಹೋಗಿದ್ದರು. ಇದು ಭಾರತದ ಎರಡನೇ ಅತಿದೊಡ್ಡ ಬ್ಯಾಂಕ್ ಹಗರಣವಾಗಿತ್ತು.

ಈ ವಿಷಯ ಬೆಳಕಿಗೆ ಬರುವ ಮೊದಲೇ ಚೋಕ್ಸಿ ಆಂಟಿಗುವಾದ ಪೌರತ್ವ ಪಡೆದಿದ್ದರು. 2021 ರಲ್ಲಿ, ಅವರು ಕ್ಯೂಬಾಗೆ ಹೋಗುತ್ತಿದ್ದಾಗ, ಡೊಮಿನಿಕಾದಲ್ಲಿ ಸಿಕ್ಕಿಬಿದ್ದರು. ಇದಾದ ನಂತರ, ರಾಜಕೀಯ ಪಿತೂರಿಯಿಂದಾಗಿ ಈ ಪ್ರಕರಣಗಳನ್ನು ತನ್ನ ವಿರುದ್ಧ ನಡೆಸಲಾಗುತ್ತಿದೆ ಎಂದು ಮೆಹುಲ್ ಹೇಳಿದ್ದರು. ಭಾರತದಲ್ಲಿರುವ ತನ್ನ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ ಅಕ್ರಮವಾಗಿ ಮುಟ್ಟುಗೋಲು ಹಾಕಿಕೊಂಡಿದೆ ಎಂದೂ ಅವರು ಹೇಳಿದ್ದರು.

ಸದ್ಯ ಚೋಕ್ಸಿ ಭಾರತದ ಪೌರತ್ವವನ್ನೂ ತ್ಯಜಿಸಿಲ್ಲ. ಒಂದು ವೇಳೆ ತಾತ್ಕಾಲಿಕವಾಗಿ ಪಡೆದಿರುವ ಬೆಲ್ಜಿಯಂ ಪೌರತ್ವವನ್ನು ಶಾಶ್ವತವಾಗಿ ಪರಿವರ್ತಿಸಿದ್ರೆ, ಮುಂದೆ ಆತ ಯುರೋಪಿಯನ್ ರಾಷ್ಟ್ರಗಳಲ್ಲಿ ಸ್ವತಂತ್ರವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟಂತಾಗುತ್ತದೆ. ಬಳಿಕ ಆತನನ್ನು ಕರೆತರಲು ಭಾರತಕ್ಕೆ ಕಷ್ಟವಾಗಬಹುದು ಎನ್ನಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:10 am, Mon, 14 April 25

‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್