Australia Earthquake: ಆಸ್ಟ್ರೇಲಿಯಾದ ಮೆಲ್ಬರ್ನ್​ನಲ್ಲಿ 6.0 ತೀವ್ರತೆಯ ಭೂಕಂಪ

Melbourne earthquake | ಅಮೆರಿಕದ ಜಿಯಾಲಾಜಿಕಲ್ ಸರ್ವೆ ಕಂಪನಿಯ ಮಾಹಿತಿ ಪ್ರಕಾರ, ಮೆಲ್ಬರ್ನ್​ನಲ್ಲಿ ರಿಕ್ಟರ್​ ಮಾಪಕದಲ್ಲಿ 6.0 ಮ್ಯಾಗ್ನಿಟ್ಯೂಡ್​ತೀವ್ರತೆಯ ಭೂಕಂಪ ದಾಖಲಾಗಿದೆ.

Australia Earthquake: ಆಸ್ಟ್ರೇಲಿಯಾದ ಮೆಲ್ಬರ್ನ್​ನಲ್ಲಿ 6.0 ತೀವ್ರತೆಯ ಭೂಕಂಪ
ಮೆಲ್ಬರ್ನ್​ನಲ್ಲಿ ಭೂಕಂಪ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Sep 22, 2021 | 2:03 PM

ಸಿಡ್ನಿ: ಆಸ್ಟ್ರೇಲಿಯಾದ ಮೆಲ್ಬರ್ನ್​ನಲ್ಲಿ (Melbourne Earthquake) ಇಂದು ಬೆಳಗ್ಗೆ ಭೂಕಂಪ ಉಂಟಾಗಿದ್ದು, ಕಟ್ಟಡದ ಗೋಡೆಗಳು ಮುರಿದು ಬಿದ್ದಿವೆ. ಜನರು ಗಾಬರಿಯಿಂದ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಸಾಕಷ್ಟು ದೂರದವರೆಗೆ ಭೂಕಂಪದ ಪರಿಣಾಮ ಉಂಟಾಗಿದೆ. ಆಸ್ಟ್ರೇಲಿಯದ ಎರಡನೇ ಅತಿ ದೊಡ್ಡ ನಗರವಾದ ಮೆಲ್ಬರ್ನ್​ನಲ್ಲಿ ಈ ಭೂಕಂಪ ಸಂಭವಿಸಿದ್ದು, ನೂರಾರು ಕಿ.ಮೀ. ದೂರದವರೆಗೂ ಈ ಭೂಕಂಪದ ಅನುಭವವಾಗಿದೆ.

ಅಮೆರಿಕದ ಜಿಯಾಲಾಜಿಕಲ್ ಸರ್ವೆ ಕಂಪನಿಯ ಮಾಹಿತಿ ಪ್ರಕಾರ, ಮೆಲ್ಬರ್ನ್​ನಲ್ಲಿ ರಿಕ್ಟರ್​ ಮಾಪಕದಲ್ಲಿ 6.0 ಮ್ಯಾಗ್ನಿಟ್ಯೂಡ್​ತೀವ್ರತೆಯ ಭೂಕಂಪ ದಾಖಲಾಗಿದೆ. ಸುಮಾರು 10 ಕಿ.ಮೀ. ಆಳದಲ್ಲಿ ಭೂಕಂಪ ಅಪ್ಪಳಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾನ್ಸ್​ಫೀಲ್ಡ್ ಮೇಯರ್ ಮಾರ್ಕ್ ಹೋಲ್ಕೊಂಬೆ, ಈ ಭೂಕಂಪದಿಂದ ಯಾವುದೇ ಹಾನಿಯಾದ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ ಎಂದಿದ್ದಾರೆ.

ಪ್ರಧಾನಮಂತ್ರಿ ಸ್ಕಾಟ್ ಮಾರಿಸನ್ ಕೂಡ ಭೂಕಂಪದಿಂದ ಯಾವುದೇ ಗಂಭೀರ ಅಪಾಯಗಳು ಸಂಭವಿಸಿಲ್ಲ ಎಂದು ಖಚಿತಪಡಿಸಿದ್ದಾರೆ. ಭೂಕಂಪದಿಂದ ಕಟ್ಟಡಗಳು ಅಲುಗಾಡಿದ್ದು, ಮನೆಗಳ ಕಿಟಕಿಗಳ ಗಾಜುಗಳು ಚೂರಾಗಿವೆ. ಈ ಭೂಕಂಪದಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಇದನ್ನೂ ಓದಿ: Narendra Modi: ದೆಹಲಿಯಿಂದ ವಿಶೇಷ ವಿಮಾನದಲ್ಲಿ ಅಮೆರಿಕ ಪ್ರವಾಸಕ್ಕೆ ತೆರಳಿದ ಪ್ರಧಾನಿ ನರೇಂದ್ರ ಮೋದಿ

Narendra Modi Birthday: ಬಾಳೆ ಎಲೆ ಮೇಲೆ ಪ್ರಧಾನಿ ಮೋದಿ ಚಿತ್ರ ಬಿಡಿಸಿ ಬರ್ತ್​​ಡೆ ವಿಶ್ ಮಾಡಿದ ಧಾರವಾಡದ ಕಲಾವಿದ

(Melbourne earthquake Magnitude 6.0 Rare earthquake causes some damage in Australia)

Published On - 1:33 pm, Wed, 22 September 21

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ