Mexico: ನಯಾರಿತ್‌ನಲ್ಲಿ ಭೀಕರ ಅಪಘಾತಕ್ಕೆ 15 ಮಂದಿ ದುರ್ಮರಣ, 47 ಮಂದಿಗೆ ಗಾಯ

ಮೆಕ್ಸಿಕೊದ ನಯಾರಿತ್​​ನಲ್ಲಿ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬಸ್ ಹೆದ್ದಾರಿಯಲ್ಲಿ ಪಲ್ಟಿಯಾದ ಪರಿಣಾಮ ಹದಿನೈದು ಜನರು ಸಾವನ್ನಪ್ಪಿದ್ದಾರೆ ಮತ್ತು 47 ಮಂದಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ

Mexico: ನಯಾರಿತ್‌ನಲ್ಲಿ ಭೀಕರ ಅಪಘಾತಕ್ಕೆ 15 ಮಂದಿ ದುರ್ಮರಣ, 47 ಮಂದಿಗೆ ಗಾಯ
ಮೆಕ್ಸಿಕೊದಲ್ಲಿ ಭೀಕರ ಅಪಘಾತ; ಸ್ಥಳ ಪರಿಶೀಲನೆ ನಡೆಸುತ್ತಿರುವ ಪೊಲೀಸರು
Follow us
TV9 Web
| Updated By: Rakesh Nayak Manchi

Updated on:Jan 02, 2023 | 7:01 AM

ಮೆಕ್ಸಿಕೋ ಸಿಟಿ: ಭೀಕರ ರಸ್ತೆ ಅಪಘಾತದಲ್ಲಿ (Road Accident in Mexico) 15 ಜನರು ಸಾವನ್ನಪ್ಪಿ 47 ಮಂದಿ ಗಾಯಗೊಂಡ ಘಟನೆ ಪೆಸಿಫಿಕ್ ಕರಾವಳಿ ರಾಜ್ಯವಾದ ನಯಾರಿತ್‌ (Nayarit)ನಲ್ಲಿ ನಡೆದಿದೆ. ರಜಾ ದಿನದ ಹಿನ್ನಲೆ ಜನರು ಬಸ್ ಮೂಲಕ ಪ್ರವಾಸ ಗೈಗೊಂಡಿದ್ದರು. ಈ ವೇಳೆ ಹೆದ್ದಾರಿಯಲ್ಲಿ ಬಸ್ ಪಲ್ಟಿಯಾಗಿ ಸಾವು-ನೋವು ಸಂಭವಿಸಿದೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎಲ್ಲಾ ಪ್ರಯಾಣಿಕರು ಆ ರಾಜ್ಯದ ಅದೇ ನಗರದ ಲಿಯಾನ್‌ನಿಂದ ಬಂದವರು ಎಂದು ಗ್ವಾನಾಜುವಾಟೊದ ಅಧಿಕಾರಿಗಳು ಹೇಳಿದರು.

ಗ್ರಾಮೀಣ ರಸ್ತೆಯಲ್ಲಿ ಶುಕ್ರವಾರ ಅಪಘಾತ ಸಂಭವಿಸಿದೆ ಎಂದು ನಯರಿತ್‌ನ ಪ್ರಾಸಿಕ್ಯೂಟರ್‌ಗಳು ತಿಳಿಸಿದ್ದಾರೆ. ಸತ್ತವರಲ್ಲಿ ಕನಿಷ್ಠ ನಾಲ್ಕು ಮಕ್ಕಳು ಸೇರಿದ್ದಾರೆ ಎಂದು ಅವರು ಹೇಳಿದರು. ಪೋರ್ಟೊ ವಲ್ಲರ್ಟಾದ ಉತ್ತರದ ಬೀಚ್ ಪಟ್ಟಣವಾದ ಗುಯಾಬಿಟೋಸ್‌ನಿಂದ ಪ್ರಯಾಣಿಕರು ಹಿಂತಿರುಗುತ್ತಿದ್ದರು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: ಕಾಬೂಲ್‌ನ ಸೇನಾ ವಿಮಾನ ನಿಲ್ದಾಣದ ಹೊರಗೆ ಸ್ಫೋಟ: 10 ಸಾವು

ಅಪಘಾತದ ಏನು ಕಾರಣ ಎಂದು ತನಿಖೆ ನಡೆಸಲಾಗುತ್ತಿದೆ. ಗಾಯಗೊಂಡವರಲ್ಲಿ 45 ಮಂದಿ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಗಾಯಾಳುಗಳ ಸ್ಥಿತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಬಾಡಿಗೆ ಬಸ್‌ಗಳ ಕಳಪೆ ನಿರ್ವಹಣೆ, ಕೆಟ್ಟ ಹವಾಮಾನ ಅಥವಾ ಹೆದ್ದಾರಿ ಪರಿಸ್ಥಿತಿಗಳು ಅಥವಾ ವೇಗದ ಚಾಲನೆಯಿಂದ ಇಂತಹ ಅಪಘಾತಗಳು ಈ ಹಿಂದೆಯೂ ನಡೆದಿವೆ.

ವಿದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:00 am, Mon, 2 January 23

ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ