Mexico Bus Accident: ಬಸ್​ ಕಂದಕಕ್ಕೆ ಬಿದ್ದು ಭಾರತೀಯರು ಸೇರಿ 18 ಮಂದಿ ಸಾವು, 20 ಜನರಿಗೆ ಗಂಭೀರ ಗಾಯ

ಮೆಕ್ಸಿಕೋದಲ್ಲಿ ಬಸ್​ ಕಂದಕಕ್ಕೆ ಬಿದ್ದು ಭಾರತೀಯರು ಸೇರಿದಂತೆ 18 ಮಂದಿ ಮೃತಪಟ್ಟಿದ್ದಾರೆ, 20 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್‌ನಲ್ಲಿ 42 ಪ್ರಯಾಣಿಕರಿದ್ದು, ಹೆಚ್ಚಿನವರು ವಿದೇಶಿಗರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Mexico Bus Accident: ಬಸ್​ ಕಂದಕಕ್ಕೆ ಬಿದ್ದು ಭಾರತೀಯರು ಸೇರಿ 18 ಮಂದಿ ಸಾವು, 20 ಜನರಿಗೆ ಗಂಭೀರ ಗಾಯ
ಬಸ್ ಅಪಘಾತ

Updated on: Aug 04, 2023 | 12:33 PM

ಮೆಕ್ಸಿಕೋದಲ್ಲಿ ಬಸ್​ ಕಂದಕಕ್ಕೆ ಬಿದ್ದು ಭಾರತೀಯರು ಸೇರಿದಂತೆ 18 ಮಂದಿ ಮೃತಪಟ್ಟಿದ್ದಾರೆ, 20 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್‌ನಲ್ಲಿ 42 ಪ್ರಯಾಣಿಕರಿದ್ದು, ಹೆಚ್ಚಿನವರು ವಿದೇಶಿಗರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಸ್ ಹತ್ತಿದ ವಿದೇಶಿ ಪ್ರಯಾಣಿಕರಲ್ಲಿ ಭಾರತ, ಡೊಮಿನಿಕನ್ ರಿಪಬ್ಲಿಕ್ ಮತ್ತು ಆಫ್ರಿಕನ್ ದೇಶಗಳ ನಾಗರಿಕರು ಇದ್ದರು. ಅವರಲ್ಲಿ ಕೆಲವರು ಅಮೆರಿಕದ ಗಡಿಯ ಕಡೆಗೆ ಹೋಗುತ್ತಿದ್ದರು.

ಅಪಘಾತಕ್ಕೀಡಾದ ಬಸ್‌ನಿಂದ ಜನರನ್ನು ಹೊರತೆಗೆಯಲು ಹರಸಾಹಸಪಡಲಾಗುತ್ತಿದೆ. ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ರಾಜ್ಯ ಸಾರ್ವಜನಿಕ ಭದ್ರತಾ ಸಂಸ್ಥೆ ತಿಳಿಸಿದೆ.

ಘಟನೆಯಲ್ಲಿ ಸುಮಾರು 21 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಸಂಸ್ಥೆ ತನ್ನ ಫೇಸ್‌ಬುಕ್ ಪುಟದಲ್ಲಿ ಪೋಸ್ಟ್ ಮಾಡಲಾಗಿದೆ. ಗಾಯಗೊಂಡವರಲ್ಲಿ ಮಹಿಳೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.

ಮತ್ತಷ್ಟು ಓದಿ: Shivamogga News: ವಿದ್ಯುತ್ ಕಂಬಕ್ಕೆ ಖಾಸಗಿ ಬಸ್ ಡಿಕ್ಕಿ, 34ಕ್ಕೂ ಹೆಚ್ಚು ಪ್ರಯಾಣಿಕರಿಗೆ ಕರೆಂಟ್​ ಶಾಕ್

ರಾಜ್ಯ ರಾಜಧಾನಿ ಟೆಪಿಕ್ ಬಳಿ ಅಪಘಾತ ಸಂಭವಿಸಿದೆ. ಬಸ್ ಮೆಕ್ಸಿಕೋ ಸಿಟಿಯಿಂದ ಹೊರಟು ಗಡಿ ನಗರವಾದ ಟಿಜುವಾನಾಗೆ ಹೋಗುತ್ತಿತ್ತು ಎಂದು ಸ್ಥಳೀಯ ಮಾಧ್ಯಮ ವರದಿಗಳು ತಿಳಿಸಿವೆ.

ಬಸ್ ಚಾಲಕನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ನಯರಿತ್ ರಾಜ್ಯ ಸರ್ಕಾರ ತಿಳಿಸಿದೆ. ರಸ್ತೆಯ ತಿರುವಿನಲ್ಲಿ ಅತಿವೇಗದಲ್ಲಿ ವಾಹನ ಚಲಾಯಿಸಿದ್ದು ಅಪಘಾತಕ್ಕೆ ಕಾರಣ ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ