AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mexico Ram Mandir: ಅಯೋಧ್ಯೆಗೂ ಮುನ್ನ ಮೆಕ್ಸಿಕೋದಲ್ಲಿ ನಡೆಯಿತು ಮೊದಲ ರಾಮ ಮಂದಿರದ ಪ್ರಾಣ ಪ್ರತಿಷ್ಠೆ

ಮೆಕ್ಸಿಕೋ(Mexico)ದಲ್ಲಿ ದೇಶದ ಮೊದಲ ರಾಮ ಮಂದಿರ(Ram Mandir)ವನ್ನು ನಿರ್ಮಿಸಲಾಗಿದ್ದು, ಅಯೋಧ್ಯೆಗೂ ಮುನ್ನ ರಾಮನ ಪ್ರತಿಷ್ಠಾಪನೆ ಕಾರ್ಯಕ್ರಮಗಳು ನೆರವೇರಿವೆ. ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠೆಗೆ ಸಿದ್ಧತೆಗಳು ಪೂರ್ಣಗೊಂಡಿವೆ. ಪ್ರಪಂಚದಾದ್ಯಂತ ಹಲವು ದೇಶಗಳು ಕೂಡ ಈ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಮೇರಿಕ, ಮೆಕ್ಸಿಕೋ, ಕೆನಡಾ ಮತ್ತು ಆಸ್ಟ್ರೇಲಿಯಾದ ದೇವಾಲಯಗಳಲ್ಲಿಯೂ ಸುಂದರಕಾಂಡ, ರಾಮಚರಿತಮಾನಗಳನ್ನು ಪಠಿಸಲಾಗುತ್ತಿದೆ.

Mexico Ram Mandir: ಅಯೋಧ್ಯೆಗೂ ಮುನ್ನ ಮೆಕ್ಸಿಕೋದಲ್ಲಿ ನಡೆಯಿತು ಮೊದಲ ರಾಮ ಮಂದಿರದ ಪ್ರಾಣ ಪ್ರತಿಷ್ಠೆ
ರಾಮ ಮಂದಿರImage Credit source: Amarujala.com
ನಯನಾ ರಾಜೀವ್
|

Updated on: Jan 22, 2024 | 11:03 AM

Share

ಮೆಕ್ಸಿಕೋ(Mexico)ದಲ್ಲಿ ದೇಶದ ಮೊದಲ ರಾಮ ಮಂದಿರ(Ram Mandir)ವನ್ನು ನಿರ್ಮಿಸಲಾಗಿದ್ದು, ಅಯೋಧ್ಯೆಗೂ ಮುನ್ನ ರಾಮನ ಪ್ರತಿಷ್ಠಾಪನೆ ಕಾರ್ಯಕ್ರಮಗಳು ನೆರವೇರಿವೆ. ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠೆಗೆ ಸಿದ್ಧತೆಗಳು ಪೂರ್ಣಗೊಂಡಿವೆ. ಪ್ರಪಂಚದಾದ್ಯಂತ ಹಲವು ದೇಶಗಳು ಕೂಡ ಈ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಮೇರಿಕ, ಮೆಕ್ಸಿಕೋ, ಕೆನಡಾ ಮತ್ತು ಆಸ್ಟ್ರೇಲಿಯಾದ ದೇವಾಲಯಗಳಲ್ಲಿಯೂ ಸುಂದರಕಾಂಡ, ರಾಮಚರಿತಮಾನಗಳನ್ನು ಪಠಿಸಲಾಗುತ್ತಿದೆ.

ಮೆಕ್ಸಿಕೋದಲ್ಲಿ ನಿರ್ಮಿಸಲಾದ ದೇವಾಲಯದಲ್ಲಿ ಭಾರತದಿಂದ ತಂದ ವಿಗ್ರಹಗಳನ್ನು ಪ್ರತಿಷ್ಠಾಪನೆ ಮಾಡಲಾಗಿದೆ.ಈ ಅವಧಿಯಲ್ಲಿ ಅನಿವಾಸಿ ಭಾರತೀಯರಿಂದ ಭಜನೆ, ಕೀರ್ತನೆ ಮತ್ತು ಶಾಸ್ತ್ರೀಯ ಸಂಗೀತವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯ ಸಮುದಾಯ ಹಾಗೂ ಮೆಕ್ಸಿಕೋ ನಾಗರಿಕರು ಭಾಗವಹಿಸಿದ್ದರು.

ಮೆಕ್ಸಿಕೋದಲ್ಲಿನ ಭಾರತೀಯ ರಾಯಭಾರ ಕಚೇರಿಯು ಮೆಕ್ಸಿಕೋದಲ್ಲಿ ಮೊದಲ ರಾಮ ಮಂದಿರ ಎಂದು ಪೋಸ್ಟ್ ಅನ್ನು ಹಂಚಿಕೊಂಡಿದೆ.

ಮತ್ತಷ್ಟು ಓದಿ: Ram Mandir Inauguration: ಜನವರಿ 22ನ್ನು ಅಯೋಧ್ಯೆ ರಾಮ ಮಂದಿರ ದಿನವನ್ನಾಗಿ ಘೋಷಿಸಿದ ಕೆನಡಾ

ಈ ನಡುವೆ ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೆಚ್ಚಿನ ಸಂಖ್ಯೆಯಲ್ಲಿ ಜನರು ದೇವಸ್ಥಾನದ ಆವರಣದಲ್ಲಿ ಸೇರಿದ್ದರು. ಅಯೋಧ್ಯೆಯ ಬೀದಿಗಳಲ್ಲಿ ಜೈ ಶ್ರೀರಾಮ್ ಘೋಷಣೆಗಳು ಜೋರಾಗಿ ಮೊಳಗುತ್ತಿವೆ.

ಅಯೋಧ್ಯೆಯ ಅನೇಕ ಸ್ಥಳಗಳಲ್ಲಿ ಸುಂದರಕಾಂಡ ಮತ್ತು ರಾಮಚರಿತಮಾನಗಳನ್ನು ಪಠಿಸಲಾಗುತ್ತಿದೆ. ಈ ವಿಶೇಷ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ‘ಮಂಗಲಧ್ವನಿ’ ಸಂಗೀತ ಕಾರ್ಯಕ್ರಮದೊಂದಿಗೆ ಪ್ರಾಣ ಪ್ರತಿಷ್ಠಾ ಸಮಾರಂಭ ಆರಂಭವಾಗಲಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಭಾನುವಾರ ಪ್ರಕಟಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು