AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವು ತಲೆ ಬಾಗುವುದಿಲ್ಲ, ಟ್ರಂಪ್ ಶಾಂತಿ ಪ್ರಸ್ತಾಪಕ್ಕೆ ಕಠಿಣ ಷರತ್ತುಗಳ ವಿಧಿಸಿದ ಇರಾನ್

ಅಮೆರಿಕದ ಡೊನಾಲ್ಡ್ ಟ್ರಂಪ್ ಅವರ ಶಾಂತಿ ಪ್ರಸ್ತಾಪಕ್ಕೆ ಇರಾನ್ ಕಠಿಣ ಷರತ್ತುಗಳನ್ನು ವಿಧಿಸಿದೆ. ಗಲ್ಫ್‌ನಿಂದ ಅಮೆರಿಕದ ಮಿಲಿಟರಿ ನೆಲೆಗಳನ್ನು ಮುಚ್ಚುವುದು, ಎಲ್ಲಾ ಅಂತರರಾಷ್ಟ್ರೀಯ ನಿರ್ಬಂಧಗಳನ್ನು ತೆಗೆದುಹಾಕುವುದು ಮತ್ತು ಯುದ್ಧ ಪರಿಹಾರವನ್ನು ಪಾವತಿಸುವುದು ಇವುಗಳಲ್ಲಿ ಪ್ರಮುಖವಾಗಿವೆ. ಯಾವುದೇ ಒತ್ತಡಕ್ಕೆ ಮಣಿಯದೆ, ತನ್ನ ಕ್ಷಿಪಣಿ ಕಾರ್ಯಕ್ರಮವನ್ನು ಮುಂದುವರಿಸಲು ಇರಾನ್ ಬದ್ಧವಾಗಿದೆ ಎಂದು ಸ್ಪಷ್ಟಪಡಿಸಿದೆ. ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪನೆಗೆ ಅಮೆರಿಕ ಮೊದಲು ಈ ಬೇಡಿಕೆಗಳನ್ನು ಪೂರೈಸಬೇಕೆಂದು ಇರಾನ್ ಒತ್ತಾಯಿಸಿದೆ.

ನಾವು ತಲೆ ಬಾಗುವುದಿಲ್ಲ, ಟ್ರಂಪ್ ಶಾಂತಿ ಪ್ರಸ್ತಾಪಕ್ಕೆ ಕಠಿಣ ಷರತ್ತುಗಳ ವಿಧಿಸಿದ ಇರಾನ್
ಡೊನಾಲ್ಡ್​ ಟ್ರಂಪ್ Image Credit source: Aljazeera
ನಯನಾ ರಾಜೀವ್
| Edited By: |

Updated on:Jul 03, 2026 | 1:03 PM

Share

ಟೆಹ್ರಾನ್, ಮಾರ್ಚ್​ 25: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಮಧ್ಯೆ ಸಂಭಾವ್ಯ ಕದನ ವಿರಾಮಕ್ಕೆ ಇರಾನ್ (Iran) ಹೆಚ್ಚಿನ ಮತ್ತು ಕಠಿಣ ಷರತ್ತುಗಳನ್ನು ವಿಧಿಸಿದೆ. ಡೊನಾಲ್ಡ್ ಟ್ರಂಪ್ ಅವರ ಹೊಸ ಮಾತುಕತೆಗಳ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿ, ಗಲ್ಫ್‌ನಲ್ಲಿನ ಅಮೆರಿಕದ ಮಿಲಿಟರಿ ನೆಲೆಗಳನ್ನು ಮುಚ್ಚುವುದರಿಂದ ಹಿಡಿದು ನಿರ್ಬಂಧಗಳನ್ನು ತೆಗೆದುಹಾಕುವುದು ಮತ್ತು ಪ್ರಮುಖ ಹಡಗು ಮಾರ್ಗದ ಮೇಲೆ ನಿಯಂತ್ರಣ ಸಾಧಿಸುವವರೆಗೆ ಇರಾನ್ ವ್ಯಾಪಕ ಬೇಡಿಕೆಗಳನ್ನು ಮುಂದಿಟ್ಟಿದೆ.

ಅಮೆರಿಕ ಮತ್ತು ಇಸ್ರೇಲ್ ಜತೆಗಿನ ನೇರ ಮುಖಾಮುಖಿ ಸಂದರ್ಭದಲ್ಲಿ ಯಾವುದೇ ಒತ್ತಡಕ್ಕೆ ತಾನು ಮಣಿಯುವುದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಅಮೆರಿಕ ಸಿದ್ಧಪಡಿಸಿದ ಶಾಂತಿ ಪ್ರಸ್ತಾವನೆಯನ್ನು ಇರಾನ್​ಗೆ ಕಳುಹಿಸಲಾಗಿದೆ, ಇರಾನ್‌ನ ಸೇನೆಯು ಅಮೆರಿಕ ನಿರ್ಧಾರಗಳನ್ನು ಸಾರ್ವಜನಿಕವಾಗಿ ಅಪಹಾಸ್ಯ ಮಾಡಿದ್ದರಿಂದ, ಪಶ್ಚಿಮ ಏಷ್ಯಾದಲ್ಲಿ ತೀವ್ರ ಮಾತಿನ ಸಮರ ಭುಗಿಲೆದ್ದಿದೆ.

ಇರಾನ್‌ನ ಸಶಸ್ತ್ರ ಪಡೆಗಳ ಏಕೀಕೃತ ಕಮಾಂಡ್ ಆಗಿರುವ ಖತಮ್ ಅಲ್-ಅನ್ಬಿಯಾ ಕೇಂದ್ರ ಪ್ರಧಾನ ಕಚೇರಿಯ ವಕ್ತಾರ ಇಬ್ರಾಹಿಂ ಝೋಲ್ಫಾಕರಿ, ಅಮೆರಿಕವನ್ನು ಅಪಹಾಸ್ಯ ಮಾಡಿದ್ದರು. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಇರಾನ್ ಒಪ್ಪಂದವನ್ನು ಬಯಸುತ್ತಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ ಒಂದು ದಿನದ ನಂತರ ಅವರ ಹೇಳಿಕೆಗಳು ಬಂದಿವೆ.

ಮತ್ತಷ್ಟು ಓದಿ: ಇಂಧನದ ಬೆಲೆ ಕಡಿಮೆ ಮಾಡುವ ಪ್ಲಾನ್; ಟ್ರಂಪ್ ಜೊತೆ ಯಾವ ಮಾತುಕತೆಯೂ ನಡೆದಿಲ್ಲ ಎಂದ ಇರಾನ್

ಇರಾನ್ ಬೇಡಿಕೆಗಳೇನು?

ಇರಾನ್​ನ ಮೊದಲ ಬೇಡಿಕೆ ಎಂದರೆ ಅಮೆರಿಕ ಮತ್ತು ಇಸ್ರೇಲ್ ತನ್ನ ಮಿಲಿಟರಿ ನೆಲೆಗಳು, ಇಂಧನ ಮೂಲಸೌಕರ್ಯ ಮತ್ತು ಪರಮಾಣು ಸ್ಥಾವರಗಳ ಮೇಲಿನ ಎಲ್ಲಾ ವಾಯು ಮತ್ತು ಕ್ಷಿಪಣಿದಾಳಿಗಳನ್ನು ತಕ್ಷಣವೇ ನಿಲ್ಲಿಸಬೇಕು. ಇಸ್ರೇಲ್ ಮತ್ತು ಅಮೆರಿಕವು ತಮ್ಮ ಉಳಿದ ಉನ್ನತ ನಾಯಕರನ್ನು ಗುರಿಯಾಗಿಸಬಾರದು. ಹಾಗಾಗಿ ಮಾತುಕತೆಗೆ ಬರುವ ಮುನ್ನ ತಮ್ಮ ನಾಯಕರ ಸುರಕ್ಷತೆ ಬಗ್ಗೆ ಖಾತ್ರಿ ಬಯಸುತ್ತಿದ್ದಾರೆ.

ಗಲ್ಫ್​ ರಾಷ್ಟ್ರಗಳಲ್ಲಿನ ಸೇನಾ ನೆಲೆಗಳನ್ನು ಮುಚ್ಚಬೇಕು, ಯುದ್ಧ ಪರಿಹಾರವನ್ನು ಪಾವತಿಸಬೇಕು, ಇರಾನ್ ಮೇಲಿನ ಎಲ್ಲಾ ಅಂತಾರಾಷ್ಟ್ರೀಯ ಮತ್ತು ಯುಎಸ್ ನಿರ್ಬಂಧಗಳನ್ನು ಸಂಪೂರ್ಣವಾಗಿ ತೆಗೆದುಹಾಕಬೇಕು. ಇರಾನ್ ತನ್ನ ಕ್ಷಿಪಣಿ ಕಾರ್ಯಗಳನ್ನು ಯಾವುದೇ ನಿರ್ಬಂಧಗಳಿಲ್ಲದೆ ಮುಂದುವರೆಸಲು ಅವಕಾಶ ನೀಡಬೇಕು ಎಂದು ಇರಾನ್ ಕೇಳಿದೆ.

ಯುದ್ಧ ಮತ್ತು ನಿರಂತರ ನಿರ್ಬಂಧಗಳಿಂದಾಗಿ ಇರಾನ್ ಆರ್ಥಿಕತೆಯು ಒತ್ತಡದಲ್ಲಿದೆ. ಯಾವುದೇ ಒಪ್ಪಂದದ ಭಾಗವಾಗಿ ತನ್ನ ತೈಲರಫ್ತು ಮತ್ತು ಇಂಧನಗಳ ಮೇಲೆ ವಿಧಿಸಿರುವ ನಿರ್ಬಂಧಗಳನ್ನು ತೆಗೆದುಹಾಕಬೇಕು ಎಂದು ಹೇಳಿದೆ.

ಇತ್ತೀಚೆಗಷ್ಟೇ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಮಾತನಾಡಿ, ಇರಾನ್ ಎಂದಿಗೂ ಕದನವಿರಾಮಕ್ಕಾಗಿ ಅಮೆರಿಕವನ್ನು ಬೇಡಿಕೊಂಡಿಲ್ಲ, ತನ್ನನ್ನು ತಾನು ರಕ್ಷಿಸಿಕೊಳ್ಳಲು ಅಗತ್ಯವಿರುವಷ್ಟು ಕಾಲ ಹೋರಾಡಲು ಸಿದ್ಧವಾಗಿದೆ ಎಂದು ಸ್ಪಷ್ಟಪಡಿಸಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:23 pm, Wed, 25 March 26

Follow Us
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ
ಅಯೋಧ್ಯೆ ರಾಮಮಂದಿರ ದೇಣಿಗೆ ಲೆಕ್ಕ ಬಹಿರಂಗ
ಅಯೋಧ್ಯೆ ರಾಮಮಂದಿರ ದೇಣಿಗೆ ಲೆಕ್ಕ ಬಹಿರಂಗ