AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರೀಸ್​ ರಾಜಧಾನಿ ಅಥೆನ್ಸ್​ನಲ್ಲಿ ಮಹಾತ್ಮ ಗಾಂಧಿ ಪುತ್ಥಳಿ ಅನಾವರಣ ಮಾಡಿದ ಸಚಿವ ಜೈಶಂಕರ್​; ಗ್ರೀಕ್​ ಸಚಿವ ನಿಕೋಸ್​ ಡೆಂಡಿಯಾಸ್ ಭಾಗಿ

ಇನ್ನು ಎಸ್​.ಜೈಶಂಕರ್​ ಅವರ ಗ್ರೀಸ್ ಪ್ರವಾಸದ ವೇಳೆ ಎರಡೂ ದೇಶಗಳು ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿವೆ. ಮುಖ್ಯವಾಗಿ ಪೂರ್ವ ಮೆಡಿಟರೇನಿಯನ್, ಸೈಪ್ರಸ್ ಮತ್ತು ಲಿಬಿಯಾದ ಇತ್ತೀಚೆಗಿನ ಬೆಳವಣಿಗೆ ಕುರಿತು ವ್ಯಾಪಕ ಚರ್ಚೆ ನಡೆದಿದೆ.

ಗ್ರೀಸ್​ ರಾಜಧಾನಿ ಅಥೆನ್ಸ್​ನಲ್ಲಿ ಮಹಾತ್ಮ ಗಾಂಧಿ ಪುತ್ಥಳಿ ಅನಾವರಣ ಮಾಡಿದ ಸಚಿವ ಜೈಶಂಕರ್​; ಗ್ರೀಕ್​ ಸಚಿವ ನಿಕೋಸ್​ ಡೆಂಡಿಯಾಸ್ ಭಾಗಿ
ಅಥೆನ್ಸ್​ನಲ್ಲಿ ಗಾಂಧಿ ಪ್ರತಿಮೆ ಅನಾವರಣ
Lakshmi Hegde
|

Updated on: Jun 28, 2021 | 10:45 AM

Share

ಗ್ರೀಸ್​ ದೇಶದ ರಾಜಧಾನಿ ಅಥೆನ್ಸ್​​ನಲ್ಲಿ ಮಹಾತ್ಮ ಗಾಂಧೀಜಿಯವರ ಪುತ್ಥಳಿಯನ್ನು ಅನಾವರಣಗೊಳಿಸಲಾಗಿದೆ. ಗ್ರೀಸ್​ಗೆ ಭೇಟಿ ನೀಡಿದ್ದ ಭಾರತದ ವಿದೇಶಾಂಗ ವ್ಯವಹಾರಗಳ ಇಲಾಖೆ ಸಚಿವ ಎಸ್​.ಜೈಶಂಕರ್​ ಮತ್ತು ಗ್ರೀಸ್​ ದೇಶದ ವಿದೇಶಾಂಗ ವ್ಯವಹಾರಗಳ ಸಚಿವ ನಿಕೋಸ್​ ಡೆಂಡಿಯಾಸ್​ ಜತೆಗೂಡಿ ಈ ಪ್ರತಿಮೆಯನ್ನು ಅನಾವರಣಗೊಳಿಸಿದ್ದಾರೆ. ಈ ಸಮಯದಲ್ಲಿ ಅಥೆನ್ಸ್​​ನ ಮೇಯರ್​ ಕೂಡ ಹಾಜರಿದ್ದರು. ಕಾರ್ಯಕ್ರಮದ ಬಳಿಕ ಟ್ವಿಟರ್​ನಲ್ಲಿ ಫೋಟೋ ಶೇರ್​ ಮಾಡಿದ ಎಸ್​. ಜೈಶಂಕರ್​ ಅವರು, ಮಹಾತ್ಮ ಗಾಂಧೀಜಿಯವರ ಸಂದೇಶದ ಸಾರ್ವತ್ರಿಕತೆಯನ್ನು ವಿಶ್ವದ ಎಲ್ಲೆಡೆ ಗುರುತಿಸಲಾಗಿದೆ. ಎಷ್ಟೇ ಕಾಲವಾದರೂ ಅದು ಸದಾ ಹಸಿರಾಗಿರುತ್ತದೆ ಎಂದು ಹೇಳಿದ್ದಾರೆ.

ಇನ್ನು ಎಸ್​.ಜೈಶಂಕರ್​ ಅವರ ಗ್ರೀಸ್ ಪ್ರವಾಸದ ವೇಳೆ ಎರಡೂ ದೇಶಗಳು ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿವೆ. ಮುಖ್ಯವಾಗಿ ಪೂರ್ವ ಮೆಡಿಟರೇನಿಯನ್, ಸೈಪ್ರಸ್ ಮತ್ತು ಲಿಬಿಯಾದ ಇತ್ತೀಚೆಗಿನ ಬೆಳವಣಿಗೆ ಕುರಿತು ವ್ಯಾಪಕ ಚರ್ಚೆ ನಡೆದಿದೆ. ಗ್ರೀಕ್​ನ ವಿದೇಶಾಂಗ ವ್ಯವಹಾರಗಳ ಮಂತ್ರಿ ನಿಕೋಸ್, ಅಂತಾರಾಷ್ಟ್ರೀಯ ಸೌರ ಒಕ್ಕೂಟದ ಒಪ್ಪಂದಕ್ಕೆ ಸಹಿ ಹಾಕಿ ಭಾರತಕ್ಕೆ ಹಸ್ತಾಂತರಿಸಿದ್ದಾರೆ. ಹಾಗೇ, ಎರಡೂ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಸಂಬಂಧ ಅಭಿವೃದ್ಧಿ ಬಗ್ಗೆ ಸಮಗ್ರ ಮತ್ತು ವ್ಯಾಪಕ ಚರ್ಚೆ ನಡೆದಿದೆ.

ಕಳೆದ 18ವರ್ಷಗಳಲ್ಲಿ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವರೊಬ್ಬರು ಗ್ರೀಸ್​ ದೇಶಕ್ಕೆ ಭೇಟಿ ಕೊಡುತ್ತಿರುವುದು ಇದೇ ಮೊದಲಬಾರಿಯಾಗಿದೆ. ಇಂಡೋ ಪೆಸಿಫಿಕ್, ಭಯೋತ್ಪಾದನಾ ನಿಗ್ರಹ, ಯುಎನ್ ಸುಧಾರಣೆಗಳ ಬಗ್ಗೆ ಎರಡೂ ದೇಶಗಳ ಸಚಿವರು ಮಾತುಕತೆಯಾಡಿದ್ದಾರೆ. ಎರಡೂ ದೇಶಗಳ ನಡುವಿನ ಸ್ನೇಹವನ್ನು ಇನ್ನಷ್ಟು ವೃದ್ಧಿಸುವ ನಿಟ್ಟಿನಲ್ಲಿ ಹಲವು ವಿಚಾರಗಳ ವಿನಿಮಯ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಆಯುರ್ವೇದದ ಪ್ರಕಾರ ಬೆಳಗ್ಗೆ ಬೇಗ ಏಳಲು ಒಳ್ಳೆಯ ಸಮಯ ಯಾವುದು?

(Minister S Jaishankar along with Greek Minister Nikos Dendias unveiled a Mahatma Gandhi statue in Athens)

Follow Us
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ