AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಗ್ಲಾದೇಶದಲ್ಲಿ 18 ದಿನಗಳಲ್ಲಿ 6 ಹಿಂದೂಗಳ ಹತ್ಯೆ

ಬಾಂಗ್ಲಾದೇಶದಲ್ಲಿ ಹಿಂದೂ ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರ ತೀವ್ರಗೊಂಡಿದೆ. 24 ಗಂಟೆಯೊಳಗೆ ಇಬ್ಬರು ಹಿಂದೂಗಳನ್ನು ಹತ್ಯೆ ಮಾಡಲಾಗಿದ್ದು, ಇದು 18 ದಿನಗಳಲ್ಲಿ ನಡೆದ 6ನೇ ಘಟನೆಯಾಗಿದೆ. ಸರ್ಕಾರ ಅಲ್ಪಸಂಖ್ಯಾತರ ರಕ್ಷಣೆಯಲ್ಲಿ ವಿಫಲವಾಗಿದೆ ಎಂದು ಆರೋಪಿಸಲಾಗಿದೆ. ಭಾರತ ಮತ್ತು ಅಂತಾರಾಷ್ಟ್ರೀಯ ಸಂಘಟನೆಗಳು ಈ ಘಟನೆಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿವೆ, ದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆ ಮತ್ತು ಕಾನೂನು ಸುವ್ಯವಸ್ಥೆಯ ಅವನತಿಯನ್ನು ಖಂಡಿಸಿವೆ

ಬಾಂಗ್ಲಾದೇಶದಲ್ಲಿ 18 ದಿನಗಳಲ್ಲಿ 6 ಹಿಂದೂಗಳ ಹತ್ಯೆ
ಮೋನಿImage Credit source: NDTV
ನಯನಾ ರಾಜೀವ್
|

Updated on:Jan 06, 2026 | 10:48 AM

Share

ಬಾಂಗ್ಲಾದೇಶ, ಜನವರಿ 06: ಬಾಂಗ್ಲಾದೇಶ(Bangladesh)ದಲ್ಲಿ ಹಿಂದೂ ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಘಟನೆಗಳು ನಿರಂತರವಾಗಿ ನಡೆಯುತ್ತಿವೆ. ಕಳೆದ 24 ಗಂಟೆಗಳಲ್ಲಿ ಇಬ್ಬರು ಹಿಂದೂ ಯುವಕರನ್ನು ಹತ್ಯೆ ಮಾಡಲಾಗಿದೆ. 18 ದಿನಗಳಲ್ಲಿ ಆರು ಹಿಂದೂಗಳ ಹತ್ಯೆ ನಡೆದಿದೆ.  ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ನರಸಿಂಗ್ಡಿ ಜಿಲ್ಲೆಯ ಪಲಾಶ್ ಉಪಜಿಲ್ಲಾದ ಚೋರ್ಸಿಂದೂರ್ ಬಜಾರ್‌ನಲ್ಲಿ ದಿನಸಿ ಅಂಗಡಿ ಮಾಲೀಕ ಶರತ್ ಚಕ್ರವರ್ತಿ ಮೋನಿ ಮೇಲೆ ದುಷ್ಕರ್ಮಿಗಳು ಹರಿತವಾದ ಆಯುಧದಿಂದ ಹಲ್ಲೆ ನಡೆಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ಮೋನಿಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ದಾಳಿ ಹಠಾತ್ತನೆ ನಡೆದಿದ್ದು, ದಾಳಿಕೋರರು ಕೂಡಲೇ ಪರಾರಿಯಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ರಾಜಧಾನಿ ಢಾಕಾಗೆ ಸಮೀಪದಲ್ಲಿರುವ ಈ ಘಟನೆ ಇನ್ನಷ್ಟು ಆಘಾತಕಾರಿಯಾಗಿದೆ.

ಈ ಕೊಲೆ 18 ದಿನಗಳಲ್ಲಿ ನಡೆದ ಆರನೇ ಹಿಂದೂ ವ್ಯಕ್ತಿಯ ಕೊಲೆಯಾಗಿದೆ. ಇದಕ್ಕೂ ಕೆಲವು ಗಂಟೆಗಳ ಮೊದಲು, ಸೋಮವಾರ ಸಂಜೆ 6 ಗಂಟೆ ಸುಮಾರಿಗೆ, ಜಶೋರ್ ಜಿಲ್ಲೆಯ ಮಣಿರಾಂಪುರ ಉಪಜಿಲ್ಲಾದ ಕೊಪಾಲಿಯಾ ಬಜಾರ್‌ನಲ್ಲಿ 45 ವರ್ಷದ ರಾಣಾ ಪ್ರತಾಪ್ ಬೈರಾಗಿ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು. ರಾಣಾ ಪ್ರತಾಪ್ ಐಸ್ ಕಾರ್ಖಾನೆಯನ್ನು ಹೊಂದಿದ್ದರು ಮತ್ತು ನರೈಲ್ ಜಿಲ್ಲೆಯಿಂದ ಪ್ರಕಟವಾಗುವ ದಿನಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರೂ ಆಗಿದ್ದರು.

ಮತ್ತಷ್ಟು ಓದಿ: ಬಾಂಗ್ಲಾದೇಶದಲ್ಲಿ ಮತ್ತೋರ್ವ ಹಿಂದೂ ಹತ್ಯೆ; 3 ವಾರಗಳಲ್ಲಿ ಅಲ್ಪಸಂಖ್ಯಾತರ ಮೇಲೆ 5ನೇ ದಾಳಿ

ಸ್ಥಳೀಯ ನಿವಾಸಿಗಳ ಪ್ರಕಾರ, ಕೆಲವು ಪುರುಷರು  ಬೈಕ್​ನಲ್ಲಿ ಬಂದು ಅವರನ್ನು ಕಾರ್ಖಾನೆಯಿಂದ ಹೊರಗೆಳೆದು, ಒಂದು ಗಲ್ಲಿಗೆ ಕರೆದೊಯ್ದು ಅವರ ತಲೆಗೆ ಹಲವು ಬಾರಿ ಗುಂಡು ಹಾರಿಸಿದ್ದರು. ಅಷ್ಟೇ ಅಲ್ಲದೆ ಕುತ್ತಿಗೆ ಕೊಯ್ದು ಪರಾರಿಯಾಗಿದ್ದರು. ಪೊಲೀಸರು ದೇಹದಿಂದ ಏಳು ಖಾಲಿ ಕಾರ್ಟ್ರಿಡ್ಜ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ರಾಣಾ ಪ್ರತಾಪ್ ಅವರ ತಲೆಗೆ ಮೂರು ಗುಂಡುಗಳು ತಗುಲಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ.

ಈ ಘಟನೆಗಳು ಬಾಂಗ್ಲಾದೇಶದಲ್ಲಿ ಕೋಮು ಉದ್ವಿಗ್ನತೆಯನ್ನು ಹೆಚ್ಚಿಸಿವೆ ಮತ್ತು ಹಿಂದೂ ಸಮುದಾಯದಲ್ಲಿ ಭೀತಿಯ ವಾತಾವರಣವನ್ನು ಸೃಷ್ಟಿಸಿವೆ. ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ಅಲ್ಲಿ ನಡೆದ ಅಶಾಂತಿಯ ಬಳಿಕ ಬಾಂಗ್ಲಾದೇಶದಲ್ಲಿ ನಡೆದ 6ನೇ ಘಟನೆ ಇದಾಗಿದೆ.ಹಾದಿ ಅವರ ಮರಣದ ನಂತರ, ಭಾರತ ವಿರೋಧಿ ಪ್ರತಿಭಟನೆಗಳು ಹಿಂದೂ ಸಮುದಾಯವನ್ನು ಗುರಿಯಾಗಿಸಿಕೊಂಡು ಕೋಮುವಾದಿ ತಿರುವು ಪಡೆದುಕೊಂಡವು.

ಮಧ್ಯಂತರ ಸರ್ಕಾರದ ಮುಖ್ಯಸ್ಥ ಮುಹಮ್ಮದ್ ಯೂನಸ್ ನೇತೃತ್ವದ ಆಡಳಿತವು ಅಲ್ಪಸಂಖ್ಯಾತರನ್ನು ರಕ್ಷಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಲಾಗಿದೆ. ಈ ಘಟನೆಗಳ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಅಲ್ಪಸಂಖ್ಯಾತರ ವಿರುದ್ಧ ನಡೆಯುತ್ತಿರುವ ದ್ವೇಷವನ್ನು ಗಂಭೀರ ವಿಷಯವೆಂದು ಬಣ್ಣಿಸಿದೆ. ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಸಂಘಟನೆಗಳು ಬಾಂಗ್ಲಾದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಮತ್ತು ಅಲ್ಪಸಂಖ್ಯಾತರ ಮೇಲೆ ಹೆಚ್ಚುತ್ತಿರುವ ದಾಳಿಗಳನ್ನು ಖಂಡಿಸಿವೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:52 am, Tue, 6 January 26