ಓಮನ್ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಪ್ರಧಾನಿ ಮೋದಿ ಓಮನ್ನಲ್ಲಿ ಅನಿವಾಸಿ ಭಾರತೀಯರ ಜೊತೆ ಸಂವಾದ ನಡೆಸಿದರು. ಈ ವೇಳೆ ಅವರು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡಿದರು ಮತ್ತು ಓಮನ್‌ನ ಮಸ್ಕತ್‌ನಲ್ಲಿ ನಡೆದ ಸಮುದಾಯ ಕಾರ್ಯಕ್ರಮದಲ್ಲಿ ಭಾರತೀಯ ವಲಸಿಗರ ಕೊಡುಗೆಗಳನ್ನು ಗೌರವಿಸಿದರು. "ಭಾರತ್ ಮಾತಾ ಕಿ ಜೈ", "ವಂದೇ ಮಾತರಂ" ಮತ್ತು "ಮೋದಿ," ಎಂಬ ಘೋಷಣೆಗಳೊಂದಿಗೆ ಉತ್ಸಾಹದಿಂದ ಸ್ವಾಗತಿಸಲಾಯಿತು.
ಮಸ್ಕತ್, ಡಿಸೆಂಬರ್ 18: ಪ್ರಧಾನಿ ನರೇಂದ್ರ ಮೋದಿಯವರ (PM Modi Oman Visit) ಹವಾ ಭಾರತದಲ್ಲಿ ಮಾತ್ರವಲ್ಲ ವಿದೇಶದಲ್ಲೂ ಜೋರಾಗೇ ಇದೆ. ಓಮನ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಧಾನಿ ಮೋದಿ ಮಸ್ಕತ್‌ನಲ್ಲಿ ಭಾರತೀಯ ಸಮುದಾಯದ ಸದಸ್ಯರು ಮತ್ತು ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಂವಾದದ ಸಮಯದಲ್ಲಿ ಅಲ್ಲಿ ಯಾವ ಮಟ್ಟಿಗಿನ ನಮೋ ಕ್ರೇಜ್ ಇದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.
ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಅನಿವಾಸಿ ಭಾರತೀಯರು “ಮೋದಿ, ಮೋದಿ”, “ಭಾರತ್ ಮಾತಾ ಕಿ ಜೈ” ಎಂದು ಜೋರಾಗಿ ಘೋಷಣೆಗಳನ್ನು ಕೂಗುತ್ತಾ ತಮ್ಮ ಹರ್ಷವನ್ನು ವ್ಯಕ್ತಪಡಿಸಿದರು. ಇದನ್ನು ನೋಡಿ ಪ್ರಧಾನಿ ಮೋದಿ ಕೂಡ ಸಂತಸಗೊಂಡರು. ‘ಮೈತ್ರಿ ಪರ್ವ್’ ಎಂಬ ಹೆಸರಿನ ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಓಮನ್‌ನಲ್ಲಿರುವ ಭಾರತೀಯ ವಲಸಿಗರನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದ ಬಳಿಕ ಅಲ್ಲಿ ಸೇರಿದ್ದ ಭಾರತೀಯರು ಪ್ರಧಾನಿ ಮೋದಿಯವರ ಜೊತೆ ಫೋಟೋ ತೆಗೆಸಿಕೊಂಡು, ಶೇಕ್ ಹ್ಯಾಂಡ್ ಮಾಡಿ, ತಬ್ಬಿಕೊಂಡು ತಮ್ಮ ಖುಷಿಯನ್ನು ವ್ಯಕ್ತಪಡಿಸಿದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಬಿಗ್ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್‌ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು

