AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ, ಅಧ್ಯಕ್ಷ ಟ್ರಂಪ್ ಸ್ನೇಹವು ಇದಕ್ಕಿಂತ ಹತ್ತಿರವಾಗಲು ಸಾಧ್ಯವಿಲ್ಲ: ರೂಬಿಯೊ

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ, ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಟ್ರಂಪ್ ನಡುವಿನ ಗಾಢ ಸ್ನೇಹವನ್ನು ಶ್ಲಾಘಿಸಿದ್ದಾರೆ. ಮೋದಿಯವರ ದೃಢ ನಾಯಕತ್ವದಲ್ಲಿ ಭಾರತವು ಜಾಗತಿಕ ವೇದಿಕೆಯಲ್ಲಿ ಪ್ರಬಲ ಶಕ್ತಿಯಾಗಿ ಹೊರಹೊಮ್ಮಿದೆ ಎಂದು ಅವರು ಹೇಳಿದ್ದಾರೆ. ಭಾರತ-ಅಮೆರಿಕ ಕಾರ್ಯತಂತ್ರದ ಪಾಲುದಾರಿಕೆಯು ಆರ್ಥಿಕತೆ, ಭದ್ರತೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಬಲಿಷ್ಠವಾಗಿದೆ. ಭಾರತೀಯ ಅಮೆರಿಕನ್ನರು ಉಭಯ ದೇಶಗಳ ಸ್ನೇಹಕ್ಕೆ ಮಹತ್ವದ ಕೊಡುಗೆ ನೀಡುತ್ತಿದ್ದಾರೆ.

ಪ್ರಧಾನಿ ಮೋದಿ, ಅಧ್ಯಕ್ಷ ಟ್ರಂಪ್ ಸ್ನೇಹವು ಇದಕ್ಕಿಂತ ಹತ್ತಿರವಾಗಲು ಸಾಧ್ಯವಿಲ್ಲ: ರೂಬಿಯೊ
ಟ್ರಂಪ್-ಮೋದಿ
ನಯನಾ ರಾಜೀವ್
|

Updated on: Jun 27, 2026 | 3:13 PM

Share

ಮುಖ್ಯಾಂಶಗಳು

  • ಮೋದಿ ಹಾಗೂ ಟ್ರಂಪ್ ನಡುವಿನ ಸ್ನೇಹವು ಅತ್ಯಂತ ಆಪ್ತವಾಗಿದೆ ಎಂದ ರೊಬಿಯೊ
  • ಭಾರತ ಮತ್ತು ಅಮೆರಿಕ ಜಾಗತಿಕವಾಗಿ ಪ್ರಮುಖ ಕ್ಷೇತ್ರಗಳಲ್ಲಿ ಒಟ್ಟಾಗಿ ಕೆಲಸ ಮಾಡುತ್ತಿವೆ
  • ಅಮೆರಿಕದಲ್ಲಿರುವ ಭಾರತೀಯ ಸಮುದಾಯವು ಉಭಯ ದೇಶಗಳ ಬಾಂಧವ್ಯದ ಪ್ರಮುಖ ಕೊಂಡಿಯಾಗಿದೆ

ವಾಷಿಂಗ್ಟನ್, ಜೂನ್ 27: ಭಾರತವನ್ನು ಜಾಗತಿಕ ವೇದಿಕೆಯಲ್ಲಿ ಅತ್ಯಂತ ಪ್ರಭಾವಶಾಲಿ ಶಕ್ತಿಯನ್ನಾಗಿ ರೂಪಿಸಿರುವ ಪ್ರಧಾನಿ ನರೇಂದ್ರ ಮೋದಿ(Narendra Modi)ಯವರ ದೃಢ ನಾಯಕತ್ವವನ್ನು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಅವರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಅತ್ಯಂತ ಆಪ್ತ ಉನ್ನತ ರಾಜತಾಂತ್ರಿಕರಾಗಿರುವ ರೂಬಿಯೊ, ಅಮೆರಿಕ ಅಧ್ಯಕ್ಷರು ಮತ್ತು ಭಾರತದ ಪ್ರಧಾನಿ ನಡುವಿನ ಸ್ನೇಹ ಸಂಬಂಧವು ಇದಕ್ಕಿಂತ ಹತ್ತಿರವಾಗಲು ಸಾಧ್ಯವೇ ಇಲ್ಲ ಎಂಬಷ್ಟು ಗಟ್ಟಿಯಾಗಿದೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿಯವರ ಅಪಾರ ಅಭಿಮಾನಿಗಳು ನಾವು ಶ್ವೇತಭವನದಲ್ಲಿ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ, ಟ್ರಂಪ್ ಆಡಳಿತವು ಭಾರತವನ್ನು ತನ್ನ ಅತ್ಯಂತ ಆಪ್ತ ಹಾಗೂ ಕಾರ್ಯತಂತ್ರದ ಪಾಲುದಾರ ರಾಷ್ಟ್ರವಾಗಿ ನೋಡುತ್ತಿದೆ ಎಂದು ಸ್ಪಷ್ಟಪಡಿಸಿದರು.

ಭಾರತವು ಅಮೆರಿಕದ ಅತ್ಯಂತ ನಿಕಟ ಮಿತ್ರ ರಾಷ್ಟ್ರವಾಗಿದೆ. ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಟ್ರಂಪ್ ನಡುವಿನ ವೈಯಕ್ತಿಕ ಬಾಂಧವ್ಯವು ರಾಜತಾಂತ್ರಿಕತೆಯಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ.ನಾವೆಲ್ಲರೂ ಪ್ರಧಾನಿ ಮೋದಿಯವರ ಅಪಾರ ಅಭಿಮಾನಿಗಳು. ಅವರ ನಾಯಕತ್ವದಲ್ಲಿ ಭಾರತವು ಅದ್ಭುತ ಆರ್ಥಿಕ ಪ್ರಗತಿಯನ್ನು ಸಾಧಿಸುತ್ತಿದೆ.

ಮತ್ತಷ್ಟು ಓದಿ: ಸೆಶೆಲ್ಸ್ ರಾಷ್ಟ್ರೀಯ ದಿನಾಚರಣೆಗೆ ಪ್ರಧಾನಿ ಮೋದಿ ಮುಖ್ಯ ಅತಿಥಿ; ಜೂನ್ 27ರಿಂದ ದ್ವೀಪ ರಾಷ್ಟ್ರಕ್ಕೆ ಪ್ರವಾಸ

ಭಾರತದ ಬೆಳೆಯುತ್ತಿರುವ ಜಾಗತಿಕ ಪ್ರಭಾವವು ನವದೆಹಲಿ ಮತ್ತು ವಾಷಿಂಗ್ಟನ್ ನಡುವಿನ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸಿದೆ ಎಂದು ರೂಬಿಯೊ ಅಭಿಪ್ರಾಯಪಟ್ಟಿದ್ದಾರೆ. ಭಾರತ ಮತ್ತು ಅಮೆರಿಕ ದೇಶಗಳು ಜಾಗತಿಕ ಅರ್ಥಶಾಸ್ತ್ರ, ಪೂರೈಕೆ ಸರಪಳಿ ನಿರ್ಣಾಯಕ ಖನಿಜಗಳು, ಹಸಿರು ಇಂಧನ, ಜಾಗತಿಕ ಭದ್ರತೆ ಹಾಗೂ ಸಮುದ್ರಯಾನದ ಸ್ವಾತಂತ್ರ್ಯದಂತಹ ಪ್ರಮುಖ ಕ್ಷೇತ್ರಗಳಲ್ಲಿ ಒಟ್ಟಾಗಿ ಕೆಲಸ ಮಾಡುತ್ತಿವೆ.

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ (ಭಾರತ) ಮತ್ತು ವಿಶ್ವದ ಅತ್ಯಂತ ಹಳೆಯ ಪ್ರಜಾಪ್ರಭುತ್ವ (ಅಮೆರಿಕ) ಒಟ್ಟಾಗಿ ಜಾಗತಿಕ ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ಪ್ರಮುಖ ಶಕ್ತಿಯಾಗಿ ಹೊರಹೊಮ್ಮುತ್ತಿವೆ ಎಂದು ಅವರು ಒತ್ತಿ ಹೇಳಿದರು.

ಅಮೆರಿಕದಲ್ಲಿ ನೆಲೆಸಿರುವ ಭಾರತೀಯ ಮೂಲದ ಅಮೆರಿಕನ್ನರ ಕೊಡುಗೆಯನ್ನು ರೂಬಿಯೊ ಇದೇ ವೇಳೆ ವಿಶೇಷವಾಗಿ ನೆನಪಿಸಿಕೊಂಡರು. ಅಮೆರಿಕದಲ್ಲಿ ಅತ್ಯಂತ ಬಲಿಷ್ಠವಾಗಿ ಬೆಳೆದಿರುವ ಭಾರತೀಯ ಅಮೆರಿಕನ್ ಸಮುದಾಯವು ಉಭಯ ದೇಶಗಳ ನಡುವಿನ ಸ್ನೇಹದ ಪ್ರಮುಖ ಕೊಂಡಿಯಾಗಿದೆ. ಅವರು ತಮ್ಮ ಶ್ರಮ ಮತ್ತು ಸಂಸ್ಕೃತಿಯ ಮೂಲಕ ಅಮೆರಿಕ ದೇಶವನ್ನು ಹಲವು ವಿಧಗಳಲ್ಲಿ ಶ್ರೀಮಂತಗೊಳಿಸಿದ್ದಾರೆ ಎಂದು ಅವರು ಪ್ರಶಂಸಿಸಿದರು. ಟ್ರಂಪ್ ನೇತೃತ್ವದ ನೂತನ ಆಡಳಿತದಲ್ಲಿ ಭಾರತಕ್ಕೆ ಸಿಗುತ್ತಿರುವ ಈ ಅಭೂತಪೂರ್ವ ಗೌರವವು ಜಾಗತಿಕ ರಾಜಕಾರಣದಲ್ಲಿ ಭಾರತದ ಮೌಲ್ಯವನ್ನು ಮತ್ತಷ್ಟು ಹೆಚ್ಚಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಬಿಗ್ ಬಾಸ್ ಮನೆಯಿಂದ ಮಂಜ ಔಟ್: ಅಶ್ಲೀಲವಾಗಿ ಮಾತಾಡಿದ್ದಕ್ಕೆ ಶಿಕ್ಷೆ
ಬಿಗ್ ಬಾಸ್ ಮನೆಯಿಂದ ಮಂಜ ಔಟ್: ಅಶ್ಲೀಲವಾಗಿ ಮಾತಾಡಿದ್ದಕ್ಕೆ ಶಿಕ್ಷೆ
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ