AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ್ದು ಆಕ್ರಮಣದ ಇತಿಹಾಸವಲ್ಲ, ಜ್ಞಾನ ಹಂಚಿದ ಪರಂಪರೆ: ಭಾರತ ಮಹಾಶಕ್ತಿಯಲ್ಲ, ಜಗತ್ತಿಗೆ ವಿಶ್ವಗುರು ಎಂದ ಭಾಗವತ್

ಕೆನಡಾದಲ್ಲಿ ಆರ್‌ಎಸ್‌ಎಸ್ ಸರಸಂಘ ಚಾಲಕ ಮೋಹನ್ ಭಾಗವತ್ ಮಾತನಾಡಿ, ಭಾರತದ ಇತಿಹಾಸವು ಆಕ್ರಮಣದ್ದಲ್ಲ, ಜ್ಞಾನ ಹಂಚಿಕೆಯ ಪರಂಪರೆ ಎಂದು ಹೇಳಿದರು. ಹಿಂದೂ ಧರ್ಮವು ಜಗತ್ತನ್ನು ಒಗ್ಗೂಡಿಸುತ್ತದೆ, ವಿಭಜಿಸುವುದಿಲ್ಲ. 'ವಸುಧೈವ ಕುಟುಂಬಕಂ' ಪರಿಕಲ್ಪನೆಯಡಿ ಭಾರತವು ಯಾವಾಗಲೂ ಜಗತ್ತನ್ನು ಕುಟುಂಬವೆಂದು ಪರಿಗಣಿಸಿದೆ. ವೈವಿಧ್ಯತೆಯಲ್ಲಿ ಏಕತೆಯನ್ನು ಗೌರವಿಸುವ ಭಾರತದ ಪರಂಪರೆ ವಿಶ್ವಕ್ಕೆ ವಿಶ್ವಗುರು ಸ್ಥಾನ ನೀಡಿದೆ.

ಭಾರತದ್ದು ಆಕ್ರಮಣದ ಇತಿಹಾಸವಲ್ಲ, ಜ್ಞಾನ ಹಂಚಿದ ಪರಂಪರೆ: ಭಾರತ ಮಹಾಶಕ್ತಿಯಲ್ಲ, ಜಗತ್ತಿಗೆ ವಿಶ್ವಗುರು ಎಂದ ಭಾಗವತ್
ಮೋಹನ್ ಭಾಗವತ್
ನಯನಾ ರಾಜೀವ್
|

Updated on: Aug 31, 2026 | 9:46 AM

Share

ಟೊರೊಂಟೊ, ಆಗಸ್ಟ್ 31: “ಹಿಂದೂ ಧರ್ಮವು ಇಡೀ ಜಗತ್ತನ್ನು ಒಂದುಗೂಡಿಸುವ ಶಕ್ತಿಯೇ ಹೊರತು ಸಮಾಜವನ್ನು ವಿಭಜಿಸುವ ಶಕ್ತಿಯಲ್ಲ. ಭಾರತೀಯ ಪರಂಪರೆಯಲ್ಲಿ ಇತರರಿಗೆ ಸಹಾಯ ಮಾಡುವುದು ಮತ್ತು ಜಗತ್ತನ್ನು ಕುಟುಂಬವೆಂದು ಕಾಣುವುದು ಡಿಎನ್‌ಎಯಲ್ಲೇ ಬೇರೂರಿದೆ” ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘ ಚಾಲಕ ಮೋಹನ್ ಭಾಗವತ್(Mohan Bhagwat) ಹೇಳಿದ್ದಾರೆ.

ಕೆನಡಾದ ಟೊರೊಂಟೊದಲ್ಲಿ ‘ಕೆನಡಿಯನ್ ಹಿಂದೂಸ್ ಫಾರ್ ಔಟ್ರೀಚ್, ರಿಲೇಶನ್ಸ್ ಅಂಡ್ ಡೈಲಾಗ್’ (CHORD) ಆಯೋಜಿಸಿದ್ದ ಸಮಾವೇಶವನ್ನುದ್ದೇಶಿಸಿ ಅವರು ಮಾತನಾಡಿದರು.

ಸೀಮಿತ ಚೌಕಟ್ಟಲ್ಲ: ‘ಹಿಂದೂ’ ಎಂಬ ಪದವನ್ನು ಕೇವಲ ಒಂದು ನಿರ್ದಿಷ್ಟ ಭಾಷೆ, ಪೂಜಾ ವಿಧಾನ ಅಥವಾ ಜೀವನಶೈಲಿಗೆ ಸೀಮಿತಗೊಳಿಸಲು ಸಾಧ್ಯವಿಲ್ಲ. ಹಿಂದೂ ತತ್ವಜ್ಞಾನವು ಪ್ರತಿಯೊಂದು ವೈವಿಧ್ಯತೆಯನ್ನು ಗೌರವಿಸುತ್ತದೆ ಮತ್ತು ಸ್ವೀಕರಿಸುತ್ತದೆ.

ಮತ್ತಷ್ಟು ಓದಿ: ವೈವಿಧ್ಯತೆಯಲ್ಲಿ ಏಕತೆಯೇ ಭಾರತ ಮತ್ತು ಅಮೆರಿಕದ ಡಿಎನ್‌ಎ: ಮೋಹನ್ ಭಾಗವತ್

ವೈವಿಧ್ಯತೆಯೇ ಅಲಂಕಾರ: ಸಮಾಜದಲ್ಲಿ ನೂರಾರು ಭಾಷೆಗಳು, ಜಾತಿಗಳು ಮತ್ತು ಧರ್ಮಗಳಿರುವುದು ಸಹಜ. ಆದರೆ ಆ ಎಲ್ಲಾ ವೈವಿಧ್ಯತೆಯ ಆಧಾರವಾಗಿರುವ ಆಂತರಿಕ ಏಕತೆಯೇ ಅಂತಿಮ ಸತ್ಯ ಎಂದು ಭಾಗವತ್ ವಿಶ್ಲೇಷಿಸಿದರು.

ಆಕ್ರಮಣ ಮಾಡದ ದೇಶ: ಭಾರತದ ಪೂರ್ವಜರು ಮೆಕ್ಸಿಕೋದಿಂದ ಸೈಬೀರಿಯಾವರೆಗೆ, ಹಿಮಾಲಯದಿಂದ ಆಗ್ನೇಯ ಏಷ್ಯಾದವರೆಗೆ ಸಂಚರಿಸಿದರೂ ಯಾವುದೇ ಭೂಪ್ರದೇಶವನ್ನು ವಶಪಡಿಸಿಕೊಳ್ಳಲಿಲ್ಲ. ಬದಲಿಗೆ ಆಯುರ್ವೇದ, ಖಗೋಳಶಾಸ್ತ್ರ ಮತ್ತು ನಾಗರಿಕತೆಯ ಜ್ಞಾನವನ್ನು ಮಾತ್ರ ಧಾರೆ ಎರೆದರು.

ವಿಡಿಯೋ

ನಿರಾಶ್ರಿತರಿಗೆ ಸದಾ ಆಶ್ರಯ: ಎರಡನೇ ಮಹಾಯುದ್ಧದಲ್ಲಿ ಪೋಲಿಷ್ ನಿರಾಶ್ರಿತರಿಗೆ ಜಾಮ್‌ನಗರದ ಮಹಾರಾಜರು ಆಶ್ರಯ ನೀಡಿದ್ದನ್ನು ಸ್ಮರಿಸಿದ ಅವರು, ಪಾರ್ಸಿಗಳು, ಯಹೂದಿಗಳು, ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರಿಗೆ ಭಾರತ ಸದಾ ಸುರಕ್ಷಿತ ನೆಲೆ ಒದಗಿಸಿದೆ ಎಂದರು.

ಕೇಳದಿದ್ದರೂ ನೆರವು ನೀಡುವ ಗುಣ: ವಿಶ್ವದ ಯಾವುದೇ ಮೂಲೆಯಲ್ಲಿ ಬಿಕ್ಕಟ್ಟು ಎದುರಾದರೂ ಭಾರತ ಕೇಳದೆ ಸಹಾಯಹಸ್ತ ಚಾಚುತ್ತದೆ. ಇತ್ತೀಚಿನ ಯುದ್ಧ ಪೀಡಿತ ಪ್ರದೇಶಗಳಿಂದ ಭಾರತೀಯರಲ್ಲದೆ 7ಕ್ಕೂ ಹೆಚ್ಚು ವಿದೇಶಿ ಪ್ರಜೆಗಳನ್ನು ರಕ್ಷಿಸಿರುವುದೇ ಇದಕ್ಕೆ ಸಾಕ್ಷಿ.

ವಿಡಿಯೋ

ಹಿಂದೂಗಳ ಜಾಗೃತಿ: ಮುಕ್ತ ಮನಸ್ಸಿನ ಸಮಾಜ ನಿರ್ಮಾಣಕ್ಕಾಗಿ ‘ವಸುಧೈವ ಕುಟುಂಬಕಂ’ ಪರಿಕಲ್ಪನೆ ಅನಿವಾರ್ಯವಾಗಿದ್ದು, ಹಿಂದೂಗಳು ಜಾಗೃತರಾದರೆ ಇಡೀ ಜಗತ್ತೇ ಜಾಗೃತಗೊಳ್ಳಲಿದೆ ಎಂದು ಅವರು ನುಡಿದರು.

ಈ ಬೃಹತ್ ಸಮಾವೇಶದಲ್ಲಿ ಕೆನಡಾದ ೮ ಪ್ರಾಂತ್ಯಗಳಿಂದ 2,500 ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದರು. ಕೆನಡಾದ ಮಾಜಿ ರಕ್ಷಣಾ ಸಚಿವ ಹಾಗೂ ಆಲ್ಬರ್ಟಾದ ಮಾಜಿ ಪ್ರೀಮಿಯರ್ ಜೇಸನ್ ಕೆನ್ನಿ ಸೇರಿದಂತೆ ಹಲವು ಅಂತಾರಾಷ್ಟ್ರೀಯ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
‘ಬಿಗ್ ಬಾಸ್ ಕನ್ನಡ ಸೀಸನ್ 13’: ಕಿಚ್ಚ ಸುದೀಪ್ ಪಡೆದ ಸಂಭಾವನೆ ಎಷ್ಟು?
‘ಬಿಗ್ ಬಾಸ್ ಕನ್ನಡ ಸೀಸನ್ 13’: ಕಿಚ್ಚ ಸುದೀಪ್ ಪಡೆದ ಸಂಭಾವನೆ ಎಷ್ಟು?
ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್
ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್
ಎಫ್​ಐಆರ್ ಬೆನ್ನಲ್ಲೇ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಜೋಶಿ ವಾಗ್ದಾಳಿ
ಎಫ್​ಐಆರ್ ಬೆನ್ನಲ್ಲೇ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಜೋಶಿ ವಾಗ್ದಾಳಿ
ಇಂದು ಹೇರಂಭ ಸಂಕಷ್ಟ ಚತುರ್ಥಿ; ಸಿಂಹವಾಹನಸ್ಥ ವಿನಾಯಕನ ಆರಾಧನೆಯ ದಿನ
ಇಂದು ಹೇರಂಭ ಸಂಕಷ್ಟ ಚತುರ್ಥಿ; ಸಿಂಹವಾಹನಸ್ಥ ವಿನಾಯಕನ ಆರಾಧನೆಯ ದಿನ
ಪ್ರಕಾಶ್ ರಾಜ್​​​ಗೆ ಘೇರಾವ್ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ವಶಕ್ಕೆ
ಪ್ರಕಾಶ್ ರಾಜ್​​​ಗೆ ಘೇರಾವ್ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ವಶಕ್ಕೆ
ಮೋದಿ ಮೆಚ್ಚಿದ ಬೆಂಗಳೂರಿನ ನಿಂಗಮ್ಮನಿಗೆ ಒತ್ತುವರಿ ತೆರವು ಭಯ!
ಮೋದಿ ಮೆಚ್ಚಿದ ಬೆಂಗಳೂರಿನ ನಿಂಗಮ್ಮನಿಗೆ ಒತ್ತುವರಿ ತೆರವು ಭಯ!
ಬಿಗ್​​ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?
ಬಿಗ್​​ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!
ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!
Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್